ಪೊಲೀಸ್‌ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಎಚ್ಚರಿಕೆ

Team Udayavani, Feb 24, 2020, 3:06 AM IST

police-adhi

ಬೆಂಗಳೂರು: ರಾಜ್ಯದ್ಲಲಿ ಪೊಲೀಸರ ಕಾರ್ಯವೈಖರಿ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಎ ವಿರುದ್ಧದ ಹೋರಾಟಗಳು ಹಾಗೂ ರಾಜ್ಯ ಕಾನೂನು ಸುವ್ಯವಸ್ಥೆ ಕುರಿತು ಭಾನುವಾರ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಯಾರೆಲ್ಲ ಭಾಗವಹಿಸುತ್ತಿದ್ದರು ಎಂಬುದರ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆ? ಅಮೂಲ್ಯಳನ್ನು ಆಯೋಜಕರು ಆಹ್ವಾನಿಸಿದ್ದರೆ? ಅವರಿಗೆ ವಿಐಪಿ ಬ್ಯಾಡ್ಜ್ ಹೇಗೆ ಬಂತು? ವೇದಿಕೆ ಏರಿ ಮಾತನಾಡಲು ಮೈಕ್‌ ಕೊಟ್ಟವರು ಯಾರು? ಎಂಬೆಲ್ಲ ಮಾಹಿತಿ ಸಿಕ್ಕಿದೆಯೇ ಎಂದು ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದ್ದಾರೆ.

ಹೋರಾಟದ ಸಮಾವೇಶಕ್ಕೆ ಅಮೂಲ್ಯ ಬರುತ್ತಿದ್ದಾಳೆಂಬ ಮಾಹಿತಿ ಪೊಲೀಸ್‌ ಅಧಿಕಾರಿಗಳಿಗೆ ಇರಲಿಲ್ಲವೇ? ಗುಪ್ತಚರ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಹೋಗಿದ್ದರೇ? ಆಕೆಯ ಪೂರ್ವಪರದ ಬಗ್ಗೆ ಪೊಲೀಸ್‌ ಇಲಾಖೆಯಲ್ಲಿ ಮಾಹಿತಿ ಲಭ್ಯವಿದೆಯೇ? ಇಲ್ಲವೇ? ಈ ಹಿಂದೆಯೂ ಆಕೆ ಕೆಲವೊಂದೆಡೆ ಪ್ರಚೋದನಾಕಾರಿ ಭಾಷಣ ಮಾಡಿದ್ದಾಳೆ ಎಂಬ ಮಾಹಿತಿ ಇದೆ. ಈ ಬಗ್ಗೆ ಗುಪ್ತಚರ ಇಲಾಖೆ ಬಳಿ ಯಾವ ಮಾಹಿತಿ ಇದೆ?.

ಮುಂದೆ ನಡೆಯುವ ಪ್ರತಿಭಟನೆ ಸಂದರ್ಭದಲ್ಲಿ ಗುಪ್ತಚರ ವಿಭಾಗದವರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕು. ಪದೇ ಪದೆ ದೇಶದ ವಿರುದ್ಧ ಘೋಷಣೆ ಕೂಗುವವರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಬೇಕು. ಅದರ ಹಿಂದಿನ ಶಕ್ತಿಗಳು ಯಾರು? ಆಕೆ ವೇದಿಕೆ ಏರುತ್ತಿದ್ದಂತೆ ಪೊಲೀಸರು ಯಾಕೆ ತಡೆಯಲಿಲ್ಲ ಎಂಬೆಲ್ಲ ಪ್ರಶ್ನೆಗಳನ್ನು ಕೇಳುವ ಮೂಲಕ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಸೇರಿದಂತೆ ಅಧಿಕಾರಿಗಳಿಗೆ ಜೋರಾಗಿಯೇ ಬಿಸಿ ಮುಟ್ಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ಗುಪ್ತಚರ ವಿಭಾಗದ ಮುಖ್ಯಸ್ಥ ಕಮಲ್‌ ಪಂಥ್‌, ಎಡಿಜಿಪಿ ಪ್ರತಾಪ್‌ ರೆಡ್ಡಿ, ಡಿಐಜಿ ಸುಬ್ರಹ್ಮಣೇಶ್ವರರಾವ್‌, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಸೇರಿ ಕೆಲ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.