ಹಳ್ಳಿ ಗ್ರಂಥಾಲಯಗಳಿಗೆ ಹೈಟೆಕ್ ಸ್ಪರ್ಶ
Team Udayavani, Feb 22, 2020, 3:10 AM IST
ಬೆಂಗಳೂರು: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ಕೊಟ್ಟು, ಅವುಗಳನ್ನು ಓದುಗ ಸ್ನೇಹಿ ಮತ್ತು ಜನಸ್ನೇಹಿ ಜ್ಞಾನ ಕೇಂದ್ರಗಳನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ “ನೀಲನಕ್ಷೆ’ ರೂಪಿಸಿದೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧೀನದಲ್ಲಿದ್ದ ಗ್ರಾಮೀಣ ಪ್ರದೇಶದ ಸುಮಾರು 5,766 ಗ್ರಂಥಾಲಯಗಳನ್ನು ಕಳೆದ ವರ್ಷ ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಿತ್ತು. ಅದರಂತೆ, ಈಗ ಗ್ರಂಥಾಲಯಗಳ ನಿರ್ವಹಣೆ ಗ್ರಾಮ ಪಂಚಾಯಿತಿಗಳ ಪಾಲಿಗೆ ಬಂದಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯಗಳಿಗೆ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಹೊಸ ಪುಸ್ತಕಗಳು, ಕಂಪ್ಯೂಟರ್‌ಗಳು, ಪಿಠೊಪಕರಣಗಳು ಇತ್ಯಾದಿ ಸೌಕರ್ಯಗಳನ್ನು ಒದಗಿಸಲು, ಗ್ರಾಮದ ಯುವಕ-ಯುವತಿಯರು, ಗೃಹಿಣಿಯರು, ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಸದುಪಯೋಗವಾಗುವಂತೆ ಮಾಡಲು “ನೀಲನಕ್ಷೆ’ ರೂಪಿಸಲಾಗಿದೆ.
ಇದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರದ ಹಂತದಲ್ಲಿ ರಾಜ್ಯ ಮಟ್ಟದಲ್ಲಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಸಲಹಾ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಮಟ್ಟದ ಸಲಹಾ ಸಮಿತಿಯಲ್ಲಿ ಪಂಚಾಯತ್‌ರಾಜ್ ಇಲಾಖೆ ನಿರ್ದೇಶಕರ ನೇತೃತ್ವದಲ್ಲಿ ವಿವಿಧ ಐದು ಮಂದಿ ಸದಸ್ಯರಿದ್ದಾರೆ. ಪಂಚಾಯಿತಿ ಮಟ್ಟದ ಸಮಿತಿಗೆ ಆಯಾ ಪಂಚಾಯಿತಿಯ ಅಧ್ಯಕ್ಷರು ಮುಖಸ್ಥರಾಗಿರುತ್ತಾರೆ.
ಗ್ರಂಥಾಲಯಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜ್ಞಾನ ಕೇಂದ್ರಗಳಾಗಿ ಕೆಲಸ ಮಾಡಿದ್ದಲ್ಲಿ ಎಲ್ಲಾ ವರ್ಗದ ಜನರಿಗೆ ಅವಶ್ಯವಿರುವ ಮಾಹಿತಿಗಳು ಸ್ಥಳೀಯವಾಗಿ ಲಭ್ಯವಾಗುವಂತೆ ಮಾಡಬಹುದಾಗಿದೆ. ಅಲ್ಲದೇ ಸ್ಥಳೀಯ ಸಂಘ-ಸಂಸ್ಥೆಗಳು, ಗ್ರಾಮದ ಉದ್ಯೋಗಸ್ಥ ವ್ಯಕ್ತಿಗಳು, ಉದ್ಯಮಿಗಳಿಂದಲೂ ಸಹ ವಂತಿಕೆ ರೂಪದಲ್ಲಿ ನೆರವು ಪಡೆದುಕೊಳ್ಳಲು ಅವಕಾಶವಿರುತ್ತದೆ. ಈ ನಿಟ್ಟಿನಲ್ಲಿ ಎರಡೂ ಸಮಿತಿಗಳು ಕೆಲಸ ಮಾಡಲಿವೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಸಮಿತಿಯ ಜವಾಬ್ದಾರಿಗಳು: ರಾಜ್ಯ ಮಟ್ಟದ ಸಮಿತಿಯು ಗ್ರಂಥಾಲಯಗಳ ಕಟ್ಟಡ, ಪಿಠೊಪಕರಣ ಮತ್ತಿತರ ಮೂಲಸೌಕರ್ಯಗಳ ಸ್ವರೂಪ ಮತ್ತು ಗುಣಮಟ್ಟದ ನೀಲನಕ್ಷೆ ತಯಾರಿಸಬೇಕು. ಯಾವೆಲ್ಲ ಪುಸ್ತಕಗಳು ಇರಬೇಕು, ಡಿಜಿಟಲ್ ಮಾಡಿ ಯಾವ, ಯಾವ ಮಾಹಿತಿಗಳನ್ನು ಇರಿಸಬೇಕು ಎಂಬ ಬಗ್ಗೆ ಸಲಹೆ ನೀಡಬೇಕು.
ಓದುಗರ ಸಂಖ್ಯೆ ಹೆಚ್ಚಿಸಲು, ಓದುಗರ ಜೊತೆಗೆ ವಿಷಯವಾರು ಸಂವಾದ ಕಾರ್ಯಕ್ರಮ ಏರ್ಪಡಿಸಬೇಕು. ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ವ್ಯವಸ್ಥೆಗೆ ಸಲಹೆ ಕೊಡಬೇಕು. ಅದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಯು ಗ್ರಂಥಾಲಯಗಳಿಗೆ ಸಮರ್ಪಕ ಕಟ್ಟಡ, ಅವಶ್ಯಕ ಪಿಠೊಪಕರಣ, ಪುಸ್ತಕ, ದಿನಪತ್ರಿಕೆ ನಿಯತಕಾಲಿಕೆ, ಕಂಪ್ಯೂಟರ್‌ಗಳನ್ನು ಲಭ್ಯವಾಗುವಂತೆ ಮಾಡಬೇಕು.
ಗ್ರಂಥಾಲಯಗಳಲ್ಲಿ ಉದ್ಯೋಗ ಹಾಗೂ ಮತ್ತಿತರ ಅಗತ್ಯ ಮಾಹಿತಿಗಳ ಸಿಗುವಂತೆ ವ್ಯವಸ್ಥೆ ಮಾಡಬೇಕು. ಸ್ಥಳೀಯ ಸಾಹಿತಿಗಳು, ಕ್ರೀಡಾಪಟುಗಳು ಹಾಗೂ ಇತರೆ ಕ್ಷೇತ್ರಗಳಸಾಧಕರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಸಬೇಕು. ಓದುಗರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು. ಗ್ರಂಥಾಲಯಗಳು ಸ್ಥಳೀಯ ಎಲ್ಲಾ ರೀತಿಯಿಂದಲೂ ಉಪಯುಕ್ತವಾಗುವಂತೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ದಾನಿಗಳಿಂದ ನೆರವು: ಗ್ರಂಥಾಲಯಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ, ಪಂಚಾಯಿತಿಗಳು ಆಸ್ತಿ ತೆರಿಗೆ ಜತೆಗೆ ಸಂಗ್ರಹಿಸುವ ಗ್ರಂಥಾಲಯ ಉಪಕರದ ಹಣ, ಗ್ರಾಮ ಪಂಚಾಯಿತಿಗಳು ಸ್ವಂತ ಸಂಪನ್ಮೂಲಗಳಿಂದ ಖರ್ಚು ವೆಚ್ಚಗಳನ್ನು ಭರಿಸಿಕೊಳ್ಳಬೇಕು. ಇದಲ್ಲದೆ, ಸ್ಥಳೀಯ ದಾನಿಗಳಿಂದ ಹಣ, ಪುಸ್ತಕ, ಕಂಪ್ಯೂಟರ್, ಪಿಠೊಪಕರಣ ಇತ್ಯಾದಿ ರೂಪದಲ್ಲಿ ನೆರವು ಪಡೆದುಕೊಳ್ಳಬಹುದು. ಎರಡೂ ಸಮಿತಿಗಳು ಕನಿಷ್ಠ ತಿಂಗಳಿಗೊಮ್ಮೆ ಸಭೆ ಸೇರಿ ಅವಶ್ಯಕ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
* ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.