ಅಕ್ರಮ ಮದ್ಯ ಮಾರಾಟ ತಡೆಗೆ ಸಹಕಾರ ನೀಡಿ

Team Udayavani, Feb 27, 2020, 3:00 AM IST

madya-akrama

ಕುಣಿಗಲ್‌: ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಬದ್ಧನಾಗಿದ್ದು, ಜನರ ಸಹಕಾರ ಬೇಕು ಎಂದು ಶಾಸಕ ಡಾ.ಎಚ್‌.ಡಿ.ರಂಗನಾಥ್‌ ತಿಳಿಸಿದರು. ಹುತ್ರಿದುರ್ಗ ಹೋಬಳಿ ಜೋಡಿಹೊಸಹಳ್ಳಿಯಲ್ಲಿ ತಾಪಂ, ಗ್ರಾಪಂ, ಆರೋಗ್ಯ ಇಲಾಖೆ, ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಅಕ್ರಮ ಮದ್ಯ ಮಾರಾಟ ತಡೆಯಲು ಮುಂದಾದರೆ ಕೆಲ ವ್ಯಕ್ತಿಗಳು ಇದನ್ನೇ ರಾಜಕೀಯ ದಾಳವಾಗಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು. ತಾಲೂಕಿನಲ್ಲಿ ಸ್ಥಗಿತಗೊಂಡಿರುವ ನೀರಾವರಿ ಯೋಜನೆ ಅನುಷ್ಠಾನಕ್ಕೆ 800 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್‌ಜಾರಕಿಹೊಳಿ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. 1500 ಅಡಿ ಆಳ ಕೊರೆದರೂ ನೀರು ಸಿಗುತ್ತಿಲ್ಲ.

ಇದರಿಂದ ಜನರು ಕುಡಿಯುವ ನೀರಿಗೆ ಪರಿತಪಿಸುವಂತಾಗಿದೆ. ಈ ನಿಟ್ಟಿನಲ್ಲಿ ಶ್ರೀರಂಗ ಏತಾ ನೀರಾವರಿ ಯೋಜನೆಗೆ ಅಂದಿನ ಕಾಂಗ್ರೆಸ್‌ ಸರ್ಕಾರ 300 ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ ಪೈಪ್‌ಲೈನ್‌ ಕಾಮಗಾರಿಗೆ ರೈತರು ಜಮೀನು ಬಿಟ್ಟು ಕೊಡದ್ದರಿಂದ ಕಾಮಗಾರಿ ವಿಳಂಬವಾಯಿತು. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

80 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ರೈತರ ಸಮಸ್ಯೆ ನಿವಾರಿಸಲು ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ “ಕಂದಾಯ ನಡಿಗೆ ರೈತರ ಮನೆ ಮನೆಗೆ’ ಹೊಸ ಯೋಜನೆ ಕಂದಾಯ ಇಲಾಖೆ ಅಧಿಕಾರಿಗೊಂದಿಗೆ ಸೇರಿ ಅನುಷ್ಠಾನಕ್ಕೆ ತರಲಾಗಿದೆ. ಇದು ರಾಜ್ಯದಲ್ಲೇ ಪ್ರಥಮವಾಗಿದೆ. ಅಲ್ಲದೆ ಶೇ.60ರಷ್ಟು ಇರುವ ಮಣ್ಣಿನ ರಸ್ತೆ ಡಾಂಬರೀಕರಣ ಮಾಡಲು ಈಗಾಗಲೇ 300 ಕೋಟಿ ರೂ. ಖರ್ಚು ಮಾಡಲಾಗಿದೆ.

ತಾಲೂಕಿನಲ್ಲಿ ತೀರ ಹಿಂದುಳಿದಿರುವ ಹುತ್ರಿದುರ್ಗ ಹೋಬಳಿ ರಸ್ತೆ ಅಭಿವೃದ್ಧಿಗೆ 80 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ತಿಳಿಸಿದರು. ತಾಪಂ ಸದಸ್ಯ ಐ.ಎ.ವಿಶ್ವನಾಥ್‌ ಮಾತನಾಡಿ, ರೈತರು ಹೆಚ್ಚಾಗಿ ವ್ಯವಸಾಯದ ಕಡೆ ಗಮನಹರಿಸುತ್ತಿದ್ದಾರೆ. ಆದರೆ ಆರೋಗ್ಯದ ಕಡೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಈ ದಿಸೆಯಲ್ಲಿ ರೈತರನ್ನು ಆರೋಗ್ಯವಂತರನ್ನಾಗಿ ಮಾಡಲು ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌, ಆರೋಗ್ಯ ಇಲಾಖೆ,

ಗ್ರಾಮ ಪಂಚಾಯಿತಿಗಳು ತಾಲೂಕಿನ ವಿವಿದೆಡೆ ಉಚಿತ ಆರೋಗ್ಯ ಶಿಬಿರ ನಡೆಸಿ ಔಷಧಿ, ಮಾತ್ರೆ, ವಾಕಿಂಗ್‌ ಸ್ಟಿಕ್‌, ಕನ್ನಡಕ ಮೊದಲಾದ ಸೌಲಭ್ಯ ಕಲ್ಪಿಸುತ್ತಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಟಿಎಚ್‌ಒ ಜಗದೀಶ್‌, ಗ್ರಾಪಂ ಅಧ್ಯಕ್ಷೆ ಬೋರಮ್ಮ, ಸದಸ್ಯರಾದ ಭಾಗ್ಯಮ್ಮ, ಕೊಲ್ಲಾಪುರಿ, ಪಿಡಿಓ ಲೋಕೇಶ್‌, ಮುಖಂಡ ಕೆಂಪೀರೆಗೌಡ ಮತ್ತಿತರರು ಇದ್ದರು.

ಶಿಬಿರದಲ್ಲಿ 350ಕ್ಕೂ ಅಧಿಕ ಜನರು ತಪಾಸಣೆಗೆ ಒಳಗಾಗಿದ್ದಾರೆ. ಈ ಪೈಕಿ 40 ಮಂದಿ ರಕ್ತದೊತ್ತಡ, 53 ಜನ ಮಧುಮೇಹ, ಇಬ್ಬರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಪತ್ತೆಯಾಗಿದೆ. ಅವರಿಗೆ ಉಚಿತ ಚಿಕಿತ್ಸೆ ಹಾಗೂ ಔಷಧಿ ವೆಚ್ಚ ಟ್ರಸ್ಟ್‌ ಭರಿಸುತ್ತದೆ. ತಾಲೂಕಿನಲ್ಲಿ ಔಷಧಿ ಅಂಗಡಿ ಪ್ರಾರಂಭಿಸುವ ಮೂಲಕ ಬಿ.ಪಿ. ಹಾಗೂ ಸಕ್ಕರೆ ಕಾಯಿಲೆ ರೋಗಿಗಳಿಗೆ ಉಚಿತ ಮಾತ್ರೆ ಕೊಡಲು ಚಿಂತಿಸಲಾಗಿದೆ.
-ಡಾ.ಎಚ್‌.ಡಿ.ರಂಗನಾಥ್‌, ಶಾಸಕ

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.