ದೆಹಲಿ ದಂಗೆ: ಉದ್ರಿಕ್ತ ಗುಂಪಿನಿಂದ ಬಸ್ ಚಾಲಕನ ಮೇಲೆ ಹಲ್ಲೆ;ಇಲ್ಲಿದೆ Viral Video ಸತ್ಯಾಂಶ
Team Udayavani, Feb 26, 2020, 5:53 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರು ಮತ್ತು ಪರ ಪ್ರತಿಭಟನಾಕಾರರ ನಡುವೆ ಕಳೆದ ಆದಿತ್ಯವಾರದಂದು ಸಣ್ಣದಾಗಿ ಪ್ರಾರಂಭಗೊಂಡ ಘರ್ಷಣೆ ವಿಕೋಪಕ್ಕೆ ತಿರುಗಿ ಒಟ್ಟು 20 ಜನರ ಪ್ರಾಣಕ್ಕೆ ಎರವಾಗಿದೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.
ಈ ನಡುವೆ ಪ್ರತಿಭಟನಾಕಾರರು ಬಸ್ಸು ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ರಾಜಕೀಯ ನಾಯಕರ ಸಹಿತ ಹಲವರು ಈ ವಿಡಿಯೋವನ್ನು ತಮ್ಮ ತಮ್ಮ ಅಕೌಂಟ್ ಗಳಲ್ಲಿ ಶೇರ್ ಮಾಡುತ್ತಿದ್ದಾರೆ. ಮತ್ತು ದೆಹಲಿ ದಂಗೆಯ ಸಂದರ್ಭದಲ್ಲಿ ನಿರ್ಧಿಷ್ಟ ಕೋಮಿಗೆ ಸೇರಿದ ಉದ್ರಿಕ್ತ ಪ್ರತಿಭಟನಾಕಾರರು ಈ ಕೃತ್ಯವನ್ನು ನಡೆಸುತ್ತಿದ್ದಾರೆ ಎಂಬ ಟಿಪ್ಪಣಿಯನ್ನೂ ಸಹ ಇದಕ್ಕೆ ನೀಡಿ ಶೇರ್ ಮಾಡಲಾಗತ್ತಿದೆ.
1990 repeats
History repeats
Kashmir repeats pic.twitter.com/mK3bOgG8Gh
— Shilpa Nair (@shilpamdas) February 24, 2020
ಆದರೆ ಈ ವಿಡಿಯೋದ ಅಸಲಿಯತ್ತೇ ಬೇರೆ ಇದೆ. ವಾಸ್ತವವಾಗಿ ಇದು ಫೆಬ್ರವರಿ 18ರಂದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದ್ದ ಘಟನೆಯ ವಿಡಿಯೋ ಆಗಿದ್ದು ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಕಾರೊಂದನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿದ್ದಾಗ ಕೆಲವು ಕಿಡಿಗೇಡಿಗಳ ಗುಂಪು ಚಾಲಕನ ಮೇಲೆ ಹಲ್ಲೆ ನಡೆಸಿ ಬಸ್ಸಿಗೆ ಹಾನಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹಲ್ಲೆ ತಡೆಯಲು ಬಂದ ಬಸ್ಸುನಿರ್ವಾಹಕನೂ ಸಹ ಗಾಯಗೊಂಡಿದ್ದಾನೆ. ಈ ಕುರಿತಾದ ವರದಿ ಮರಾಠಿ ಸುದ್ದಿ ವಾಹಿನಿಯಲ್ಲೂ ಪ್ರಸಾರವಾಗಿತ್ತುಮತ್ತು ಇಂಗ್ಲಿಷ್ ವೆಬ್ ಸೈಟ್ ಒಂದು ಇದರ ಫಾಲೋ ಅಪ್ ವರದಿಯನ್ನೂ ಮಾಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ 18 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಆದರೆ ಈ ವಿಡಿಯೋ ತುಣುಕನ್ನು ತಮ್ಮ ಸಾಮಾಜಿಕ ಜಾಲತಾಣ ಅಕೌಂಟ್ ಗಳಲ್ಲಿ ಹಾಕಿಕೊಂಡಿರುವ ಜಿತೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ, ‘ಶಾಂತಿದೂತರು ದೇಶದ ಅಭಿವೃದ್ಧಿಗೆ ಸಲ್ಲಿಸುತ್ತಿರುವ ಕೊಡುಗೆ’ ಎಂಬ ಶೀರ್ಷಿಕೆಯಡಿ ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಜಿತೇಂದ್ರ ಪ್ರತಾಪ್ ಸಿಂಗ್ ಅವರ ಪ್ರೊಫೈಲ್ ಚಿತ್ರದಲ್ಲಿ ಪ್ರಧಾನಿ ಮೋದಿ ಅವರ ಜೊತೆಗಿರುವ ಫೊಟೋ ಇದೆ.
ಈ ವಿಡಿಯೋವನ್ನು ಅರ್ವಿಲ್ ಶರ್ಮಾ ಎಂಬಾಕೆ ಟ್ವೀಟ್ ಮಾಡಿದ್ದು ಈಕೆಗೆ 16,400 ಫಾಲೊವರ್ಸ್ ಗಳಿದ್ದಾರೆ, ಇದೇ ಟ್ವೀಟನ್ನು ಕೇರಳ ಬಿಜೆಪಿ ನಾಯಕಿ ಶಿಲ್ಪಾ ನಾಯರ್ ಅವರು ರೀಟ್ವೀಟ್ ಮಾಡಿದ್ದಾರೆ.
This is the horror being played on the streets of Delhi right now.
Did you see the skull cap?
They have turned this country into Syria, where Hindus are shit scared.
My relatives living in Maujpur haven’t stepped out of their home since 3 days.
— Aviral Sharma (@sharmaAvl) February 25, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.