ತಮ್ಮ ಜಮೀನಿನಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣ: ವಿಷದ ಬಾಟಲಿ ಪ್ರದರ್ಶಿಸಿದ ರೈತ ಮಹಿಳೆಯರು
Team Udayavani, Feb 22, 2020, 5:10 PM IST
ವಿಜಯಪುರ: ತಮ್ಮ ಜಮೀನಿನಲ್ಲಿ ಸರ್ಕಾರ ವಿದ್ಯುತ್ ಸ್ಥಾವರ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ನಾಲವಾಡ ಬಳಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತ ಮಹಿಳೆಯರು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿ ವಿಷದ ಬಾಟಲಿ ಪ್ರದರ್ಶಿಸಿದ ಘಟನೆ ಜರುಗಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕ ಪೀರಾಪುರ-ಬೂದಿಹಾಳ ಏತ ನೀರಾವರಿ ಯೋಜನೆಗಾಗಿ ಸರ್ಕಾರ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಮುಂದಾಗಿರುವ ಜಮೀನು ತಮಗೆ ಸೇರಿದ್ದು. ಆದರೆ ಸರ್ಕಾರ ಅಕ್ರಮವಾಗಿ ತಮ್ಮ ಜಮೀನಿನಲ್ಲಿ ಸ್ಥಾವರ ನಿರ್ಮಿಸುತ್ತಿದೆ ಎಂದು ರೈತರು ಪ್ರತಿಭಟನೆ ಮುಂದಾಗಿದ್ದರು.
ಸರ್ಕಾರ ತಕ್ಷಣ ಸ್ಥಾವರ ನಿರ್ಮಾಣ ಸ್ಥಗಿತಗೊಳಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದರು.
ಸರ್ಕಾರ ಸ್ಪಂದಿಸದ ಕಾರಣ ಶನಿವಾರ ರೈತರು ವಿಷದ ಬಾಟಲಿ ಸಮೇತ ನಾಲತವಾಡ ಬಳಿಯ ಧರಣಿ ಸ್ಥಳಕ್ಕೆ ಬಂದಿದ್ದರು. ಇದರಲ್ಲಿ ಓರ್ವ ರೈತ ಮಹಿಳೆ ವಿಷ ಸೇವನೆಗೆ ಯತ್ನಿಸುತ್ತಲೇ ಸ್ಥಳದಲ್ಲಿದ್ದ ಪೊಲೀಸರು ವಿಷದ ಬಾಟಲಿ ಕಸಿದು, ರೈತರನ್ನು ಧರಣಿ ಸ್ಥಳದಿಂದ ಹೊರ ಹಾಕಿದರು.
ಈ ಹಂತದಲ್ಲಿ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಕೆಬಿಜೆಎನ್ಎಲ್ ಅಧಿಕಾರಿಗಳ ಸಮ್ಮುಖದಲ್ಲಿ ರೈತರೊಂದಿಗೆ ಚರ್ಚೆ ನಡೆಸಿದರು.
ಅಂತಿಮವಾಗಿ ರೈತರು ತಮ್ಮ ಜಮೀನು ಎನ್ನುವ ಕುರಿತು 15 ದಿನಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ಅಥವಾ ಆದೇಶ ತರಬೇಕು. 15 ದಿನಗಳಲ್ಲಿ ನ್ಯಾಯಾಲಯದ ಆದೇಶ ತರದಿದ್ದಲ್ಲಿ ಕಾಮಗಾರಿ ಮುಂದುವರೆಸುವುದಾಗಿ ಅಧಿಕಾರಿಗಳು ರೈತರಿಗೆ ಗಡುವು ನೀಡಿದರು. ಇದಕ್ಕೆ ಒಪ್ಪಿದ ರೈತರು ಧರಣಿ ಕೈಬಿಟ್ಟು, ಸ್ಥಳದಿಂದ ನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.