ಗೋವಿನಜೋಳ ಖರೀದಿ ಕೇಂದ್ರಕ್ಕೆ ಆಗ್ರಹ
Team Udayavani, Feb 27, 2020, 3:32 PM IST
ಮುಂಡರಗಿ: ಪಟ್ಟಣದಲ್ಲಿ ಗೋವಿನಜೋಳ ಖರೀದಿ ಕೇಂದ್ರವನ್ನು ತೆರೆದು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು. ಖರೀದಿ ಕೇಂದ್ರವನ್ನು ಸರಕಾರವು ತೆರೆಯದೇ ಇದ್ದರೆ ಮಾ. 5ರಂದು ತಹಶೀಲ್ದಾರ್ ಕಾರ್ಯಾಲಯದ ಎದುರು ರೈತರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತ ಮುಖಂಡ ಕೆ.ಎ. ದೇಸಾಯಿ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷದ ಹಿಂದೆ 2018ರ ಫೆಬ್ರವರಿ ಮತ್ತು ಮಾರ್ಚ್ ಅವಧಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 2,800 ರೂ.ಗಳಿಗೆ ಕ್ವಿಂಟಲ್ ಗೋವಿನಜೋಳ ಖರೀದಿಸಲಾಗಿತ್ತು. ಆದರೆ ಈ ವರ್ಷ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕನಿಷ್ಠ 1,355 ರೂ. ಗಳು, ಗರಿಷ್ಠ 1,609 ರೂ.ಗೆ ಕ್ವಿಂಟಲ್ ಗೋವಿನಜೋಳವು ಮಾರಾಟವಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಆದ್ದರಿಂದ ರೈತರಿಗೆ ಅನುಕೂಲ ಕಲ್ಪಿಸಲು ಗೋವಿನಜೋಳದ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಬೇಕು. ಧಾರವಾಡದ ಕೆಎಂಎಫ್‌ನ ಆಡಳಿತ ಮಂಡಳಿಯು ಗೋವಿನಜೋಳ 2200 ರೂ.ಗಳ ಕ್ವಿಂಟಲ್‌ನಂತೆ ಖರೀದಿ ಮಾಡುತ್ತಿದ್ದಾರೆ. ಆದರೆ ಕೆಎಂಎಫ್‌ನವರು ರೈತರಿಂದ ಗೋವಿನಜೋಳ ಖರೀದಿಸದೆ ಟೆಂಡರ್ ಮೂಲಕ ಖರೀದಿದಾರರಿಂದ ಖರೀದಿಸುತ್ತಿದ್ದಾರೆ. ಆದಕಾರಣ ಕೆಎಂಎಫ್‌ನವರು ರೈತರಿಂದ ನೇರವಾಗಿ ಗೋವಿನಜೋಳ ಖರೀದಿಸುವಂತೆ ಸರಕಾರವು ಆದೇಶಿಸಬೇಕು. ಸರಕಾರವು ಪ್ರತಿ ಕ್ವಿಂಟಲ್ ಗೋವಿನಜೋಳಕ್ಕೆ ಕನಿಷ್ಟ 3000 ರೂ.ಗಳ ಬೆಂಬಲ ಬೆಲೆ ನೀಡಿ ಖರೀದಿಸಲು ಮುಂದಾಗಬೇಕು ಎಂದರು.
ಅಂದಪ್ಪ ತಿಪ್ಪಣ್ಣವರ, ಹನುಮಂತಪ್ಪ ಹೊಸಮನಿ, ಗೂರಪ್ಪ ಇಟಗಿ, ಮುದಿಯಪ್ಪ ತಿಪ್ಪಣ್ಣವರ, ನೀಲಪ್ಪ ಡೋಣಿ, ಶರಣಪ್ಪ ಹೊಸಮನಿ, ಸಿದ್ದಪ್ಪ ಇಟಗಿ, ಉಮೇಶ ಲಕ್ಕುಂಡಿ, ಗುರುನಾಥ ಲಕ್ಕುಂಡಿ, ನಿಂಗನಗೌಡ ಗೌಡರ, ಬಸವನಗೌಡ ಗೌಡರ, ಗ್ಯಾನಪ್ಪ ಹೊಸಮನಿ, ಈರಪ್ಪ ಚವಡಿ, ನಿಂಗನಗೌಡ ಗೌಡರ ಸೇರಿದಂತೆ ಮತ್ತಿತರರು ಇದ್ದರು. ಸುದ್ದಿಗೋಷ್ಠಿ ನಂತರ ರೈತರು ತಹಶೀಲ್ದಾರ್ ಕಾರ್ಯಾಲಯಕ್ಕೆ ಗೋವಿನಜೋಳ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ತಹಶೀಲ್ದಾರ್ ಡಾ| ವೆಂಕಟೇಶ ನಾಯಕಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.