ಸೌಕರ್ಯ ಅಭಿವೃದ್ಧಿಗೆ ಪ್ರಥಮ ಆದ್ಯತೆ

ಮುದ್ದೇಬಿಹಾಳ ಪಟ್ಟಣ ಸಮಗ್ರ ಅಭಿವೃದ್ಧಿಗೆ 13 ಕೋಟಿ ರೂ. ಅನುದಾನ: ನಡಹಳ್ಳಿ

Team Udayavani, Feb 26, 2020, 12:52 PM IST

26-February-07

ಮುದ್ದೇಬಿಹಾಳ: ಬಡವರು ಯಾವುದೇ ಜಾತಿಯವರಾಗಿರಲಿ, ಯಾವುದೇ ರಾಜಕೀಯ ಪಕ್ಷಕ್ಕೆ ಓಟು ಹಾಕಿರಲಿ ಅದು ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದ್ದಲ್ಲ. ಮುದ್ದೇಬಿಹಾಳ ಪಟ್ಟಣದ ಅತಿ ಹಿಂದುಳಿದ ಪಿಲೇಕೆಮ್ಮ ನಗರ, ಇಂದಿರಾ ನಗರ, ಅಂಬೇಡ್ಕರ್‌ ನಗರ ಸೇರಿದಂತೆ ವಿವಿಧ ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ಎ.ಎಸ್‌.ಪಾಟೀಲ (ನಡಹಳ್ಳಿ) ಹೇಳಿದ್ದಾರೆ.

ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ ಪಿಡಬ್ಲೂಡಿ ಇಲಾಖೆ ವತಿಯಿಂದ ಹಾಕಿಕೊಂಡಿರುವ ಸಿಸಿ ರಸ್ತೆ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅಲ್ಲಲ್ಲಿ ನಡೆದ ಬಹಿರಂಗ ಸಭೆಗಳಲ್ಲಿ ಅವರು ಮಾತನಾಡಿದರು.

ವಿಜಯಪುರದ ಗುತ್ತಿಗೆದಾರ ಎಸ್‌.ಎಸ್‌. ಆಲೂರ ಎನ್ನುವವರು ಬಹುದೊಡ್ಡ ಗುತ್ತಿಗೆದಾರರು. ದೊಡ್ಡ ದೊಡ್ಡ ರಸ್ತೆ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ ಜಿಲ್ಲೆಯಲ್ಲಿ ಒಳ್ಳೆ ಹೆಸರು ಹೊಂದಿದ್ದಾರೆ. ಅವರು ಸಿಸಿ ರಸ್ತೆಯಂಥ ಸಣ್ಣ ಪುಟ್ಟ ಕೆಲಸ ಹಿಡಿಯುವುದಿಲ್ಲ. ಆದರೆ ಅವರ ಕೆಲಸದ ಗುಣಮಟ್ಟ ಮೆಚ್ಚಿಕೊಂಡು ಅವರು ಕಿರಕಿರಿ ಆಗುತ್ತದೆ ನಾ ಒಲ್ಲೆ ಎಂದರೂ ಅವರನ್ನೇ ಸಿಸಿ ರಸ್ತೆ ಕೆಲಸಗಳಿಗೆ ಗುತ್ತಿಗೆ ಹಿಡಿಯುವಂತೆ ಮನವೊಲಿಸಿ ಈ ಕೆಲಸ ಹಾಕಿಸಿದ್ದೇನೆ. ಗುಣಮಟ್ಟದಲ್ಲಿ ಅವರು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.

ಮುದ್ದೇಬಿಹಾಳ ಪಟ್ಟಣಕ್ಕೆ ಸೀಮಿತವಾಗಿ 13 ಕೋಟಿ ರೂ. ಅನುದಾನ ತಂದಿದ್ದೇನೆ. ಇದು ಮುದ್ದೇಬಿಹಾಳದ ಇತಿಹಾಸದಲ್ಲೇ ಅತಿ ಹೆಚ್ಚಿನ ಅನುದಾನ. ಇಷ್ಟಕ್ಕೇ ತೃಪ್ತಿ ಆಗಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತರಲು ಸಿದ್ಧನಿದ್ದೇನೆ. ಪುರಸಭೆ ಅನುದಾನವನ್ನು ಸದ್ಭಳಕೆ ಮಾಡಿಕೊಳ್ಳಲು ಯಾವುದೇ ತಕರಾರಾರಿಲ್ಲ. ಪುರಸಭೆಗೆ ಒಳ್ಳೆ ಕೆಲಸಗಾರ ನಗರಸಭೆಯಲ್ಲಿ ಕಮಿಷನರ್‌ ಆಗಿ ಕೆಲಸ ಮಾಡಿರುವರೊಬ್ಬರು ಇಲ್ಲಿಗೆ ಮುಖ್ಯಾಧಿಕಾರಿಯಾಗಿ ಬಂದಿದ್ದಾರೆ. ಅವರ ಪರಿಶ್ರಮವನ್ನು ನಾವೆಲ್ಲ ಬಳಸಿಕೊಳ್ಳಬೇಕು. ಇಲ್ಲಿ ಅನೇಕ ಸಮಸ್ಯೆಗಳಿದ್ದು ಅವುಗಳಿಗೆಲ್ಲ ಪರಿಹಾರ ಕಂಡುಕೊಳ್ಳಬೇಕಾಗಿದೆ. ಇದಕ್ಕೆ ಮುಖ್ಯಾಧಿ ಕಾರಿ ಸಿದ್ದರಿದ್ದು ಅವರಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಪಟ್ಟಣದಲ್ಲಿ ಬಡವರು ಎಲ್ಲಿ ವಾಸ ಮಾಡುತ್ತಾರೋ ಆ ಓಣಿಗಳನ್ನು ಮೊದಲ ಪ್ರಾಶಸ್ತ್ಯವಾಗಿ ತೆಗೆದುಕೊಂಡು ಕೆಲಸ ಮಾಡಿಸುತ್ತೇನೆ. ಸ್ಲಂ ಬೋರ್ಡ್‌ ಯೋಜನೆ ಅಡಿ ವಸತಿ ಹೀನರಿಗೆ ಮನೆ ಕಟ್ಟಿಸಿಕೊಡುವ ಯೋಜನೆ ಇಲ್ಲಿಗೆ ತರುತ್ತೇನೆ. ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸದಾ ಬದ್ಧನಿದ್ದೇನೆ. 350 ಮನೆಗಳು ಮಂಜೂರಾಗಿದ್ದು ಮತ್ತೇ 375 ಮನೆ ಕಟ್ಟಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದೇನೆ. ಪ್ರತಿ ಬಡಾವಣೆಗೂ ಭೇಟಿ ನೀಡಿ ಕೆಲಸದ ಪ್ರಗತಿ ಪರಿಶೀಲಿಸುತ್ತೇನೆ. ಜನರನ್ನು ನೇರವಾಗಿ ಭೇಟಿ ಮಾಡಿ ಸಮಸ್ಯೆ ಆಲಿಸುತ್ತೇನೆ ಎಂದರು.

ಕುಡಿಯುವ ನೀರು, ಉತ್ತಮ ರಸ್ತೆ, ವಸತಿ ಹೀನರಿಗೆ ಮನೆ, ನಿವೇಶನ ಕೊಡುವುದು, ಬಡಜನರ ಕಷ್ಟ ಸುಖಕ್ಕೆ ಸ್ಪಂದಿ ಸುವುದು ನನ್ನ ಗುರಿಯಾಗಿದೆ. 1000 ಬಡವರಿಗೆ 20×30 ನಿವೇಶನ ಕೊಟ್ಟು ಮನೆ ಕಟ್ಟಿಸಿಕೊಡುವ ತೀರ್ಮಾನ ಮಾಡಿದ್ದು ಒಂದು ವಾರದಲ್ಲಿ ಇದು ತಯಾರಾಗುತ್ತದೆ. ಪುರಸಭೆಗೆ ಆದಾಯ ಕಡಿಮೆ ಇದ್ದು ಇದನ್ನು ಹೆಚ್ಚಿಸುವ ಕೆಲಸ ಮಾಡಿದಲ್ಲಿ, ನಿಯಮಿತವಾಗಿ ತೆರಿಗೆ ತುಂಬಿದಲ್ಲಿ ಅಭಿವೃದ್ಧಿ ಕಾರ್ಯ ಶರವೇಗದಲ್ಲಿ ನಡೆಯುವುದು ಸಾಧ್ಯವಾಗುತ್ತದೆ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಡಾ| ಪರಶುರಾಮ ಪವಾರ, ಪುರಸಭೆ ಸದಸ್ಯರಾದ ಸೋನುಬಾಯಿ ನಾಯಕ, ಅಶೋಕ ವನಹಳ್ಳಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಪ್ರಮುಖರಾದ ಶಾಂತಗೌಡ ಪಾಟೀಲ ನಡಹಳ್ಳಿ, ವಿಕ್ರಮ್‌ ಓಸ್ವಾಲ್‌, ರಾಜು ಕಲಬುರ್ಗಿ, ಬಿ.ಮುರಳಿ, ಮನೋಹರ ತುಪ್ಪದ, ಶರಣಯ್ಯ ಬೂದಿಹಾಳಮಠ, ಡಾ| ವೀರೇಶ ಪಾಟೀಲ, ಡಾ| ಎಸ್‌.ಬಿ.ವಡವಡಗಿ, ರಾಜಶೇಖರ ಹೊಳಿ, ನಾನಪ್ಪ ನಾಯಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.