ಹೇಮೆ ಕಾಲುವೆ ಆಧುನೀಕರಣಕ್ಕೆ 500 ಕೋಟಿ ಬಿಡುಗಡೆ
Team Udayavani, Feb 27, 2020, 3:00 AM IST
ತುರುವೇಕೆರೆ: ಕ್ಷೇತ್ರ ವ್ಯಾಪ್ತಿಯ ಹೇಮಾವತಿ ನಾಲಾ ಆಧುನೀಕರಣಕ್ಕೆ ಸರ್ಕಾರ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಮಸಾಲಾ ಜಯರಾಮ್ ಹೇಳಿದರು.
ಅನುದಾನ ತಂದಿದ್ದ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿ ಗೌರವ ಸ್ವೀಕರಿಸಿ ಮಾತನಾಡಿ, ತಾಲೂಕಿನ ಮೂಲಕ ಹಾದು ಹೋಗುವ 70 ಕಿ.ಮೀ.ನಿಂದ 166 ಕಿ.ಮೀ.ವರೆಗೆ ನಾಲೆ ಆಧುನೀಕರಣವಾಗಲಿದೆ. ಇದು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯಾಗಿದ್ದು, ಪೂರ್ಣವಾದ ನಂತರ ರೈತರು ನೀರಿಗೆ ಹಾಹಾಕಾರ ಪಡಬೇಕಿಲ್ಲ ಎಂದು ಅಭಯ ನೀಡಿದರು.
800 ಕ್ಯೂಸೆಕ್ ನೀರು ಹರಿಯುವ ಪ್ರಮಾಣ ಇತ್ತಾದರೂ ಕಾಲುವೆಗಳಲ್ಲಿ ಗಿಡಗಂಟಿಗಳು ಮತ್ತು ಹೂಳು ತುಂಬಿದ್ದರಿಂದ ಕಡಿಮೆ ನೀರು ಹರಿಯುತಿತ್ತು. ಕಾಮಗಾರಿ ಮುಗಿದ ನಂತರ ಸರಿ ಸುಮಾರು 2500 ಕ್ಯೂಸೆಕ್ ನೀರು ಹರಿಯಲಿದೆ. ಏ.2ರಿಂದ ಮತ್ತೆ ತಾಲೂಕಿನ ಕೆರೆ ಕಟ್ಟೆಗಳಿಗೆ ಹೇಮೆ ನೀರು ಹರಿಸಲು ಸರ್ಕಾರ ನಿರ್ಧರಿಸಿದೆ. 1 ತಿಂಗಳು ಹರಿಯಲಿದ್ದು, ಆ ಸಂದರ್ಭ ನಾಲಾ ಕಾಮಗಾರಿ ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ಹೇಳಿದರು.
ಶೀಘ್ರ ಪೂಜೆ: ನಾಲಾ ಆಧುನೀಕರಣ ಕಾಮಗಾರಿಗೆ ಶೀಘ್ರ ಪೂಜೆ ನೆರವೇರಿಸಲಾಗುವುದು. ಹೇಮಾವತಿ ನದಿಯಲ್ಲಿ 18.5 ಟಿಎಂಸಿ ನೀರು ಇದ್ದು, ಜಿಲ್ಲೆಗೆ ಇನ್ನೂ 8.5 ಟಿಎಂಸಿ ಹರಿಯಲಿದೆ. ಎತ್ತಿನಹೊಳೆ ಯೋಜನೆಯು ತಾಲೂಕಿನ ಮೂಲಕ ಹಾದು ಹೋಗಲಿದೆ. ಇದಕ್ಕಾಗಿ ತಾಲೂಕಿನ ಸುಮಾರು 52 ಎಕರೆ ಜಮೀನು ಬಳಕೆಯಾಗಿದೆ. ಜಮೀನು ನೀಡಿರುವ ರೈತರಿಗೆ ಪರಿಹಾರ ಧನ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.
ಅಲ್ಲದೇ ತಾಲೂಕಿಗೆ ಒಂದು ಟಿಎಂಸಿ ನೀರೂ ಹರಿಯಲಿದೆ ಎಂದು ಹೇಳಿದರು. ಹಲವಾರು ವರ್ಷಗಳಿಂದ ಹೇಮಾವತಿ ನಾಲೆಗಳಲ್ಲಿ ನೀರು ಹರಿಯದಿರುವ ಕಾರಣಕ್ಕೆ ತಾಲೂಕಿನ ಡಿ 8 ಮತ್ತು ಡಿ 10 ನಾಲೆಗಳಲ್ಲಿ ಹೂಳು ತುಂಬಿದ್ದು, ತೆಗೆಯುವ ಸಲುವಾಗಿ ಸುಮಾರು 600 ಕೋಟಿ ರೂ. ಸರ್ಕಾರ ಕಾವೇರಿ ನೀರಾವರಿ ನಿಗಮದ ಮೂಲಕ ಬಿಡುಗಡೆ ಮಾಡಲು ಸಿದ್ಧವಿದೆ ಎಂದರು.
ಜಿಲ್ಲೆಯ ಹಾಗೂ ಕ್ಷೇತ್ರಕ್ಕೆ ಅಗತ್ಯವಿರುವ ನೀರು ಹರಿದಲ್ಲಿ ರೈತರ ನೀರಿನ ಹಾಹಾಕಾರ ಶೇ.99ರಷ್ಟು ಇಲ್ಲದಂತಾಗುತ್ತದೆ. ಯೋಜನೆಗೆ ಕಾರ್ಯಗತಗೊಳ್ಳಲು ಕನಿಷ್ಠ ಒಂದೂವರೆ ವರ್ಷ ಬೇಕು ಎಂದು ಹೇಳಿದರು. ತಾಲೂಕು ಬಿಜೆಪಿ ವಕ್ತಾರ ವಕೀಲ ಮುದ್ದೇಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ದುಂಡರೇಣುಕಯ್ಯ, ಬಿಜೆಪಿ ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಮಾಚೇನಹಳ್ಳಿ ವಿಶ್ವನಾಥ್, ಜಯಶೀಲಾ, ಸಾಗರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.