ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ರೂಪಿಸುವ ಶಿಕ್ಷಣ ನೀಡಿ


Team Udayavani, Feb 23, 2020, 3:00 AM IST

vidyarthigaligr

ಮಧುಗಿರಿ: ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಂದಿಗೂ ನಾಡು-ನುಡಿಯ ವಿರುದ್ಧ ಧ್ವನಿ ಎತ್ತದ ನಿಜವಾದ ದೇಶಭಕ್ತರು. ಇವರಿಂದಲೇ ದೇಶಪ್ರೇಮ ಇಂದಿಗೂ ಪ್ರಕಾಶಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು. ತಾಲೂಕಿನ ಕಸಬಾ ಸಿದ್ದಾಪುರದ ಸರ್ಕಾರಿ ಪ್ರಾಥಮಿಕ ಶಾಲೆ ಶತಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ನೂತನ ಕಟ್ಟಡ ಉದ್ಘಾಟನೆ, ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಮಧುಗಿರಿಯಲ್ಲಿ 30 ಶಾಲೆಗಳು ಶತಮಾನೋತ್ಸವ ಆಚರಿಸುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಸಂಸ್ಥೆಗಳಿಗೆ ಯಾವುದಕ್ಕೂ ಕಡಿಮೆಯಿಲ್ಲದೆ ಉತ್ತಮ ಶಿಕ್ಷಣ ನೀಡುತ್ತಿವೆ. ಇದಕ್ಕೆ ಶಿಕ್ಷಕರೇ ಮುಖ್ಯ ಕಾರಣ. ಮಕ್ಕಳಿಗೆ ಒತ್ತಡದಿಂದ ಶಿಕ್ಷಣ ನೀಡಬಾರದು. ಮಕ್ಕಳಲ್ಲಿ ಯಾವುದೇ ಕೀಳರಿಮೆ ಮೂಡಿಸದೆ ವ್ಯಕ್ತಿತ್ವ ರೂಪಿಸುವ ಶಿಕ್ಷಣ ನೀಡಬೇಕು. ನಾನು ಶಿಕ್ಷಣ ಸಚಿವನಾದ ಮೇಲೆ ಪಾವಗಡ, ಚಾಮರಾಜನಗರದ ಗೋಫಿನಾಥಂ, ಹನೂರು ಶಾಲೆಗಳಲ್ಲಿ ವಾಸ್ತವ್ಯ ಮಾಡಿದ್ದು, ಮೂಲಸೌಕರ್ಯ ಕಲ್ಪಿಸಿದ್ದೇನೆ.

ರಾಜ್ಯದಲ್ಲಿ 53 ಸಾವಿರ ಶಾಲೆಗಳಿದ್ದು, ಎಲ್ಲವನ್ನೂ ಮಾಧ್ಯಮಗಳು ನಕಾರಾತ್ಮಕವಾಗಿ ಬಿಂಬಿಸುತ್ತಿದೆ. ಸ್ವಲ್ಪ ಅನುಷ್ಠಾನಗೊಂಡ ಕಾರ್ಯವನ್ನೂ ಬಿತ್ತರಿಸಬೇಕು. ಮಧುಗಿರಿಯ ಎಲ್ಲ ಸರ್ಕಾರಿ ಶಾಲೆಗಳ ಬಗ್ಗೆ ಅರಿವಿದ್ದು, ಶಾಸಕರ ಮನವಿಯಂತೆ ಎಲ್ಲ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಸಚಿವರು, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡ ಪಟ್ಟಣದ ಫ‌ಣೀಂದ್ರನಾಥ್‌ ಹಾಗೂ ಇಂದ್ರಮ್ಮ ಶಿಕ್ಷಕ ದಂಪತಿಗೆ ಸನ್ಮಾನಿಸಿದರು.

ನೆರವು ನೀಡಿ: ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಶಿಕ್ಷಣ ಉತ್ತಮ ನಾಗರಿಕ ಸಮಾಜ ನಿರ್ಮಿಸಲು ಕಾರಣವಾಗಿದೆ. ಬದುಕಿನಲ್ಲಿ ಯಾವುದೇ ಶಕ್ತಿ ಕೈಬಿಟ್ಟರೂ ಶಿಕ್ಷಣ ಕೈಹಿಡಿಯಲಿದೆ. ಹಾಗಾಗಿ ಮೌಲ್ಯಯುತ ಹಾಗೂ ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ಕೊಡಿಸುವುದರ ಮೂಲಕ ಸದೃಢ ದೇಶ ಕಟ್ಟಲು ಪೋಷಕರು ಮಕ್ಕಳಿಗೆ ದಾರಿ ದೀಪವಾಗಬೇಕು.

ಈ ಜವಾಬ್ದಾರಿ ಶಿಕ್ಷಕರಿಗೂ ಹೆಚ್ಚಿದ್ದು, ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು. ಸರ್ಕಾರ ಶಿಕ್ಷಣಕ್ಕೆ ಅಗತ್ಯ ಸೌಕರ್ಯ ಕಲ್ಪಿಸಿದ್ದು, ಎಲ್ಲ ನೆರವನ್ನೂ ನೀಡಿದೆ. ತಾಲೂಕಿನಲ್ಲಿ 150ಕ್ಕೂ ಹೆಚ್ಚು ಶಾಲಾ ಕಟ್ಟಡಗಳ ಸ್ಥಿತಿ ಗಂಭೀರವಾಗಿದೆ. ಸಚಿವರು ಈ ಬಗ್ಗೆ ಗಮನಹರಿಸಿ ನೆರವು ನೀಡಬೇಕು ಎಂದು ಮನವಿ ಮಾಡಿದರು. ಶಾಲಾ ಕೊಠಡಿ ನಿರ್ಮಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಬೆಳ್ಳಿ ಗದೆ ನೀಡಿ ಸನ್ಮಾನಿಸಿದರು.

ಮುಖ್ಯಶಿಕ್ಷಕಿ ಕಾಂತಮ್ಮ ಶಾಲೆಯ ಅಭಿವೃದ್ಧಿ ಹಾಗೂ ಇತರೆ ವರದಿ ಮಂಡಿಸಿದರು. ಮುಖಂಡ ಲಕ್ಷ್ಮಿನಾರಾಯಣ್‌ ಗ್ರಾಮದ ಶಾಲೆಗಾಗಿ ಶೃಂಗಾರವನದ ಜಾಗ ಬಿಡಿಸಿಕೊಟ್ಟರೆ, ಮಹಾತ್ಮ ಟ್ರಸ್ಟ್‌ನಿಂದ ಸುಭದ್ರ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷೆ ಇಂದಿರಾ, ಡಿಡಿಪಿಐ ರೇವಣ್ಣ ಸಿದ್ದಯ್ಯ, ತಹಶೀಲ್ದಾರ್‌ ನಂದೀಶ್‌, ಡಿವೈಪಿಸಿ ರಾಜಕುಮಾರ್‌, ಬಿಇಒ ರಂಗಪ್ಪ, ಬಿಆರ್‌ಸಿ ಆನಂದ್‌, ಡಯಟ್‌ ಪ್ರಾಂಶುಪಾಲ ರಾಮಕೃಷ್ಣಯ್ಯ, ಇಒ ದೊಡ್ಡಸಿದ್ದಯ್ಯ, ಸದಸ್ಯ ರಾಮಣ್ಣ, ಗ್ರಾಪಂ ಅಧ್ಯಕ್ಷೆ ಮಂಜಮ್ಮ, ಪುರಸಭೆ ಸದಸ್ಯ ಎಂ.ಆರ್‌.ಜಗಣ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್‌, ಖಜಾಂಚಿ ಚಿಕ್ಕರಂಗಯ್ಯ, ಪಿಡಿಓ ಗೌಡಯ್ಯ, ಮುಖಂಡರಾದ ಡಾ.ಶ್ರೀನಿವಾಸಮೂರ್ತಿ, ಲಕ್ಷ್ಮೀನಾರಾಯಣ್‌, ರಂಗಶಾಮಯ್ಯ, ರವೀಶಾರಾಧ್ಯ, ಚಿತ್ರನಟ ಕಲ್ಯಾಣ್‌, ಸಾವಿರಾರು ಗ್ರಾಮಸ್ಥರು ಇದ್ದರು.

ಪೋಷಕರು ಸರ್ಕಾರಿ ಶಾಲೆ ಮುಂದೆ ಸಾಲು ನಿಲ್ಲುವಂತೆ ಮಾಡ್ತೇನೆ: ಮುಂದಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ದಾಖಲಿಸಲು ಸರ್ಕಾರಿ ಶಾಲೆ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವಂತ ಅಮೂಲ್ಯ ಬದಲಾವಣೆ ತರಲು ಶ್ರಮಿಸುತ್ತೇನೆ. ಪೋಷಕರು ದುಡಿಮೆಯ ಶೇ.40 ಹಣ ಶಿಕ್ಷಣಕ್ಕೆ ವ್ಯಯಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಸರ್ಕಾರಿ ಶಾಲೆಯಲ್ಲೇ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಎಲ್ಲ ಅಗತ್ಯ ತಯಾರಿ ನಡೆಯುತ್ತಿದೆ.

ಈಗಾಗಲೇ ಎಲ್‌ಕೆಜಿ ಹಾಗೂ ಯುಕೆಜಿ ತರಗತಿ ಸ್ಥಾಪಿಸಿದ್ದು, ಆಸಕ್ತ ಶಿಕ್ಷಕರು ಮುಂದೆ ಬಂದರೆ ಇಲಾಖೆಯಿಂದ ಎಲ್ಲ ಸಹಕಾರ ನೀಡಲಾಗುವುದು. ನನ್ನ ತಾಯಿ ಸರ್ಕಾರಿ ಶಿಕ್ಷಕಿಯಾಗಿ 30 ವರ್ಷ ಸೇವೆ ಸಲ್ಲಿಸಿದ್ದು, ಇಲಾಖೆ ಋಣ ನನ್ನ ಮೇಲಿದೆ. ಇಂತಹ ಪುಣ್ಯದ ಕಾರ್ಯ ಮಾಡಲು ಅವಕಾಶ ಮಾಡಿಕೊಟ್ಟ ಸಿಎಂಗೆ ಅಭಿನಂದಿಸುವುದಾಗಿ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.