ಹಾಂಕಾಂಗ್ನಲ್ಲಿ ಮಾಸ್ಕ್ ಉದ್ಯಮ
Team Udayavani, Feb 22, 2020, 10:12 PM IST
ಬೀಜಿಂಗ್: ಕೋವಿಡ್ ವೈರಸ್ ಭೀತಿಯನ್ನೇ ಲಾಭದ ಮೂಲವನ್ನಾಗಿಸಿಕೊಂಡಿರುವ ಕೆಲವು ಸಂಸ್ಥೆಗಳು ಇದೀಗ ಮಾಸ್ಕ್ ಗಳನ್ನು ಉತ್ಪಾದಿಸುತ್ತಿವೆ. ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್ ಸೋಂಕು ಈಗಾಗಲೇ ಹಲವು ದೇಶಗಳಿಗೆ ವ್ಯಾಪಿಸಿದೆ. ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಗಳನ್ನು ಧರಿಸುವಂತೆ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಲಹೆ ನೀಡುತ್ತಿದ್ದಾರೆ. ಸೋಂಕಿನಿಂದ ರಕ್ಷಿಸಿಕೊಳ್ಳುವ ಸಂಬಂಧ ಮಾಸ್ಕ್ ಖರೀದಿಸುವವರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಬೇಡಿಕೆ ಹಾಗೂ ಪೂರೈಕೆ ನಡುವೆ ಭಾರೀ ವ್ಯತ್ಯಯ ಕಂಡುಬರುತ್ತಿದೆ.
ಇದೀಗ ನೆರೆಯ ಹಾಂಕಾಂಗ್ನಲ್ಲಿ ಮಾಸ್ಕ್ ಗಳನ್ನು ತಯಾರಿಸಲಾಗುತ್ತದೆ. ವೈರಸ್ ಭೀತಿಯಿಂದ ಹಾಂಕಾಂಗ್ ತನ್ನದೇ ಮಾಸ್ಕ್ ಗಳನ್ನು ಉತ್ಪಾದಿಸುತ್ತಿದೆ. ಈ ಹಿಂದೆ ಚೀನದಿಂದ ಮಾಸ್ಕ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳು ಬರುತ್ತಿದ್ದವು. ಆದರೆ ಈಗ ಅವುಗಳನ್ನು ಆಮದು ಮಾಡದೇ ತಾನೆ ತಯಾರಿಸಿಕೊಳ್ಳುತ್ತಿದೆ. ಹಾಂಕಾಂಗ್ನಂತಹ ಪ್ರಮುಖ ನಗರಗಳಲ್ಲಿ ಸುರಕ್ಷತೆಗಾಗಿ ಸರಕಾರ ಈ ಕ್ರಮ ಕೈಗೊಂಡಿದೆ. ಹಾಂಕಾಂಗ್ ವಿಮಾನ ನಿಲ್ದಾಣದಲ್ಲಿ ಹಲವು ಅಂತಾರಾಷ್ಟ್ರೀಯ ವಿಮಾನಗಳು ಇಳಿಯುತ್ತವೆ. ಇಂತಹ ಸಂದರ್ಭ ವಿದೇಶಿ ಪ್ರಜೆಗಳಿಂದ ಕೊರೊನಾ ಭೀತಿಯಿಂದ ಪಾರಾಗಲು ಈ ಕ್ರಮದ ಮೊರೆ ಹೋಗಿದೆ.
ಹಾಂಕಾಂಗ್ನ ಶೇ. 95ರಷ್ಟು ಮಂದಿ ಮಾಸ್ಕ್ ಧರಿಸಿಕೊಂಡೇ ನಗರಗಳಲ್ಲಿ ಓಡಾಡುತ್ತಿದ್ದಾರೆ. ರಸ್ತೆ ಬದಿ ಅಂಗಡಿಗಳಲ್ಲಿ ಮಾಸ್ಕ್ ಗಳು ಯಥೇಚ್ಛಾವಾಗಿ ಲಭ್ಯವಾಗುತ್ತಿವೆ. ಇನ್ನು ರೈಲ್ವೇ ನಿಲ್ದಾಣಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಜನ ದಟ್ಟನೆ ಹೆಚ್ಚಿರುವ ಕೇಂದ್ರಗಳಲ್ಲಿ ಮಾಸ್ಕ್ ಗಳು ಮಾರಾಟಗೊಳ್ಳುತ್ತಿವೆ. ವಿಶೇಷ ಎಂದರೆ ಜನರು ಅಂದು ಧರಿಸಿದ ಭಟ್ಟೆಗೆ ಹೊಂದಿಕೊಳ್ಳುವಂತಹ ಮಾಸ್ಕ್ ಗಳು ಮಾರುಕಟ್ಟೆಯಲ್ಲಿ ಒಳ್ಳೆಯ ಬೇಡಿಕೆ ಹೊಂದಿದೆ. ಟೈಲರ್ ಶಾಪ್ ಗಳಲ್ಲಿ ಮಾಸ್ಕ್ ಗಳನ್ನು ಹೊಲಿಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.