ಏಪ್ರಿಲ್‌ಗೆ ಒಂದು ಗಂಟೆಯ ಕಥೆ
Team Udayavani, Feb 24, 2020, 7:00 AM IST
ಕನ್ನಡದಲ್ಲಿ ಹೊಸಬರ ಚಿತ್ರಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆ ಸಾಲಿಗೆ ಈಗ “ಒಂದು ಗಂಟೆಯ ಕಥೆ’ ಕೂಡ ಸೇರಿದೆ. ಈಗಾಗಲೇ ಪೋಸ್ಟರ್ ಹಾಗು ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಫೆ.28 ರಂದು ಚಿತ್ರದ ಆಡಿಯೋ ಬಿಡುಗಡೆ ಮಾಡುವ ಬಗ್ಗೆ ತಯಾರಿ ನಡೆಸಿದೆ. ಈ ಹಿಂದೆ “ಮತ್ತೆ ಮುಂಗಾರು’ ಚಿತ್ರವನ್ನು ನಿರ್ದೇಶಿಸಿದ್ದ ರಾಘವ್ ದ್ವಾರ್ಕಿ ಈ ಚಿತ್ರಕ್ಕೆ ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.
“ರಿಯಲ್ ವೆಲ್ತ್ ವೆಂಚರ್ ಪ್ರೊಡಕ್ಷನ್’ ಬ್ಯಾನರ್‌ನಲ್ಲಿ ಕಶ್ಯಪ್ ದಾಕೋಜು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಹಾಡುಗಳನ್ನು ಹೊರತರುವ ಉತ್ಸಾಹದಲ್ಲಿದೆ. ಚಿತ್ರದ ಹಾಡುಗಳಿಗೆ ಡೆನ್ನಿಸ್ ವಲ್ಲಭನ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಸೂರ್ಯಕಾಂತ್ ಛಾಯಾಗ್ರಹಣವಿದೆ. ಗಣೇಶ್ ಮಲ್ಲಯ್ಯ ಸಂಕಲನವಿದೆ. ಇಂದಿನ ಯುವಕರ ಜೀವನ ಶೈಲಿ ಮತ್ತು ಅಭಿರುಚಿ, ಜವಾಬ್ದಾರಿಗಳ ಕುರಿತು ಕಥಾ ಹಂದರ ಹೊಂದಿರುವ “ಒಂದು ಗಂಟೆಯ ಕಥೆ’ ಚಿತ ಏಪ್ರಿಲ್ ಅಂತ್ಯದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
“ಪ್ರೇಮಿಗಳ ದಿನ’ದಂದು ಚಿತ್ರದ ಪೋಸ್ಟರ್ ಮತ್ತು ಟ್ರೇಲರ್ ಬಿಡುಗಡೆಯಾಗಿತ್ತು. ಬಿಡುಗಡೆ ಬಳಿಕ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೇಲರ್ ಜೋರು ಸದ್ದು ಮಾಡಿದೆ. ಹೊಸ ತಂಡವೊಂದು ಹೊಸಬಗೆಯ ಸಿನಿಮಾ ಕಟ್ಟಿಕೊಟ್ಟಿರುವ ಸಂತಸದಲ್ಲಿದೆ. ಚಿತ್ರದಲ್ಲಿ ಅಜಯ್ ರಾಜ್ (ನಂಜುಂಡ) ಶನಾಯ ಕಾಟೆ, ಸ್ವಾತಿ ಶರ್ಮ, ಚಿದಾನಂದ್, ಪ್ರಶಾಂತ್ ಸಿದ್ಧಿ, ಪ್ರಕಾಶ್ ತುಮಿನಾಡು, ಚಂದ್ರಕಲಾ, ಯಶವಂತ್ ಸರದೇಶಪಾಂಡೆ, ನಾಗೇಂದ್ರ, ಮಿಮಿಕ್ರಿ ಗೋಪಿ, ಆನಂದ್, ಕುಳ್ಳ ಸೋಮು, ಮಜಾ ಟಾಕೀಸ್ ರೆಮೊ, ರುಕ್ಮಿಣಿ ಮೊದಲಾದ ಕಲಾವಿದರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.