ಹುಬ್ಬಳ್ಳಿ ರೈಲ್ವೆ ನಿಲ್ದಾಣ ಭದ್ರತೆಗೆ “ಆರ್‌ಎಸ್‌ಪಿಎಫ್‌’ ಬಲ


Team Udayavani, Feb 27, 2020, 12:01 PM IST

huballi-tdy-1

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣ ಹಾಗೂ ಯಾರ್ಡ್‌ನಲ್ಲಿ ಹೆಚ್ಚಿನ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೆ ವಿಶೇಷ ಸುರಕ್ಷಾ ಬಲದ (ಆರ್‌ಎಸ್‌ಪಿಎಫ್‌) ಕಂಪನಿಯೊಂದು ಹುಬ್ಬಳ್ಳಿಗೆ ಆಗಮಿಸಿದೆ.

ರೈಲ್ವೆ ನಿಲ್ದಾಣ ಹಾಗೂ ಆವರಣಗಳಲ್ಲಿ ಅಹಿತಕರ ಘಟನೆಗಳು, ಅವಘಡಗಳನ್ನು ತಡೆಗಟ್ಟಲು ಹಾಗೂ ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪ್ರಯಾಣಿಕರ ಸುರಕ್ಷತೆ ಹಾಗೂ ನಿಲ್ದಾಣ ಮತ್ತು ಯಾರ್ಡ್‌ನಲ್ಲಿಹೆಚ್ಚಿನ ಭದ್ರತೆ ದೃಷ್ಟಿಯಿಂದ ಆರ್‌ಎಸ್‌ಪಿಎಫ್‌ನ ಅಂದಾಜು 98 ಜನರುಳ್ಳ ಒಂದು ಕಂಪನಿಯು ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗಕ್ಕೆ ಆಗಮಿಸಿದೆ. ಈ ಕಂಪನಿಯು ಮಂಗಳವಾರ ರಾತ್ರಿಯೇ ನಗರಕ್ಕೆ ಆಗಮಿಸಿದ್ದು, ಬುಧವಾರದಿಂದ ಕರ್ತವ್ಯದಲ್ಲಿ ತೊಡಗಿದೆ.

ಈ ವಿಶೇಷ ಪಡೆಯು ರೈಲ್ವೆ ನಿಲ್ದಾಣ ಮತ್ತು ಯಾರ್ಡ್‌ ಹಾಗೂ ರಾತ್ರಿ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಪ್ರಮುಖ 10 ರೈಲುಗಳಲ್ಲಿ ಭದ್ರತೆ ಕೈಗೊಳ್ಳಲಿದೆ. ಈ ವಿಶೇಷ ಪಡೆಯನ್ನು ಭದ್ರತೆಗಾಗಿ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರ, ಪ್ಲಾಟ್‌ಫಾರ್ಮ್ಗಳು, ಯಾರ್ಡ್‌, ಗದಗ ಮತ್ತು ಧಾರವಾಡ ಎಂಡ್‌ ಕಡೆಗೆ ಪೆಟ್ರೋಲಿಂಗ್‌ ಹಾಗೂ ಟ್ರ್ಯಾಕ್‌ ಪೆಟ್ರೋಲಿಂಗ್‌ ಗೆ ನಿಯೋಜಿಸಲಾಗಿದೆ.

ನಿಲ್ದಾಣದ ಎಲ್ಲೆಡೆಯ ಪಾಯಿಂಟ್ಸ್‌ಗಳಲ್ಲಿ ಭದ್ರತೆ ಒದಗಿಸಲಾಗಿದೆ. ಈ ವಿಶೇಷ ಪಡೆಯು ಮೀಸಲು ಬಲವಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಭದ್ರತೆ ಮತ್ತು ಸುರಕ್ಷತೆ ಕೈಗೊಳ್ಳುವಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಲಿದೆ. ಭದ್ರತೆ ಮತ್ತು ಸುರಕ್ಷತಾ ದೃಷ್ಟಿಯಿಂದ ಸದ್ಯ ಈ ವಿಶೇಷ ಪಡೆಯನ್ನು ಎರಡು ತಿಂಗಳ ಮಟ್ಟಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಕರೆಯಿಸಲಾಗಿದೆ. ಈ ಪಡೆಯು ಕೆಎಸ್‌ಆರ್‌ಪಿ ರೀತಿ ತುರ್ತು ಪರಿಸ್ಥಿತಿಯಲ್ಲಿ ಇಲಾಖೆಯ ಇತರೆಡೆಯ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.

ನಿಲ್ದಾಣದಲ್ಲಿ ಅನುಮಾನಸ್ಪದ ವಸ್ತುಸ್ಫೋಟ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಅಕ್ಟೋಬರ್‌ 21ರಂದು ಅನುಮಾನಸ್ಪದ ವಸ್ತುವೊಂದು ಸ್ಫೋಟಗೊಂಡು ಆತಂಕ ಸೃಷ್ಟಿಸಿತ್ತು. ಈ ವಸ್ತುವನ್ನು ವಿಜಯವಾಡ-ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌ನ ಬೋಗಿಯಲ್ಲಿ ಇಡಲಾಗಿತ್ತು. ಅದನ್ನು ತಪಾಸಣೆ ಮಾಡುವಾಗ ಸ್ಫೋಟಗೊಂಡು ವೆಂಡರ್‌ನೊಬ್ಬ ಗಂಭೀರ ಗಾಯಗೊಂಡಿದ್ದ, ರೈಲ್ವೆ ಸ್ಟೇಶನ್‌ ಮಾಸ್ತರ್‌ ಅವರ ಕಚೇರಿಗೆ ಅಳವಡಿಸಿದ್ದ ಗಾಜು ಪುಡಿ ಪುಡಿಯಾಗಿದ್ದನ್ನು ಸ್ಮರಿಸಬಹುದು. ಈ ಸ್ಫೋಟ ಘಟನೆ ಕುರಿತು ಸ್ಥಳೀಯ ರೈಲ್ವೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಲೇ ಇದೆ. ಆದರೆ ಈ ಸ್ಫೋಟಕ ವಸ್ತುವನ್ನು ಯಾರು ಎಲ್ಲಿಂದ ಕಳುಹಿಸಿದ್ದರು ಎಂಬುದರ ಕುರಿತು ಇದುವರೆಗೂ ತನಿಖಾ ತಂಡಕ್ಕೆ ಸುಳಿವು ದೊರೆತ್ತಿಲ್ಲ.

ನಗರದ ರೈಲ್ವೆ ನಿಲ್ದಾಣದಲ್ಲಿ ಅಹಿತಕರ ಘಟನೆ, ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಭದ್ರತೆಗಾಗಿ ಹಾಗೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಆರ್‌ಎಸ್‌ಪಿಎಫ್‌ನ ಒಂದು ಕಂಪನಿಯು ಆಗಮಿಸಿದ್ದು, ಈ ಪಡೆಯು ರೈಲ್ವೆ ನಿಲ್ದಾಣ ಸೇರಿದಂತೆ ಯಾರ್ಡ್‌, ರೈಲುಗಳಲ್ಲಿ ಭದ್ರತೆ ಕೈಗೊಳ್ಳಲಿದೆ. ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಈ ಪಡೆಯು ಇತರೆ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸಲಿದೆ. ಸದ್ಯ ಎರಡು ತಿಂಗಳ ಮಟ್ಟಿಗೆ ಈ ಪಡೆಯು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಲಿದೆ. -ವಲ್ಲೇಶ್ವರ ಟಕೋಲಾ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ, ನೈಋತ್ಯ ರೈಲ್ವೆ ವಲಯ.

 

-ಶಿವಶಂಕರ ಕಂಠಿ

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.