ಧಾರ್ಮಿಕ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆ

ಧಾರ್ಮಿಕ ಕೇಂದ್ರಗಳ ವೈಶಿಷ್ಟ್ಯ ಸಾರಲು ರೈಲು, ಬಸ್‌ ನಿಲ್ದಾಣಗಳಲ್ಲಿ ಕೌಂಟರ್‌ ತೆರೆಯುವ ಚಿಂತನೆ

Team Udayavani, Feb 21, 2020, 11:20 PM IST

kala-35

ಸಾಮಾಜಿಕ ತಾಣದಲ್ಲಿ ಪ್ರಕಟಿಸಲಾಗಿರುವ ಮರೋಳಿ ಸೂರ್ಯನಾರಾಯಣ ದೇಗುಲದ ಒಳನೋಟ.

ಮಹಾನಗರ: ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಿ ಪ್ರವಾಸಿಗರನ್ನು ಆಕರ್ಷಿಸುವುದಕ್ಕೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಸಾಮಾಜಿಕ ತಾಣಗಳ ಮೊರೆ ಹೋಗಿದ್ದಾರೆ. ಅದಕ್ಕಾಗಿ ಶಿವರಾತ್ರಿ ದಿನವಾದ ಶುಕ್ರವಾರದಿಂದ ಪುರಾತನ ಧಾರ್ಮಿಕ ಮಂದಿರಗಳ ವೈಶಿಷ್ಟ್ಯಗಳ ಬಗ್ಗೆ ರಾಜ್ಯದ ಮೂಲೆ ಮೂಲೆಗೂ ತಲುಪಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಗರದಲ್ಲಿ ಹಲವಾರು ಪುರಾತನ ದೇವಾಲಯ, ಚರ್ಚ್‌, ಮಸೀದಿಗಳಿವೆ. ಆದರೆ ಸ್ಥಳೀಯರು ಹೊರತುಪಡಿಸಿ ಮಾಹಿತಿ ಕೊರತೆಯಿಂದಾಗಿ ಧಾರ್ಮಿಕ ಸ್ಥಳಗಳಿಗೆ ತೆರಳುವ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಪ್ರಸ್ತುತ ಪ್ರಭಾವಿ ಮಾಧ್ಯಮವಾಗಿರುವ ಸಾಮಾಜಿಕ ತಾಣಗಳನ್ನೇ ಬಳಸಿಕೊಂಡು ನಗರದ ದೇವಸ್ಥಾನಗಳ ಇಂಚಿಂಚು ಮಾಹಿತಿಯನ್ನು ರಾಜ್ಯ, ಹೊರ ರಾಜ್ಯದ ಜನತೆಗೆ ತಿಳಿಸುವ ಉದ್ದೇಶದಿಂದ ಧಾರ್ಮಿಕ ಪ್ರವಾಸೋದ್ಯಮ ಪ್ರಚುರಪಡಿಸುವ ಚಿಂತನೆ ಶಾಸಕ ಡಿ. ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬಗ್ಗೆ ಶುಕ್ರವಾರ ಸಮಗ್ರ ಮಾಹಿತಿ-ಚಿತ್ರಣವನ್ನು ತಮ್ಮ ಫೇಸ್ಬುಕ್‌ ಪೇಜ್‌ನಲ್ಲಿ ಪ್ರಕಟಿಸಿದ್ದಾರೆ.

ಧಾರ್ಮಿಕ ಸ್ಥಳಗಳ ಸಮಗ್ರ ಮಾಹಿತಿ
ಪುರಾತನ ಮತ್ತು ಕಾರ್ಣಿಕದ ದೇವಸ್ಥಾನ, ದೈವಸ್ಥಾನ, ಚರ್ಚ್‌, ಮಸೀದಿಗಳ ವೈಶಿಷ್ಟ್ಯ, ಇತಿಹಾಸ, ಅಲ್ಲಿನ ಕೆತ್ತನೆಗಳು, ವಿಶೇಷ ಹಬ್ಬ, ಆಚರಣೆಗಳು, ಪೂಜಾದಿ ವಿಶೇಷಗಳು, ಆ ಧಾರ್ಮಿಕ ಕೇಂದ್ರಕ್ಕೆ ತೆರಳುವ ರೂಟ್‌ಮ್ಯಾಪ್‌ ಸಹಿತ ಆ ಧಾರ್ಮಿಕ ಕೇಂದ್ರದ ಸಮಗ್ರ ಮಾಹಿತಿಗಳನ್ನು ಸಾಮಾಜಿಕ ತಾಣಗಳಾದ ಟ್ವಿಟರ್‌, ಫೇಸ್ಬುಕ್‌, ಇನ್‌ಸ್ಟಾಗ್ರಾಂಗಳಲ್ಲಿ ಪ್ರಕಟಿಸಿ, ಹೆಚ್ಚು ಶೇರ್‌ ಆಗುವಂತೆ ನೋಡಿಕೊಳ್ಳಲಾಗುತ್ತದೆ. ಫೇಸ್ಬುಕ್‌ ಪೇಜ್‌ಗಳಲ್ಲಿ ಹಲವಾರು ಮಂದಿ ಫಾಲೋವರ್ಗಳಿರು ವುದರಿಂದ ಈ ಮಾಹಿತಿ ರಾಜ್ಯ ಮಾತ್ರವಲ್ಲ, ಹೊರ ರಾಜ್ಯದ ಮಂದಿಗೂ ತಲುಪುತ್ತದೆ. ಆ ಮೂಲಕ ನಗರದ ದೇವಾಲಯಗಳಿಗೆ ಪ್ರವಾಸಿಗರು ಬರುವುದಕ್ಕೆ ಅವಕಾಶ ನೀಡುವುದು ಉದ್ದೇಶ.

ರೈಲು, ಬಸ್‌ ನಿಲ್ದಾಣಗಳ ಮೂಲಕ ಜನ ಸಂಚಾರ ಹೆಚ್ಚಿರುವುದರಿಂದ ಇಂತಹ ಕಡೆಗಳಲ್ಲಿ ಧಾರ್ಮಿಕ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ನೀಡುವ ಕೌಂಟರ್‌ ತೆರೆಯುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ರೈಲು ನಿಲ್ದಾಣದಿಂದ ಯಾವ ಧಾರ್ಮಿಕ ಕೇಂದ್ರಕ್ಕೆ ಎಷ್ಟು ದೂರ ಇದೆ ಎಂಬುವುದನ್ನೂ ತಿಳಿಸಲಾಗುತ್ತದೆ. ಇದರಿಂದ ರೈಲು ಮುಖಾಂತರ ಇತರೆಡೆ ಗಳಿಗೆ ತೆರಳಬೇಕಾ ದವರು ನಿಲ್ದಾಣ ದಲ್ಲಿ ಕುಳಿತುಕೊಳ್ಳುವ ಬದಲು ಧಾರ್ಮಿಕ ಕೇಂದ್ರಗಳನ್ನು ವೀಕ್ಷಿಸಲು ಸಹಕಾರಿಯಾಗುತ್ತದೆ ಎನ್ನುತ್ತಾರೆ ಶಾಸಕರು. ಲಾಡ್ಜ್ಗಳಲ್ಲಿ ಹೊರಭಾಗದ ಪ್ರವಾಸಿಗರು ಉಳಿದುಕೊಳ್ಳುವುದರಿಂದ ವಿವಿಧ ಲಾಡ್ಜ್ಗಳ ಮಾಲಕರ ಜತೆ ಚರ್ಚಿಸಿ ಅಲ್ಲಿಯೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಫಲಕಗಳನ್ನು ಹಾಕುವ ಬಗ್ಗೆ ಚಿಂತನೆ  ನಡೆಯುತ್ತಿವೆ.

ಧಾರ್ಮಿಕ ಪ್ರವಾಸಿ ತಾಣಗಳ ಮಾಹಿತಿ
ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರೊಂದಿಗೆ ನಮ್ಮ ನಗರದ ಪುರಾತನ ಧಾರ್ಮಿಕ ಕೇಂದ್ರಗಳ ವೈಶಿಷ್ಟ್ಯವನ್ನು ರಾಜ್ಯ, ದೇಶದ ಉದ್ದಗಲಕ್ಕೂ ತಲುಪಿಸುವ ಉದ್ದೇಶವಿದೆ. ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಈ ಕೆಲಸ ಮಾಡಲಾಗುವುದು. ಶಿವರಾತ್ರಿ ದಿನದಿಂದ ಈ ಕೆಲಸ ಅಧಿಕೃತ ಆರಂಭ ಕಂಡಿದೆ. ರೈಲು, ಬಸ್‌ ನಿಲ್ದಾಣಗಳಲ್ಲಿ ಕೌಂಟರ್‌ ತೆರೆದು ಅಲ್ಲಿಯೂ ಧಾರ್ಮಿಕ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಪಸರಿಸುವ ಉದ್ದೇಶವಿದೆ.
– ಡಿ. ವೇದವ್ಯಾಸ ಕಾಮತ್‌, ಶಾಸಕರು

ಮೂಲ ಸೌಕರ್ಯಕ್ಕೆ ಆದ್ಯತೆ
ಪ್ರವಾಸಿಗರನ್ನು ಆಕರ್ಷಿಸುವುದರೊಂದಿಗೆ ಅವರಿಗೆ ಧಾರ್ಮಿಕ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನೂ ಒದಗಿಸುಕೊಡುವ ನಿಟ್ಟಿನಲ್ಲಿಯೂ ಚಿಂತನೆ ನಡೆಯಲಿದೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದೆಡೆ ಅದನ್ನೂ ಕಲ್ಪಿಸಿಕೊಡಲಾಗುತ್ತದೆ.

ಟಾಪ್ ನ್ಯೂಸ್

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.