![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Feb 22, 2020, 6:01 PM IST
ಪಾವಗಡ: ರಾಜ್ಯ ಸರ್ಕಾರದಿಂದ ಮಂಜೂರು ಮಾಡಿದ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡದೆ ಎಸ್ ಬಿಐ ಬ್ಯಾಂಕ್‌ನ ಸಿಬ್ಬಂದಿ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಅರೋಪಿಸಿ ಹಸಿರು ಸೇನೆ ಹಾಗೂ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಾಲೂಕಿನ ಕೋಟಗುಡ್ಡ ಗ್ರಾಮದ ಎಸ್ ಬಿಐ ಬ್ಯಾಂಕ್ ಮುಂದೆ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಬ್ಯಾಂಕ್ ವ್ಯಾಪ್ತಿಯ 750 ರೈತರ ಖಾತೆಗೆ ಸರ್ಕಾರ ಸಾಲಮನ್ನಾ ಯೋಜನೆಯಡಿ ವರ್ಗಾಯಿಸಿದ್ದು, ಹಣವನ್ನು ಬ್ಯಾಂಕ್ ಸಿಬ್ಬಂದಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಮರಳಿಸಿದ್ದಾರೆ. ಇದರಿಂದ ಮಳೆ, ಬೆಳೆಯಿಲ್ಲದೆ ಪರದಾಡುತ್ತಿರುವ ರೈತರಿಗೆ ಅನ್ಯಾಯವಾಗಿದೆ. ಖಾತೆಗೆ ಹಣ ಬಂದಿದೆ ಸಾಲತೀರಿದೆ ಎಂದು ರೈತರು ನಿಟ್ಟುಸಿರು ಬಿಡುವ ಮುನ್ನವೇ ಬ್ಯಾಂಕ್ ವ್ಯವಸ್ಥಾಪಕರು ಸಾಲ ಮರು ಪಾವತಿ ಮಾಡುವಂತೆ ನೋಟಿಸ್ ನೀಡಿದ್ದಾರೆ. ಸಾಲ ಪೂರ್ಣ ಪಾವತಿಸುವಂತೆ ಬ್ಯಾಂಕ್ ವ್ಯವಸ್ಥಾಪಕ ರೈತರ ಮೆಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದರು.
ಸರ್ಕಾರ ರೈತರ 2 ಲಕ್ಷದವರೆಗಿನ ಸಾಲ ಮನ್ನಾ ಮಾಡಿದೆ. ಆದರೆ, ಬ್ಯಾಂಕ್ ಸಿಬ್ಬಂದಿ ಸಾಲ ತೀರಿಸುವಂತೆ ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಪರಿಶೀಲಿಸಿ ಬ್ಯಾಂಕ್ ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಮನವಿ ಪತ್ರ ಪಡೆದ ಬಳಿಕ ಮಾತನಾಡಿದ ಎಸ್‌ಬಿಐಯ ಬ್ಯಾಂಕ್ ವ್ಯವಸ್ಥಾಪಕ ಸುರೇಶ್‌ಬಾಬು, ಸರ್ಕಾರದ ಅದೇಶದಂತೆ ತಪ್ಪಾಗಿ ಖಾತೆಗಳಿಗೆ ಜಮಾ ಅದ ಹಣವನ್ನು ಹಿಂದಿರುಗಿಸಲಾಗಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ರಾಷ್ಟ್ರೀಯ ಕಿಸಾನ್ ಸಂಘದ ಅಧ್ಯಕ್ಷ ಕೃಷ್ಣರಾವ್,ಹಸಿರು ಸೇನೆ ಪದಾಧಿಕಾರಿ ಗಳಾದ ಶಿವರಾಜು, ನರಸಪ್ಪ, ಅಶ್ವತ್ಥಪ್ಪ, ಹನುಮಂತ ರಾಯಪ್ಪ, ತಿಮ್ಮಾನಾಯ್ಕ, ವೆಂಕಟಸ್ವಾಮಿ, ಈರಣ್ಣ ಇತರರಿದ್ದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.