ಸರ್ಕಾರಕ್ಕೆ ಕೇಳೀತೆ ಮೌನಿಗಳ ಕೂಗು?
Team Udayavani, Feb 25, 2020, 3:05 AM IST
ಬೆಂಗಳೂರು: ಕಿವಿಯೂ ಕೇಳದ.. ಮಾತನೂ ಆಡದ ನೂರಾರು ಮಂದಿ ಶ್ರವಣಮಾಂದ್ಯರು.. ಕೈ ಸನ್ನೆ ಮೂಲಕವೇ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಸ್ವಾತಂತ್ರ್ಯ ಉದ್ಯಾನವನದ ಮುಂಭಾಗದ ರಸ್ತೆಯಲ್ಲಿ ಸೋಮವಾರ ನಡೆದ ಈ ಮೌನ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.
ರಸ್ತೆಯ ಒಂದು ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಸಾರ್ವಜನಿಕರು ಒಮ್ಮೆ ನಿಂತು “ಸರ್ಕಾರ ಇವರ ನೋವು ಕೇಳಬಹುದಲ್ಲವೇ’ ಎಂದು ಮಾತನಾಡಿಕೊಳ್ಳುತ್ತಿದ್ದರು. ಆದರೆ, ಇವುಗಳ ಪರಿವೆಯೇ ಇಲ್ಲದೆ ತಮಗೆ ಗೊತ್ತಿರುವ ಅಂಗಿಕ ಭಾಷೆಯ ಮೂಲಕವೇ ಸರ್ಕಾರಕ್ಕೆ ಮೊರೆಯಿಡುತ್ತಿದ್ದ ಚಿತ್ರಣ ಕಂಡು ಬಂದಿತು.
ವೇದಿಕೆಯ ಮೇಲಿದ್ದ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಪ್ರಮುಖರು ತಮ್ಮ ಬೇಡಿಕೆಗಳನ್ನು ಸನ್ನೆಗಳ ಮೂಲಕವೇ ಹೇಳಿ ಈಡೇರಿಸುವಂತೆ ಒತ್ತಾಯಿಸಿದರು. ಪ್ರತಿಭಟನಾ ಸ್ಥಳದ ಸುತ್ತಮುತ್ತಲು ಬೇಡಿಕೆಗಳ ಪಟ್ಟಿಯಿರುವ ಬ್ಯಾನರ್‌ಗಳನ್ನು ಕಟ್ಟಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು.
ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಆಗಮಿಸಿ ಪ್ರತಿಭಟಕಾರರಿಂದ ಮನವಿ ಪತ್ರ ಸ್ವೀಕರಿಸಿ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿ ತೆರಳಿದರು. ಸುಮಾರು ಮೂರು ಗಂಟೆಗೂ ಅಧಿಕ ಕಾಲ ಕೈ ಸನ್ನೆಗಳ ಮೂಲಕವೇ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಬಳಿಕ ಗೊಂದಲವಿಲ್ಲದೆ ಪ್ರತಿಭಟನೆ ಮುಗಿಸಿದರು. ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತೂಮ್ಮೆ ಒಗ್ಗಟ್ಟಾಗಿ ಪ್ರತಿಭಟಿಸೋಣ ಎಂದು ಕೈ ಎತ್ತಿ ಒಗ್ಗಟ್ಟು ಪ್ರದರ್ಶಿಸಿದರು.
ಬೇಡಿಕೆಗಳು ಏನು?
-ಶೇ.70 ಕಿವುಡತನ ಇರುವವರಿಗೆ ಮಾತ್ರ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು
-ಕಿವುಡ-ಮೂಗರ ಶಾಲೆಗಳ ಶಿಕ್ಷಕರಿಗೆ ಸಂಕೇತ (ಸಂಜ್ಞೆ) ಶಿಕ್ಷಣ ತರಬೇತಿ ನೀಡಬೇಕು
-ದಿವ್ಯಾಂಗ ದಂಪತಿಯ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಬೇಕು
-ಶ್ರವಣ ಮಾಂದ್ಯ ಕ್ರೀಡಾಪಟುಗಳಿಗೆ ಪ್ರೋತ್ಸಾಹ
-ಜಿಲ್ಲೆಗೊಂದು ಕಿವುಡುತನ ಅಳೆಯುವ ಬೇರಾ ಯಂತ್ರ ನೀಡಬೇಕು
-ಪಿಂಚಣಿ ಮೊತ್ತವನ್ನು 10 ಸಾವಿರ ರೂ.ಗೆ ಹೆಚ್ಚಿಸಬೇಕು
-ಅಂಗವಿಕಲರ ನಿರ್ದೇಶನಾಲಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬೇರ್ಪಡಿಸಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.