25ರಂದು ಮಡಿವಾಳ ಮಾಚಿದೇವರ ಜಯಂತಿ
Team Udayavani, Feb 23, 2020, 3:44 PM IST
ಮಳವಳ್ಳಿ: ತಾಲೂಕು ಮಡಿವಾಳ ಮಾಚಿದೇವರ ಸಂಘದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವು ಫೆ.25ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಾಚಿದೇವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಮಾಚಿದೇವರ ದೇವಸ್ಥಾನದಿಂದ ಅಂಬೇಡ್ಕರ್ ಭವನದ ವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಕಾರ್ಯ ಕ್ರಮವನ್ನು ಶಾಸಕ ಡಾ.ಕೆ.ಅನ್ನದಾನಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಜೆಡಿಎಸ್ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ವಿ.ಅಮರ್ ನಾಥ್, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಹೀಗಾಗಿ ವಿವಿಧ ಸಂಘ ಸಂಸ್ಥೆಯ ಮುಖಂಡರು, ತಾಲೂಕು ಮಡಿವಾಳ ಮಾಚಿದೇವರ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದರು.
ತಾಲೂಕು ಮಡಿವಾಳ ಮಾಚಿದೇವರ ಸಂಘದ ಗೌರವ ಅಧ್ಯಕ್ಷ ಸಿದ್ದಪ್ಪಾಜಿ, ಕಾರ್ಯಾಧ್ಯಕ್ಷ ವೀರಭದ್ರಣ್ಣ, ಉಪಾಧ್ಯಕ್ಷ ಗಣೇಶ್ ಕರಳಕಟ್ಟೆ, ವಿಶಾಲಕ್ಷ್ಮಮ್ಮ, ಖಜಾಂಚಿ ತಳಗವಾದಿ ನಿಂಗರಾಜು, ರೇವಣ್ಣ, ಕೆಇಬಿ ನಾಗರಾಜು, ರಮೇಶ್ ಮಹದೇವು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.