ಸಪ್ತಪದಿ ಪ್ರಚಾರ ರಥಕ್ಕೆ ಚಾಲನೆ

Team Udayavani, Feb 24, 2020, 6:11 PM IST

br-tdy-1

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿನೂತನ ಸಪ್ತಪದಿ ಯೋಜನೆಯ ಪ್ರಚಾರದ ಸಲುವಾಗಿ ತಾಲೂಕಿನ ಎಸ್‌.ಎಸ್‌ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಮೀಪ ಸಪ್ತಪದಿ ರಥಕ್ಕೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮದುವೆಯಾಗಲು, ಅಶಕ್ತರಾಗಿರುವ ಬಡವರು ಈ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ನಡೆಯಲಿರುವ ಸಪ್ತಪದಿ ಯೋಜನೆಯು ಬಡ ಹಾಗೂ ಮಧ್ಯಮ ವರ್ಗದವರಿಗೆ ವರದಾನ. ಈ ಯೋಜನೆಯನ್ನು ಎಲ್ಲಾ ಬಡವರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಮಾಹಿತಿ ನೀಡಿ, ಏಪ್ರಿಲ್‌ 26 ರಂದು ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು, ವಧು-ವರರು ಹೆಸರು ನೋಂದಾಯಿಸಿಕೊಳ್ಳಲು ಮಾರ್ಚ್‌ 27 ಕೊನೆಯ ದಿನಾಂಕವಾಗಿದೆ. ಸರಳ ವಿವಾಹದಲ್ಲಿ ವರನಿಗೆ 5 ಸಾವಿರ ರೂಪಾಯಿ ,ವಧುವಿಗೆ 10 ಸಾವಿರ ರೂಪಾಯಿ ನೀಡಲಾಗುವುದು ಎಂದರು.

ಚಿನ್ನದ ತಾಳಿ,ಅಂದಾಜು 8 ಗ್ರಾಂ ತೂಕದ 2 ಚಿನ್ನದ ಗುಂಡು,ಒಟ್ಟು 55 ಸಾವಿರ ರೂ ವೆಚ್ಚವನ್ನು ದೇವಾಲಯದಿಂದ ಭರಿಸಲಾಗುವುದು ಸಾಮೂಹಿಕ ವಿವಾಗವಾಗುವ ವಧುವಿಗೆ ಕಂದಾಯ ಇಲಾಖೆ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ನೀಡುವ 10 ಸಾವಿರ ರೂ ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುತ್ತೆ. ವಧು-ವರರು ಅವರ ಎಲ್ಲಾ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಘಾಟಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ವಿವಾಹದ ಸಮಯದಲ್ಲಿ ವಧು-ವರರು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ,ಹಾಗೂ ಇತರೆ ಆವಶ್ಯಕ ವ್ಯವಸ್ಥೆಗಳನ್ನು ದೇವಸ್ಥಾನದಿಂದ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌. ಅಪ್ಪಯ್ಯಣ್ಣ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.