ಹೋರಾಟದಿಂದ ನೀರಾವರಿ ಯೋಜನೆ ಸಾಕಾರ

ಎರಡನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ 29ರಂದು ಪಾದಯಾತ್ರೆ

Team Udayavani, Feb 24, 2020, 4:57 PM IST

24-February-28

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಎರಡನೇ ಹಂತದ ಏತನೀರಾವರಿ ಜಾರಿಗೊಳಿಸಲು ಒತ್ತಾಯಿಸಿ ತಂಬ್ರಹಳ್ಳಿ, ಚಿಲುಗೋಡು, ಬನ್ನಿಗೋಳ ಸೇರಿದಂತೆ ಅಚ್ಚುಕಟ್ಟು ಪ್ರದೇಶದ ವಿವಿಧ ಹಳ್ಳಿಗಳ ರೈತರು ಫೆ. 29ರಂದು ಹಗರಿಬೊಮ್ಮನಹಳ್ಳಿಗೆ ಪಾದಯಾತ್ರೆ ಮೂಲಕ ಹೋಗಿ ಶಾಸಕ ಭೀಮನಾಯ್ಕ, ನೀರಾವರಿ ಇಲಾಖೆ ಅಧಿಕಾರಿಗಳಿಗೆ, ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು ಎಂದು ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ರೈತರು ತೀರ್ಮಾನ ಕೈಗೊಂಡರು.

ಈ ಕುರಿತು ಜಿಪಂ ಮಾಜಿ ಸದಸ್ಯ ಹೋರಾಟದ ಸಂಚಾಲಕ ಅಕ್ಕಿ ತೋಟೇಶ ಮಾತನಾಡಿ, ಎರಡನೇ ಹಂತದ ಏತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಸರಕಾರವನ್ನು ಎಚ್ಚರಿಸಲು ಹೋರಾಟದ ರೂಪುರೇಷಗಳನ್ನು ಸಿದ್ಧಪಡಿಸಲಾಗುವುದು. ಮೊದಲನೇ ಹಂತವಾಗಿ ಪಾದಯಾತ್ರೆ ಮೂಲಕ ಕ್ಷೇತ್ರದ ಶಾಸಕ ಭೀಮಾನಾಯ್ಕರಿಗೆ, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.

ಈ ಹೋರಾಟವನ್ನು ಪಕ್ಷಾತೀತವಾಗಿ ಹಮ್ಮಿಕೊಂಡಿದ್ದು, ಪ್ರತಿಯೊಬ್ಬ ರೈತರು, ವರ್ತಕರು, ಕೂಲಿ ಕಾರ್ಮಿಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಈಗಾಗಲೇ ಎಲ್ಲ ಸ್ತ್ರೀಶಕ್ತಿ ಸಂಘಗಳಿಗೆ ನಿರ್ದೇಶನ ನೀಡಿದ್ದು ಪಾದಯಾತ್ರೆಯಲ್ಲಿ ಮಹಿಳೆಯರು ಕೂಡ ಪಾಲ್ಗೊಳ್ಳುವರು.

ಎರಡನೇ ಹಂತದ ನೀರಾವರಿ ಯೋಜನೆ ಜಾರಿಯಾದರೆ ತಂಬ್ರಹಳ್ಳಿ ಹೋಬಳಿ ವ್ಯಾಪ್ತಿಯ 3500 ಎಕ್ಕರೆಗೂ ಅಧಿಕ ಪ್ರದೇಶ ನೀರಾವರಿ ಸೌಲಭ್ಯ ಒದಗುವುದು. ಈಗೀರುವ ಏತ ನೀರಾವರಿಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಲಾಗುವುದು. ಪಾದಯಾತ್ರಿಗಳಿಗೆ ಊಟ, ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುವುದು. ಪಾದಯಾತ್ರೆ ಮುಗಿದು ಮನವಿ ಸಲ್ಲಿಸಿದ ನಂತರ ಪಾದಯಾತ್ರಿಗಳು ಹಿಂದಿರುಗಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಮಗ್ರ ಹೋರಾಟದಿಂದ ಮಾತ್ರ ನೀರಾವರಿ ಯೋಜನೆಗಳು ಜಾರಿಯಾಗಲು ಸಾಧ್ಯ. ಸುತ್ತಲಿನ ಅಚ್ಚುಕಟ್ಟು ಪ್ರದೇಶದ ಎಲ್ಲ ರೈತರು ಹೋರಾಟದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಫೆ.
29ರಂದು ಶ್ರೀಗುರು ಕೊಟ್ಟೂರೇಶ್ವರ ದೇವಸ್ಥಾನ ತಂಬ್ರಹಳ್ಳಿಯಿಂದ ಬೆಳಗ್ಗೆ 6 ಗಂಟೆಗೆ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು.

ಅಂದು ತಂಬ್ರಹಳ್ಳಿ ಅಂಗಡಿಮುಂಗಟ್ಟು, ರೈತರು ಕೆಲಸಗಳನ್ನು
ಬಂದ್‌ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಹೋರಾಟದ ರೂಪುರೇಷಗಳನ್ನು ವ್ಯವಸ್ಥಿತವಾಗಿ ರೂಪಿಸಿದ್ದು ಗುರುವಾರ ಸಂಜೆ ಮತ್ತೂಮ್ಮೆ ಪೂರ್ವಭಾವಿ ಸಭೆ ಕರೆದಿದ್ದು ಎಲ್ಲ ರೈತರು ಕಡ್ಡಾಯವಾಗಿ ಆಗಮಿಸಬೇಕು ಎಂದು ತಿಳಿಸಿದರು.

ತಂಬ್ರಹಳ್ಳಿ ಗ್ರಾ.ಪಂ.ಅಧ್ಯಕ್ಷ ಮಡಿವಾಳರ ಕೊಟ್ರೇಶ ಮಾತನಾಡಿ, ನೀರಾವರಿ ಯೋಜನೆಗಳನ್ನು ಸಕಾರಗೊಳಿಸಲು ಕ್ಷೇತ್ರದ ಶಾಸಕರಿಗೆ
ಆಸಕ್ತಿಯಿದ್ದು, ಹೋರಾಟವನ್ನು ಬಲಪಡಿಸುವ ಅಗತ್ಯವಿದೆ. ಎರಡನೇ ಹಂತದ ಏತ ನೀರಾವರಿ ಯೋಜನೆ ಜಾರಿಗೊಳ್ಳಲು ಉತ್ತಮ ಹೋರಾಟ ರೂಪಿಸಬೇಕು. ಕ್ಷೇತ್ರದ ಮಹತ್ವಕಾಂಕ್ಷಿ ಯೋಜನೆ ಮಾಲವಿ ಜಲಾಶಯಕ್ಕೆ ಶಾಶ್ವತ ನಿರೋದಗಿಸಲು ಶಾಸಕ
ಭೀಮಾನಾಯ್ಕ ನಿರಂತರ ಶ್ರಮದಿಂದ ಕಾಮಗಾರಿಗೆ ಅನುದಾನ ಒದಗಿಸಿ ಕಾಮಗಾರಿ ಪ್ರಾರಂಭಿಸಿದ್ದಾರೆ. ಹೋರಾಟಕ್ಕೆ ಪಕ್ಷಾತೀತವಾಗಿ ಪ್ರತಿಯೊಬ್ಬರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಪಿಕಾರ್ಡ್‌ ಬ್ಯಾಂಕ್‌ ಮಾಜಿ ಉಪಾಧ್ಯಕ್ಷ ಪಟ್ಟಣಶೆಟ್ಟಿ ಸುರೇಶ, ಬಿ.ಕೊಟ್ರೇಶ, ಕೊಟಿಗಿ ಮಲ್ಲಿಕಾರ್ಜುನ ಮಾತನಾಡಿದರು. ತಾ.ಪಂ.ಸದಸ್ಯ ಪಿ.ಕೊಟ್ರೇಶ, ಗ್ರಾ.ಪಂ. ಸದಸ್ಯರಾದ ಗೌರಜ್ಜನವರ
ಗಿರೀಶ್‌, ಸುಕುರ್‌ಸಾಬ್‌, ಸೊಬಟಿ ಹರೀಶ್‌, ಪಿ. ಶ್ರೀನಿವಾಸ, ರೈತ ಮುಖಂಡರಾದ ಮೈನಳ್ಳಿ ಕೊಟ್ರೇಶ್‌, ಮೂಲಿಮನಿ ರವಿಪ್ರಸಾದ್‌,
ಕೋರಿ ಗೋಣಿಬಸಪ್ಪ, ಗಂಗಾಧಗೌಡ, ಗೌಜ್ಜನವರ ಬಸವರಾಜಪ್ಪ,
ಬಾಳಿಕಾಯಿ ಚಿದಾನಂದಪ್ಪ, ಕಡ್ಡಿ ಚನ್ನಬಸಪ್ಪ, ದೇವಿಪ್ರಸಾದ, ಸರಾಯಿ ಮಂಜುನಾಥ, ಸುಣಗಾರ ರಾಮು, ನಂದಿಬಂಡಿ ರಾಮಣ್ಣ, ಕಡ್ಡಿ ಕೊಟ್ರೇಶ, ಮಂಜುನಾಥ ಪಾಟೀಲ್‌, ಮೋರಿಗೇರಿ ವಿಶ್ವನಾಥ, ಇತರರಿದ್ದರು.

ಟಾಪ್ ನ್ಯೂಸ್

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Brahmavar

Belthangady: ಆತ್ಮಹ*ತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Court-1

Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.