ಐತಿಹಾಸಿಕ ಖೇಲೋ ಇಂಡಿಯಾ ವಿವಿ ಕ್ರೀಡಾಕೂಟಕ್ಕೆ ಮೋದಿ ಚಾಲನೆ
Team Udayavani, Feb 22, 2020, 10:21 PM IST
ಭುವನೇಶ್ವರ: ಭಾರತದ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿದರು.
ಈ ರೀತಿಯ ಕ್ರೀಡಾಕೂಟ ಭಾರತದಲ್ಲಿ ನಡೆಯುತ್ತಿರುವುದು ಇದೇ ಮೊದಲ ಸಲವಾಗಿದ್ದು, ದೇಶದ ಒಟ್ಟು 159 ವಿವಿಗಳ 3,400 ಆ್ಯತ್ಲೀಟ್‌ಗಳು ಭಾಗವಹಿಸಿದ್ದಾರೆ. 17 ಮುಖ್ಯ ವಿಭಾಗಗಳು, ಹಲವು ಉಪವಿಭಾಗಗಳಲ್ಲಿ ಆಟಗಾರರು ಸ್ಪರ್ಧಿಸಲಿದ್ದಾರೆ. ಇದರಲ್ಲಿ ರಗಿº ಕೂಡ ಸೇರಿಕೊಂಡಿದೆ.
ಜವಾಹರ್‌ಲಾಲ್ ನೆಹರೂ ಮೈದಾನದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮೋದಿ ಕ್ರೀಡಾಕೂಟ ಉದ್ಘಾಟಿಸಿ, “ಇದು ಭಾರತದ ಪಾಲಿಗೆ ಐತಿಹಾಸಿಕ ಘಟನೆ. ಭಾರತದ ಕ್ರೀಡೆಯ ಭವಿಷ್ಯವನ್ನೇ ಇದು ಬದಲಿಸಲಿದೆ’ ಎಂದರು.
ಮೋದಿ ಜತೆಗೆ ಒಡಿಶಾ ಸಿಎಂ ನವೀನ್ ಪಟ್ನಾಯಕ್, ಕ್ರೀಡಾಮಂತ್ರಿ ಕಿರಣ್ ರಿಜಿಜು, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಇದ್ದರು. ಒಡಿಶಾದ ಖ್ಯಾತ ಓಟಗಾರ್ತಿ ದ್ಯುತಿ ಚಂದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಂಗಳೂರು ವಿಶ್ವ ವಿದ್ಯಾಲಯದ ಟ್ರಿಪಲ್ ಜಂಪ್ ಸ್ಪರ್ಧಿ ಜೇ ಶಾ ಭಾಗವಹಿಸಿದ್ದರು. ಇದೇ ವೇಳೆ 45 ನಿಮಿಷಗಳ ವೈವಿಧ್ಯಮಯ, ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.