ಸ್ಪರ್ಧೆ ಎದುರಿಸಲು ಸನ್ನದ್ಧರಾಗಿ

ಸರ್ಕಾರಿ ಕಾಲೇಜುಗಳಿಂದ ಖಾಸಗಿ ಕಾಲೇಜಿಗೆ ಪೈಪೋಟಿ „ ಲ್ಯಾಪ್‌ಟಾಪ್‌ ಶೈಕ್ಷಣಿಕ ಉದ್ದೇಶಕ್ಕೆ ಬಳಸಿ

Team Udayavani, Feb 24, 2020, 6:23 PM IST

24-February-36

ರಾಯಚೂರು: ಗ್ರಾಮೀಣ ಭಾಗದ, ಹಿಂದುಳಿದ ಬಡ ಮಕ್ಕಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಉಚಿತ ಲ್ಯಾಪ್‌ಟಾಪ್‌ ವಿತರಿಸುತ್ತಿದೆ. ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ನ್ನು ಉನ್ನತ ವ್ಯಾಸಂಗಕ್ಕೆ ಬಳಸಿಕೊಳ್ಳಬೇಕು ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು. ಇಂದಿನ ಸ್ಮರ್ಧಾತ್ಮಕ ದಿನಗಳಲ್ಲಿ ಎಷ್ಟು ಅಧ್ಯಯನ ಮಾಡಿದರೂ ಕಡಿಮೆಯೇ ಎನ್ನುವಂತಿದೆ. ಹೀಗಾಗಿ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ಗ್ಳನ್ನು ಐಎಎಸ್‌, ಕೆಎಎಸ್‌ ಹಾಗೂ ಐಬಿಪಿಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಬಳಸಿಕೊಳ್ಳಬೇಕು. ಬೇಕಾದ ಮಾಹಿತಿಯನ್ನು ಇದರಲ್ಲೇ ಪಡೆಯಬೇಕು. ಸ್ಪರ್ಧೆ ಎದುರಿಸಲು ಸನ್ನದ್ಧರಾಗಬೇಕು ಎಂದರು.

ಇಂದು ಸರ್ಕಾರಿ ಶಾಲಾ ಕಾಲೇಜುಗಳು ಯಾವುದೇ ಖಾಸಗಿ ಸಂಸ್ಥೆಗಳಿಗೆ ಕಡಿಮೆಯಿಲ್ಲ ಎನ್ನುವಂತೆ ಪೈಪೋಟಿ ನೀಡಬೇಕಿದೆ. ಆ ದಿಸೆಯಲ್ಲಿ ಸರ್ಕಾರ ಕೋಟ್ಯಂತರ ರೂ. ವ್ಯಯಿಸುತ್ತಿದೆ. ಆದರೆ, ಕಟ್ಟಡ ನಿರ್ಮಾಣ, ಸೌಲಭ್ಯಗಳ ಹೆಚ್ಚಿಸುವಿಕೆಗಾಗಿ ಮಾತ್ರ ಅನುದಾನ ವಿನಿಯೋಗಿಸದೆ ಜ್ಞಾನ ಹಾಗೂ ಕೌಶಲಾಭಿವೃದ್ಧಿಗೂ ನೀಡಲಾಗುತ್ತಿದೆ. ಇಂಥ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ ಸೇರಿ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯಬೇಕು ಎಂದು ತಿಳಿಸಿದರು.

ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ| ಜೆ.ಎಲ್‌. ಈರಣ್ಣ ಮಾತನಾಡಿ, ಅತಿ ಹೆಚ್ಚು ವಿದ್ಯಾರ್ಥಿಗಳಿರುವ ರಾಜ್ಯದ ಕೆಲವೇ ಕೆಲವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜೂ ಒಂದು. ನುರಿತ ಸಿಬ್ಬಂದಿ ಹಾಗೂ ಗುಣಮಟ್ಟದ ಶಿಕ್ಷಣ ಇರುವ ಕಾರಣ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು ಪ್ರತಿವರ್ಷ ನಮ್ಮಲ್ಲಿ ದಾಖಲಾಗುತ್ತಿದ್ದಾರೆ. ಅಲ್ಲದೇ ಆಟೋಟಗಳು, ಶೈಕ್ಷಣಿಕ ಸ್ಪರ್ಧೆಗಳು, ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯುವ ಮೂಲಕ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಪ್ರಭಾರ ಪ್ರಾಚಾರ್ಯ ಆರ್‌.ಮಲ್ಲನಗೌಡ ಮಾತನಾಡಿ, ವಿದ್ಯಾರ್ಥಿನಿಯರು ಕೇವಲ ಪದವಿಗಳಿಗೆ ಮಾತ್ರ ಸೀಮಿತವಾಗದೆ ಉನ್ನತ ಸ್ಥಾನಮಾನ ಹೊಂದಬೇಕು ಎಂದರು. ನಗರಸಭೆ ಸದಸ್ಯ ಶರಣಬಸವ ಬಲ್ಲಟಗಿ, ಇಟಗಿ ಭೀಮಣ್ಣ, ಉಪನ್ಯಾಸಕರಾದ ಡಾ| ಎಂ. ಶಿವರಾಜಪ್ಪ, ಮಹಾಂತೇಶ ಅಂಗಡಿ, ಮಹಾದೇವಪ್ಪ, ಡಾ| ಶಿವಯ್ಯ ಹಿರೇಮಠ, ಡಾ| ಮಹೆಬೂಬ್‌ಅಲಿ, ಸೈಯ್ಯದ್‌ ಮಿನಾಜ್‌, ರವಿ, ಪುಷ್ಪಾ, ಸಪ್ನಾ, ವಿಜಯ ಸರೋದೆ, ಚಂದ್ರು ಗಬ್ಬೂರು ಇತರರಿದ್ದರು.

ಟಾಪ್ ನ್ಯೂಸ್

Pramod-Muthalik

Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್‌ ಮುತಾಲಿಕ್‌

arrested

Baba Siddique ಹ*ತ್ಯೆ: ಶೂಟರ್‌ ಸೇರಿ ಮೂವರ ಬಂಧನ

pinarayi

Jamaat ಬೆಂಬಲ ಹೇಳಿಕೆ: ಪಿಣರಾಯಿ, ಪ್ರಿಯಾಂಕಾ ವಾದ್ರಾ ಮಧ್ಯೆ ವಾಕ್ಸಮರ!

Sheik Hasina

Bangladesh; ಶೇಖ್‌ ಹಸೀನಾ ಪಕ್ಷದ ಬೆಂಬಲಿಗರನ್ನು ಬಂಧಿಸಿದ ಸೇನೆ

Manipal: ಶಿಕ್ಷಣದ ಜತೆ ಆರೋಗ್ಯ ಸುಧಾರಣೆಗೂ ಆದ್ಯತೆ

Manipal: ಶಿಕ್ಷಣದ ಜತೆ ಆರೋಗ್ಯ ಸುಧಾರಣೆಗೂ ಆದ್ಯತೆ

Kukke Shree Subrahmanya ಕ್ಷೇತ್ರದಲ್ಲಿ ಭಕ್ತ ಸಂದಣಿ

Kukke Shree Subrahmanya ಕ್ಷೇತ್ರದಲ್ಲಿ ಭಕ್ತ ಸಂದಣಿ

Mangaluru Airport: 7,637 ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ

Mangaluru Airport: 7,637 ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

3-sirwar-2

Sirwar: ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತ; ಪೌರಕಾರ್ಮಿಕ ಸಾವು

Balaganur: Body of newborn baby found in canal

Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

Pramod-Muthalik

Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್‌ ಮುತಾಲಿಕ್‌

Vimana 2

Passenger ನಿಂದಲೇ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ!

AANE 2

Madhya Pradesh; ಮರಿ ಆನೆ ಸಾ*ವು: ಒಟ್ಟು 11ಕ್ಕೆ ಏರಿಕೆ

sudha-murthy

Air travel ಅಗ್ಗದ ಟಿಕೆಟ್‌ ಖರೀದಿ: ಸುಧಾಮೂರ್ತಿ

arrested

Baba Siddique ಹ*ತ್ಯೆ: ಶೂಟರ್‌ ಸೇರಿ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.