ದೇಶದಲ್ಲಿ ಅರಾಜಕತೆ, ದ್ವೇಷ ಸೃಷ್ಟಿಗೆ ಯತ್ನ: ವಿಜಯ ಕುಮಾರ
ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ
Team Udayavani, Feb 27, 2020, 5:56 AM IST
ಉಡುಪಿ: ದೇಶದಲ್ಲಿ ಪೌರತ್ವ ಕಾಯ್ದೆ ನೆಪದಲ್ಲಿ ಅರಾಜಕತೆ, ದ್ವೇಷ ಸೃಷ್ಟಿಗೆ ದೇಶದ್ರೋಹಿ ಸಂಘಟನೆಗಳು ನಿರಂತರ ಷಡ್ಯಂತ್ರ ನಡೆಸುತ್ತಿವೆ. ದೇಶದೊಳಗಿನ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಧರ್ಮದ್ರೋಹಿ ಪಿಎಫ್ಐ ಸಂಘಟನೆಯನ್ನು ನಿರ್ಬಂಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕಾರ ವಿಜಯ ಕುಮಾರ್ ಒತ್ತಾಯಿಸಿದರು.
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ ಭಾಗವಾಗಿ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಪಿಎಫ್ಐ ಸಂಘಟನೆ ದೇಶದ ಆಂತರಿಕ ಭದ್ರತೆಗೆ ಆತಂಕ ತರುತ್ತಿದೆ. ದೇಶವಿರೋಧಿ ಕೃತ್ಯಗಳ ಮೂಲಕ ತನ್ನ ಚಟುವಟಿಕೆಯನ್ನು ವಿವಿಧ ರೂಪಗಳಲ್ಲಿ ಅದು ವಿಸ್ತರಿಸುತ್ತಿದೆ. ದೇಶದ್ರೋಹಿ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅದು ಬೆಂಬಲ ಒದಗಿಸುತ್ತಿದೆ ಎಂದು ಕಿಡಿಕಾರಿದರು.
ಶಾಹಿನ್‌ಭಾಗ್ ಪ್ರಕರಣ, ಅಮೂಲ್ಯಾ ಲಿಯೋನ್‌ಳ ಪಾಕಿಸ್ಥಾನ ಪರ ಹೇಳಿಕೆ, ಹುಬ್ಬಳ್ಳಿ, ಕಾಶ್ಮೀರಿ ವಿದ್ಯಾರ್ಥಿಗಳ ಪಾಕ್ ಪರ ಜೈಕಾರ, ಶಿಕಾರಿ ಚಲನಚಿತ್ರ ಈ ಎಲ್ಲ ಪ್ರಕರಣಗಳಲ್ಲಿ ದೇಶದ್ರೋಹಿ ಸಂಘಟನೆಗಳ ಕೈವಾಡವಿದೆ. ಇದರ ಹಿಂದೆ ರಾಜಕೀಯ ಪಕ್ಷಗಳ ಪಿತೂರಿಯಿದೆ. ಬಹಿರಂಗವಾಗಿ ದೇಶವಿರೋಧಿ ಹೇಳಿಕೆಗಳನ್ನು ದೇಶದೊಳಗೆ ನೀಡುವು ದನ್ನು ಗಮನಿಸಿದರೆ ಅಂತಾರಾಷ್ಟ್ರೀಯ ಪ್ರಚೋದನೆಗೆ ವಿಪಕ್ಷಗಳು ಕುಮ್ಮಕ್ಕು ನೀಡುತ್ತಿವೆ ಎನ್ನುವುದು ತಿಳಿದು ಬರುತ್ತದೆ. ದೇಶದಲ್ಲಿ ಸುಧಾರಣೆ ತರುವ ಹೊತ್ತಲ್ಲಿ ಇಂತಹ ಕೃತ್ಯ ನಡೆಸುವ ಸಂಘಟನೆ ಹಾಗೂ ವ್ಯಕ್ತಿಗಳ ವಿರುದ್ಧ ಕೇಂದ್ರ ಸರಕಾರ ಶಿಸ್ತು ಕ್ರಮ ಜರಗಿಸಬೇಕು ಎಂದರು.
ದೇಶದಲ್ಲಿ ಹುಟ್ಟಿ ಬೆಳೆದು ಇಲ್ಲಿನ ಸವಲತ್ತು ಪಡೆದು ದೇಶವಿರೋಧಿ ಹೇಳಿಕೆ ನೀಡುತ್ತಿರುವವರನ್ನು ಸುಮ್ಮನೆ ಬಿಡದೆ ಕಠಿನ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಹಿಂದೂ ಜನಜಾಗೃತಿ ಸಮಿತಿ ಸದಸ್ಯರಾದ ಮಟ್ಟಾರು ಸತೀಶ್ ಕಿಣಿ, ನವೀನ್ ಕುಮಾರ್, ವಿಜಯ ಕುಮಾರ್, ನಟೇಶ್, ಗಣೇಶ ಮೇಸ್ತ, ರಮಾನಂದ ಚಾತ್ರ, ಪವಿತ್ರ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.
ಮನವಿ
ಪ್ರತಿಭಟನೆಯಲ್ಲಿ ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಸಂಘಟನೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಅನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗಳಿಗೆ ಕ್ರಮಕ್ಕೆ ಒತ್ತಾಯಿಸುವ ಮನವಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.