ದೆಹಲಿ ಗಲಭೆ: ಸಾವಿನ ಸಂಖ್ಯೆ 18ಕ್ಕೆ ಏರಿಕೆ: ಪೊಲೀಸರು ಸೇರಿದಂತೆ 180 ಜನರಿಗೆ ಗಂಭೀರ ಗಾಯ
Team Udayavani, Feb 26, 2020, 9:40 AM IST
ದೆಹಲಿ: ಈಶಾನ್ಯ ದಿಲ್ಲಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ಆರಂಭವಾಗಿರುವ ಹಿಂಸಾಚಾರವು ತಾರಕಕ್ಕೇರಿದ್ದು ಬುಧವಾರ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಫ್ರಾಬಾದ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಹಿಂಸಾಚಾರ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ
ಘಟನೆಯಲ್ಲಿ 50 ಪೊಲೀಸರು ಸೇರಿದಂತೆ 180 ಮಂದಿ ಗಾಯಗೊಂಡಿದ್ದು, ಅವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಹಿಂಸಾಚಾರ ಹತ್ತಿಕ್ಕಲು ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಜಫ್ರಾಬಾದ್, ಮೌಜ್ ಪುರ, ಭಜನ್ ಪುರ ಚೌಕ್, ಚಾಂದ್ ಬಾಗ್, ಕರ್ವಾಲ್ ನಗರ್, ಖುರೇಜಿ ಖಾಸ್, ಬಾಬರ್ ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಹರಸಾಹಸ ನಡೆಸಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ಪಿಎಫ್) ವಿಶೇಷ ಮಹಾ ನಿರ್ದೇಶಕರಾಗಿದ್ದ ಎಸ್.ಎನ್. ಶ್ರೀವಾಸ್ತವ ಅವರನ್ನು ನವ ದೆಹಲಿಯ ವಿಶೇಷ ಪೊಲೀಸ್ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ) ನೇಮಕ ಮಾಡಲಾಗಿದೆ.
Delhi: Latest visuals from Maujpur, Seelampur and Gokulpuri. Security personnel deployed in these areas. #NortheastDelhi pic.twitter.com/wPoPwsnDDH
— ANI (@ANI) February 26, 2020
ಹಿಂಸಾಚಾರ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.