ಅರಣ್ಯ ಇಲಾಖೆ ಜಾಗಕ್ಕೆ ಪಹಣಿಪತ್ರವಿಲ್ಲದೆ ಸಮಸ್ಯೆ

 ಜಿಲ್ಲಾಧಿಕಾರಿಗಳ ಗಮನಕ್ಕೆ ತರಲು ಒಳಮೊಗ್ರು ಗ್ರಾಮಸಭೆಯಲ್ಲಿ ನಿರ್ಣಯ

Team Udayavani, Feb 25, 2020, 12:34 AM IST

majji-33

ಬಡಗನ್ನೂರು: ಪಹಣಿ ಪತ್ರದಲ್ಲಿ ಅರಣ್ಯ ಇಲಾಖೆಯ ಜಾಗವನ್ನು ದಾಖಲಿಸಬೇಕು. ಕಂದಾಯ ಇಲಾಖೆಯ ಅಧೀನದಲ್ಲಿರುವ ಎಲ್ಲ ಭೂಮಿಯೂ ಪಹಣಿ ಪತ್ರದಲ್ಲಿ ದಾಖಲಾಗಿದೆ. ಆದರೆ ಅರಣ್ಯ ಇಲಾಖೆಯ ಜಾಗ ಪಹಣಿ ಪತ್ರದಲ್ಲಿ ಇಲ್ಲದೇ ಇರುವುದು ಸಮಸ್ಯೆಯನ್ನು ಹುಟ್ಟು ಹಾಕುತ್ತಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಒಳಮೊಗ್ರು ಗ್ರಾಮಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.

ಗ್ರಾಮಸಭೆ ಫೆ. 24ರಂದು ಕುಂಬ್ರ ರೈತ ಸಭಾಭವನದಲ್ಲಿ ಅಧ್ಯಕ್ಷ ಯತಿರಾಜ್‌ ರೈ ನೀರ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮಸ್ಥರು ಮಾತನಾಡಿ, ಒಳಮೊಗ್ರು ಗ್ರಾಮದ ಕುದ್ಕಲ್‌, ಅಜಲಡ್ಕದಲ್ಲಿ ಕಂದಾಯ ಇಲಾಖೆ ನೀಡಿದ ಭೂಮಿಯಲ್ಲಿ ರೈತರು ಕೃಷಿ ಮಾಡಿದ್ದಾರೆ. ಆದರೆ ಆ ಜಾಗ ತನ್ನದೆಂದು ಅರಣ್ಯ ಇಲಾಖೆ ಹೇಳುತ್ತಿದೆ. ಅವರಲ್ಲಿ ಜಾಗದ ನಕ್ಷೆ ಇದೆ. ಪಹಣಿ ಪತ್ರವಿಲ್ಲ. ಏಕೆ ಹೀಗೆ? ಪಹಣಿಪತ್ರದಲ್ಲಿ ಅರಣ್ಯ ಇಲಾಖೆಯ ಜಾಗವನ್ನು ನಮೂದಿಸುವ ಕಾರ್ಯವನ್ನು ಸರಕಾರ ಮಾಡಬೇಕು. ಆ ಮೂಲಕ ಸಮಸ್ಯೆಯನ್ನು ಪರಹರಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿದರು.

ತ್ಯಾಜ್ಯ ಘಟಕದ ಜಾಗ ಅರಣ್ಯದ್ದು
ಗ್ರಾಮದ ದರ್ಬೆತ್ತಡ್ಕದಲ್ಲಿ ತ್ಯಾಜ್ಯ ವಿಲೇ ಘಟಕ ನಿರ್ಮಾಣಕ್ಕೆ ಗುರುತಿಸಿದ ಜಾಗವನ್ನು ಕೊನೇ ಗಳಿಗೆಯಲ್ಲಿ ತನ್ನದೆಂದು ಅರಣ್ಯ ಇಲಾಖೆ ತಕರಾರು ಎತ್ತಿದೆ. ಆದರೆ ಪಹಣಿ ಪತ್ರದಲ್ಲಿ ಸರಕಾರದ ಭೂಮಿ ಎಂದು ದಾಖಲಾಗಿದೆ. ಎಲ್ಲವೂ ಆದ ಬಳಿಕ ಅರಣ್ಯ ಇಲಾಖೆಯಿಂದ ಘಟಕಕ್ಕೆ ಸಮಸ್ಯೆಯಾಗಿದೆ ಎಂದು ಗ್ರಾ.ಪಂ. ಸದಸ್ಯ ಅಬ್ದುಲ್‌ ರಹಿಮಾನ್‌ ಅರಿಯಡ್ಕ ಆರೋಪಿಸಿದರು. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಪರಿಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ನಾಟಿ ಕೋಳಿ ಕೊಡಿ
ಗ್ರಾಮಸ್ಥರಿಗೆ ಇಲಾಖೆ ಯಿಂದ ಗಿರಿರಾಜ ಕೋಳಿಯ ಬದಲು ನಾಟಿ ಕೋಳಿಯನ್ನೇ ನೀಡಬೇಕು. ಗಿರಿರಾಜ ಕೋಳಿ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಿಲ್ಲ. ನಾಟಿ ಕೋಳಿ ನೀಡಿದರೆ ಗ್ರಾಮಸ್ಥರಿಗೆ ಪ್ರಯೋಜನವಾಗುತ್ತದೆ ಎಂದು ಗ್ರಾಮಸ್ಥರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಯತೀರಾಜ್‌ ರೈ ನಿಪ್ಪಾìಡಿ ಮಾತನಾಡಿ, ಗ್ರಾ.ಪಂ ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಗ್ರಾಮದ ಅಭಿವೃದ್ಧಿ ಸಾಧ್ಯ. ಅಭಿವೃದ್ಧಿ ದೃಷ್ಟಿಯಿಂದ ಚರ್ಚೆ ನಡೆದಿದೆ. ಈ ಐದು ವರ್ಷಗಳ ಆಡಳಿತ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಎಂದರು.

ತಾ.ಪಂ. ಸದಸ್ಯ ಹರೀಶ್‌ ಬಿಜತ್ರೆ, ಗ್ರಾ.ಪಂ. ಉಪಾಧ್ಯಕ್ಷೆ ಸುನಂದಾ, ಸದಸ್ಯರಾದ ಮಹೇಶ್‌ ಕೇರಿ, ಉಷಾ ನಾರಾಯಣ, ಚಂದ್ರಕಲಾ, ತ್ರಿವೇಣಿ, ವಸಂತಿ ಆರ್‌. ಶೆಟ್ಟಿ, ಸುಂದರಿ, ವಿಶ್ವನಾಥ, ಶೀನಪ್ಪ ನಾಯ್ಕ, ಶಶಿಕಿರಣ್‌ ರೈ ಉಪಸ್ಥಿತರಿದ್ದರು.

ಪಶುವೈದ್ಯಾಧಿಕಾರಿ ಡಾ| ಪ್ರಕಾಶ್‌ ನೋಡಲ್‌ ಅಧಿಕಾರಿಯಾಗಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೀತಾ ಬಿ.ಎಸ್‌., ಸ್ವಾಗತಿಸಿ, ವರದಿ ವಾಚಿಸಿ ವಂದಿಸಿದರು.
ಸಿಬಂದಿ ಜಾನಕಿ, ಗುಲಾಬಿ, ಕೇಶವ ಸಹಕರಿಸಿದರು.

ಜಿ.ಪಂ. ಸದಸ್ಯೆ ಸಭೆಗೆ ಬಂದೇ ಇಲ್ಲ
ಸ್ಥಳೀಯ ಜಿ.ಪಂ. ಸದಸ್ಯೆ ಐದು ವರ್ಷಗಳಲ್ಲಿ ಒಂದು ಬಾರಿಯೂ ಗ್ರಾಮಸಭೆಗೆ ಬಂದಿಲ್ಲವೇಕೆ? ಜಿ.ಪಂ. ವ್ಯಾಪ್ತಿಯಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ಸಮಸ್ಯೆಯನ್ನು ಅವರ ಬಳಿ ಹೇಳುವುದಾದರೂ ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು. ಅವರು ಜಿ.ಪಂ. ಅಧ್ಯಕ್ಷರೂ ಆಗಿರುವ ಕಾರಣ ಕಾರ್ಯಕ್ರಮದ ಒತ್ತಡವಿರಬಹುದು. ಅವರಿಗೆ ತಲುಪಿಸಬೇಕಾದ ಸಮಸ್ಯೆಯನ್ನು ಅವರಿಗೆ ಗ್ರಾ.ಪಂ. ಪತ್ರ ಮುಖೇನ ತಿಳಿಸಿದರೆ ಒಳಿತು ಎಂದು ಅಭಿಪ್ರಾಯ ವ್ಯಕ್ತವಾಯಿತು.

ಉಚಿತ ನೀರು ಕೊಡಿ
ಸರಕಾರ ಬಡವರಿಗೆ ಉಚಿತ ಅಕ್ಕಿ, ಉಚಿತ ವೈದ್ಯಕೀಯ ಸೇವೆ, ರೈತರ ಸಾಲಮನ್ನಾ ಮಾಡುತ್ತಿದೆ. ಆದರೆ ಸರಕಾರ ಏಕೆ ಬಡವರಿಗೆ ಕುಡಿಯುವ ನೀರನ್ನು ಉಚಿತವಾಗಿ ನೀಡುತ್ತಿಲ್ಲ? ಈ ವಿಚಾರವನ್ನು ನಿರ್ಣಯ ಮಾಡಿ ಸರಕಾರಕ್ಕೆ ಮನವಿ ಮಾಡಬೇಕು. ಕುಡಿಯುವ ನೀರಿನ ವಿದ್ಯುತ್‌ ಬಿಲ್‌ ಮನ್ನಾ ಮಾಡುವಂತೆ ಇಂಧನ ಸಚಿವರಿಗೂ ಮನವಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ವಿಷಯ ಪ್ರಸ್ತಾವಿಸಿದ ಸಂತೋಷ್‌ ಭಂಡಾರಿ ಚೆಲ್ಮೆತ್ತಾರು ಹಾಗೂ ರಾಜೇಶ್‌ ಪರ್ಪುಂಜ, ಈ ವಿಚಾರವನ್ನು ಕಳೆದ ಗ್ರಾಮಸಭೆಯಲ್ಲೇ ನಿರ್ಣಯ ಮಾಡಿತ್ತು. ಹಾಗಾಗಿ ಮುತುವರ್ಜಿ ವಹಿಸಿ ಸರಕಾರದ ಗಮನಕ್ಕೆ ತರುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.