ಪ್ರಧಾನಮಂತ್ರಿ ಆವಾಸ್ ಯೋಜನೆ ಅನುದಾನ ಬಿಡುಗಡೆಗೆ ಒತ್ತಾಯ
Team Udayavani, Feb 26, 2020, 3:33 PM IST
ಗುತ್ತಲ: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿನ ಕೇಂದ್ರ ಸರ್ಕಾರದಿಂದ ಫಲಾನುಭವಿಗಳಿಗೆ ಅನುದಾನ ಜಮೆ ಆಗದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹಾವೇರಿ ರಸ್ತೆಯಲ್ಲಿರುವ ಬಿರೇಶ್ವರ ದೇವಸ್ಥಾನ ಹತ್ತಿರದ ಕರವೇ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಕಲ್ಮಠ, ಎಸ್‌ಆರ್‌ಎಸ್ ವೃತ್ತದ ಮೂಲಕ ಪಂಚಾಯಿತಿಗೆ ಆಗಮಿಸಿತು.
ನಂತರ ಪಪಂ ಉತ್ತರ ಭಾಗದಲ್ಲಿನ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ, ಸರ್ಕಾರ ಹೆಚ್ಚುವರಿ ಹಣ ಬಿಡುಗಡೆ ಮಾಡದೆ ಇರುವ ಕಾರಣಕ್ಕೆ ಫಲಾನುಭವಿಗಳಿಗೆ ತೊಂದರೆಯಾಗಿದೆ. ಸಾಲ ಮಾಡಿರುವ ಫಲಾನುಭವಿಗಳಿಗೆ ತೀವ್ರ ತೊಂದರೆಯಾಗಿದೆ. ಒಟ್ಟಾರೆ ಫಲಾನುಭವಿಗಳ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಆದಷ್ಟು ಬೇಗ ಹಣವನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗವುದೆಂದು ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಮಾಜಿಕ ಅಭಿವೃದ್ಧಿ ತಜ್ಞ ನಾಗರಾಜ ಗುಳೇದ ಮನವಿ ಸ್ವೀಕರಿಸಿ ಮಾತನಾಡಿ, ಕೆಲವು ಸಮಸ್ಯೆಗಳಿದ್ದು ಹಣ ಜಮೆಗೆ ತೊಂದರೆಯಾಗಿದೆ. ರಾಜೀವ ಗಾಂಧಿ ವಸತಿ ನಿಗಮದಿಂದ ನಮಗೆ ನಿರ್ದೇಶನ ಬಂದಿದ್ದು, ಅದರಂತೆ ಪರಿಶೀಲಿಸಿ ಫಲಾನುಭವಿಗಳಿಗೆ ಶೀಘ್ರ ಹಣ ಜಮೆ ಆಗುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಕರವೇ ಜಿಲ್ಲಾ$ಪ್ರಧಾನ ಕಾರ್ಯದರ್ಶಿ ಯಶವಂತಗೌಡ್ರ ದೊಡ್ಡಗೌಡ್ರ, ಚನ್ನಪ್ಪ ಹೊನ್ನಮ್ಮನವರ, ದಾದಪೀರ್ ಖಾಲೇಕಾಲನವರ, ಶೇಖರ ನರಸಣ್ಣನವರ, ಯುವ ಘಟಕದ ಅಧ್ಯಕ್ಷ ಫಕೃದ್ಧೀನ ಅಂಗಡಿಕಾರ,ಪ್ರಧಾನ ಕಾರ್ಯದರ್ಶಿ ಕರಬಸು ಕುರುಬಗೇರಿ, ಗೌಸಪಾಕ ಬಾಲೇಭಾಯಿ, ಶಿವು ಬೆನ್ನೂರ, ರೇಹಾನ ಮುಜಾವರ ಸೇರಿದಂತೆ ಯೋಜನೆ ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.