ಎಐಸಿಸಿಯಲ್ಲಿ ಗೊಂದಲ ಕೆಪಿಸಿಸಿ ಮೇಲೆ ಎಫೆಕ್ಟ್


Team Udayavani, Feb 26, 2020, 3:08 AM IST

aiccyalli

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ರಾಜ್ಯ ನಾಯಕರ ಭಿನ್ನಾಭಿಪ್ರಾಯವಷ್ಟೇ ಕಾರಣವಲ್ಲ. ಎಐ ಸಿಸಿಯಲ್ಲಿಯೂ ಗೊಂದಲವಿರುವ ಕಾರಣ ರಾಜ್ಯ ಕಾಂಗ್ರೆಸ್‌ ನಾಯಕತ್ವದ ಗೊಂದಲ ಮುಂದುವರಿ ಯಲು ಕಾರಣವಾಗಿದೆ.

ಲೋಕಸಭೆ ಚುನಾವಣೆ ಫ‌ಲಿತಾಂಶದಿಂದ ನೈತಿಕ ಹೊಣೆ ಹೊತ್ತು ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದೇ ರೀತಿ ರಾಜ್ಯದಲ್ಲಿ ಉಪ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದರಿಂದ ಸಿದ್ದರಾಮಯ್ಯ ಪ್ರತಿ ಪಕ್ಷದ ನಾಯಕನ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿಯನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈಗ ಪೂರ್ಣ ಪ್ರಮಾಣದ ಅಧ್ಯಕ್ಷರ ನೇಮಕ ವಿಚಾರದಲ್ಲಿ ಹೈಕಮಾಂಡ್‌ ಮಟ್ಟದಲ್ಲಿ ಗೊಂದಲ ಎದುರಾಗಿದೆ. ಅದರ ಪರಿಣಾಮ ರಾಜ್ಯ ಕಾಂಗ್ರೆಸ್‌ ನಾಯಕತ್ವದ ನೇಮಕದ ಮೇಲೂ ಉಂಟಾ ಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಮಧ್ಯಂತರ ಅಧ್ಯಕ್ಷೆ ಯಾಗಿ ಆರು ತಿಂಗಳು ಕಳೆಯುತ್ತಿರುವುದ ರಿಂದ ಪಕ್ಷಕ್ಕೆ ಪೂರ್ಣ ಪ್ರಮಾಣದ ಅಧ್ಯಕ್ಷ ರನ್ನು ನೇಮಿಸಲು ಪಕ್ಷದ ವಲಯದಲ್ಲಿ ಸಾಕಷ್ಟು ಕಸರತ್ತು ನಡೆದಿದ್ದು, ರಾಹುಲ್‌ ಗಾಂಧಿ ಯನ್ನೇ ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿ ಸುವಂತೆ ಪಕ್ಷದ ಬಹುತೇಕ ನಾಯ ಕರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಆದರೆ, ರಾಹುಲ್‌ ಗಾಂಧಿ ತಾವು ನೀಡಿರುವ ರಾಜೀನಾಮೆ ನಿರ್ಧಾರಕ್ಕೆ ಬದ್ಧರಾಗಿದ್ದು, ನೂತನ ಅಧ್ಯಕ್ಷರ ನೇಮಕ ಕಗ್ಗಂಟಾಗಿದೆ ಎಂದು ಹೇಳಲಾಗುತ್ತಿದೆ.

ಹೇಗಾದರೂ ಮಾಡಿ ರಾಹುಲ್‌ ಗಾಂಧಿಯವರನ್ನೇ ಒಪ್ಪಿಸಿ ಮಾರ್ಚ್‌ ಅಂತ್ಯದಲ್ಲಿ ಜೈಪುರ್‌ನಲ್ಲಿ ನಡೆಯುವ ಎಐಸಿಸಿ ಕಾರ್ಯಕಾರಿ ಸಮಿತಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲು ಅನೇಕ ನಾಯಕರು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಅಹಮದ್‌ ಪಟೇಲ್‌, ದಿಗ್ವಿಜಯ್‌ ಸಿಂಗ್‌ ಸೇರಿದಂತೆ ಕೆಲವು ಹಿರಿಯ ನಾಯಕರು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವ ರನ್ನು ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ತೆರೆ ಮರೆಯಲ್ಲಿ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಖರ್ಗೆ ನೇಮಕದ ಗೊಂದಲ: ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಷ್ಟ್ರ ಅಥವಾ ರಾಜ್ಯ ರಾಜಕಾರಣದಲ್ಲಿ ಯಾವ ಸ್ಥಾನ ನೀಡ ಬೇಕೆನ್ನುವ ಗೊಂದಲವೂ ಪಕ್ಷದ ನಾಯಕರಲ್ಲಿ ಉಂಟಾ ಗಿದೆ ಎನ್ನಲಾಗುತ್ತಿದೆ. ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಪ್ಪದಿದ್ದರೆ, ಖರ್ಗೆಯವರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್‌ನ‌ ಹಿರಿಯ ನಾಯಕರ ಒಂದು ಬಣ ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೆ, ಖರ್ಗೆಯವರನ್ನು ರಾಜ್ಯದಲ್ಲಿ ಪಕ್ಷದ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಒಂದು ಬಣದ ನಾಯಕರು ಹೈ ಕಮಾಂಡ್‌ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡು ವಿನ ಭಿನ್ನಾಭಿಪ್ರಾಯವನ್ನು ನಿಯಂತ್ರಿಸಿ ಪಕ್ಷವನ್ನು ಸರಿದಾರಿಗೆ ತರಲು ಲೆಕ್ಕಾಚಾರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ, ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷರಾದರೆ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರನ್ನು ಸಿಡಬ್ಲೂಸಿ ಸದಸ್ಯ ರನ್ನಾಗಿ ಮಾಡಬಹುದು ಎನ್ನುವುದು ಸಿದ್ದರಾಮಯ್ಯ ವಿರೋಧಿ ಬಣದ ನಾಯಕರ ಲೆಕ್ಕಾಚಾರ ಎನ್ನಲಾಗು ತ್ತಿದೆ. ಆದರೆ, ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಲು, ಸಿದ್ದರಾಮಯ್ಯ ಅವರನ್ನು ಸಮ ನ್ವಯ ಸಮಿತಿ ಅಧ್ಯಕ್ಷರ ನೇಮಕಕ್ಕೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಮೂಲಕ ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾಗದಂತೆ ತಡೆ ಯಲು ಎಲ್ಲ ರೀತಿಯ ಪ್ರಯತ್ನ ಮುಂದುವರೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ಎಐಸಿಸಿ ಅಧ್ಯಕ್ಷರ ನೇಮಕ ಗೊಂದಲ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.