ಪಾಣಾಜೆ: ಡಂಪಿಂಗ್‌ ಯಾರ್ಡ್‌ನಂತಾದ ಜಾಂಬ್ರಿ ಪರಿಸರ

ಕೋಳಿ ತ್ಯಾಜ್ಯದ ದುರ್ವಾಸನೆ, ರಾಶಿ ರಾಶಿ ಘನ ತ್ಯಾಜ್ಯ, ಸೂಕ್ತ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

Team Udayavani, Feb 27, 2020, 4:51 AM IST

JADU-27

ಪಾಣಾಜೆ: ಪಾಣಾಜೆ ಗ್ರಾಮದ ಐತಿಹಾಸಿಕ ಸ್ಥಳ ಜಾಂಬ್ರಿ ಗುಹೆ ಪರಿಸರ ಡಂಪಿಂಗ್‌ ಯಾರ್ಡ್‌ ಆಗಿ ಪರಿವರ್ತನೆಯಾಗುತ್ತಲಿದೆ. ಈ ಪರಿಸರ ತುಂಬಾ ಕೋಳಿ ತ್ಯಾಜ್ಯ, ಘನ ತ್ಯಾಜ್ಯಗಳು ತುಂಬಿ ಹೋಗುತ್ತಿವೆ. ಈಗಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದೆ ಪೂರ್ಣ ಪ್ರಮಾಣದ ಡಂಪಿಂಗ್‌ ಯಾರ್ಡ್‌ ಆಗಿ ಪರಿವರ್ತನೆಗೊಳ್ಳುವ ಭೀತಿಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ರಕ್ಷಿತಾರಣ್ಯ ಪ್ರದೇಶ
ಮಂಗಳೂರು ವಿಭಾಗದ ಪುತ್ತೂರು ವಲಯ ವ್ಯಾಪ್ತಿಗೆ ಬರುವ ರಕ್ಷಿತಾರಣ್ಯ ಪ್ರದೇಶದಲ್ಲಿ ಜಾಂಬ್ರಿ ಪ್ರದೇಶ ಇದೆ. ಸಮತಟ್ಟದ ಪ್ರದೇಶದ ಒಂದು ಭಾಗ ಕೇರಳವಾದರೆ ಮತ್ತೂಂದು ಭಾಗ ಬಂಟಾಜೆ ರಕ್ಷಿತಾರಣ್ಯ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಅಲ್ಲಲ್ಲಿ ಕೋಳಿ ತ್ಯಾಜ್ಯಗಳನ್ನು ಚೀಲಗಳಲ್ಲಿ, ಪ್ಲಾಸ್ಟಿಕ್‌ ಕ್ಯಾನ್‌ಗಳಲ್ಲಿ ಎಸೆಯಲಾಗಿದೆ. ಕಾಡು ಪ್ರಾಣಿಗಳು ತ್ಯಾಜ್ಯಗಳನ್ನು ಜನವಸತಿ ಪ್ರದೇಶಗಳಿಗೆ ತಂದು ಬೀಸಾಡುತ್ತಿವೆ. ಪ್ರದೇಶವೆಲ್ಲ ದುರ್ವಾಸನೆ ಬೀರುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇವೆ. ಹೀಗೆ ಮುಂದುವರಿದರೆ ಮಳೆಗಾಲದಲ್ಲಿ ತ್ಯಾಜ್ಯ ನೀರಿನ ಮೂಲವನ್ನು ಸೇರಿ ಸಾಂಕ್ರಾಮಿಕ ರೋಗ ಗಳು ಬರುವ ಸಾಧ್ಯತೆ ಇದೆ. ಅಲ್ಲದೆ ಪ್ಲಾಸ್ಟಿಕ್‌ ಬಾಟಲಿಗಳು ಎರಡೂ ಭಾಗಗಳಲ್ಲಿ ಕಂಡು ಬರುತ್ತಿವೆ.

ಮದ್ಯ ಸೇವನೆ
ಜಾಂಬ್ರಿ ಪರಿಸರವು ಸಂಜೆ ಸಮಯದಲ್ಲಿ ಮದ್ಯ ಸೇವನೆ ತಾಣವಾಗುತ್ತಿರುವುದಕ್ಕೆ ಅಲ್ಲಿ ಸಿಕ್ಕಿರುವ ಮದ್ಯದ ಬಾಟಲಿಗಳು ಸಾಕ್ಷಿಯಾಗುತ್ತಿವೆ. ಮದ್ಯವನ್ನು ಇಲ್ಲಿ ತಂದು ಸೇವನೆ ಮಾಡಿ ಪರಿಸರವನ್ನು ಹಾಳುಗೆಡಹುವ ಕಿಡಿಗೇಡಿಗಳು ಮದ್ಯದ ಬಾಟಲಿಗಳನ್ನು ಪುಡಿ ಮಾಡಿ ಎಸೆಯುತ್ತಿದ್ದಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕರಿಂದ ಬರುತ್ತಿವೆ. ಸಂಜೆ ಮತ್ತು ರಾತ್ರಿ ಕಿಡಿಗೇಡಿಗಳು ಈ ಪರಿಸರ ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್‌ ಮತ್ತು ಅರಣ್ಯ ಇಲಾಖೆ ಗಸ್ತು ನಿರತರಾಗಿ ಕಿಡಿಗೇಡಿಗಳನ್ನು ಗುರುತಿಸಿ ಶಿಕ್ಷಿಸುವ ಕೆಲಸವಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗಿಳಿಯಾಲು ಮನೆಯವರ ಕಾಳಜಿ
ಜಾಂಬ್ರಿ ಗುಹೆಯನ್ನು ಕಾಣಲು ಬರುವ ಪ್ರವಾಸಿಗರಿಗೆ ಮನದಟ್ಟು ಮಾಡುವ ಕೆಲಸ ಗಿಳಿಯಾಲು ಮನೆತನದಿಂದ ಆಗುತ್ತಿದೆ. ಕೆಲವು ವರ್ಷಗಳಿಂದ ಈ ಪ್ರದೇಶಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಈ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸ್ವತ್ಛತೆ ಪಾಠ, ಗುಹೆಯ ವಿಶೇಷತೆ ಬಗ್ಗೆ ಗಿಳಿಯಾಲು ಮನೆಯವರು ಮನವರಿಕೆ ಮಾಡುತ್ತಾರೆ. ಸ್ವತ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಜಾಂಬ್ರಿ ಗುಹಾ ಪರಿಸರದಲ್ಲಿ ಸ್ವತ್ಛತೆ ಬಗ್ಗೆ ನಾಮ ಫ‌ಲಕ ಅಳವಡಿಸಲಾಗಿತ್ತು. ಆದರೆ ಅದೂ ಈಗ ನಾಪತ್ತೆಯಾಗಿದೆ.

ಸೂಕ್ತ ಕ್ರಮ ಕೈಗೊಳ್ಳಿ
ಹಲವು ತಿಂಗಳಿಂದ ಜಾಂಬ್ರಿ ಗುಹಾ ಪ್ರದೇಶದಲ್ಲಿ ಕೋಳಿ ತ್ಯಾಜ್ಯ ಹಾಗೂ ಇತರ ತ್ಯಾಜ್ಯ ಹೆಚ್ಚುತ್ತಿದೆ. ತ್ಯಾಜ್ಯಗಳನ್ನು ಎಸೆಯವವರು ಮತ್ತು ಪರಿಸರವನ್ನು ಹಾಳುಗೆಡುವವರನ್ನು ಸಂಬಂಧಪಟ್ಟ ಇಲಾಖೆಯವರು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಗಿಳಿಯಾಲು ಜಿ. ಮಹಾಬಲೇಶ್ವರ ಭಟ್‌.

ಇಲಾಖೆಯವರು ಗಮನಹರಿಸಿ
ಜಾಂಬ್ರಿ ಪ್ರದೇಶವು ರಕ್ಷಿತಾರಣ್ಯ ಪ್ರದೇಶದಲ್ಲಿ ಇದೆ. ಜಾಂಬ್ರಿ ಪರಿಸರವನ್ನು ಹಾನಿ ಮಾಡುವ ಕಿಡಿಗೇಡಿಗಳನ್ನು ಗುರುತಿಸಿ ಪೊಲೀಸ್‌ ಮತ್ತು ಅರಣ್ಯ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
– ನಾರಾಯಣ ಪೂಜಾರಿ, ಅಧ್ಯಕ್ಷ, ಪಾಣಾಜೆ ಗ್ರಾ.ಪಂ.

ಕ್ರಮ ಕೈಗೊಳ್ಳುತ್ತೇವೆ
ತ್ಯಾಜ್ಯದ ಬಗ್ಗೆ ಗ್ರಾಮ ಪಂಚಾಯತ್‌ ಗಮನಕ್ಕೆ ತರಲಾಗಿದೆ. ಕೋಳಿ ತ್ಯಾಜ್ಯವನ್ನು ಎಸೆಯುವವರನ್ನು ಗುರುತಿಸಿ ಎಚ್ಚರಿಕೆ ನೀಡಿದ್ದೇವೆ. ಪ್ರವಾಸಿ ತಾಣವಾಗಿರುವುದರಿಂದ ತ್ಯಾಜ್ಯವನ್ನು ಎಸೆಯುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಮೋಹನ್‌, ಅರಣ್ಯ ರಕ್ಷಕ, ಪಾಣಾಜೆ ವಲಯ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.