ದೇವದುರ್ಗ ಕಾರಾಗೃಹಕ್ಕೆ ಗ್ರಹಣ!

ಕೈದಿಗಳ ಸಂಖ್ಯೆ ಇಳಿಮುಖ ನೆಪದಲ್ಲಿ ಪುನಾರಂಭಿಸಲು ಹಿಂದೇಟು-ಸಿಬ್ಬಂದಿ ಬೇರೆಡೆ ನಿಯೋಜನೆ „ ಕಾರಾಗೃಹ-ವಸತಿ ಗೃಹ ದುರಸ್ತಿ

Team Udayavani, Feb 27, 2020, 4:04 PM IST

27-Feburary-17

ದೇವದುರ್ಗ: ಪಟ್ಟಣದಲ್ಲಿನ ಕಾರಾಗೃಹ ದುರಸ್ತಿಗೊಳಿಸಿ ಅಗತ್ಯ ಸೌಲಭ್ಯ ಕಲ್ಪಿಸಿದ್ದರೂ ಪುನಾರಂಭ ಮಾಡದ್ದರಿಂದ ಸಣ್ಣಪುಟ್ಟ ಪ್ರಕರಣಗಳಲ್ಲಿ ಬಂಧಿತ ಕೈದಿಗಳನ್ನು ಲಿಂಗಸುಗೂರು ಇಲ್ಲವೇ ರಾಯಚೂರು ಜೈಲಿಗೆ ಕರೆದೊಯ್ಯಬೇಕಿದೆ. ಇದರಿಂದ ಪೊಲೀಸರು ಅಲೆದಾಡುವಂತಾಗಿದೆ.

ಇಲ್ಲಿನ ಕಾರಾಗೃಹ ಶಿಥಿಲಗೊಂಡಿದ್ದರಿಂದ 40 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಲಾಗಿದೆ. ಕುಡಿಯುವ ನೀರು, ಬಾಗಿಲು ದುರಸ್ತಿ ಇತರೆ ಸೌಲಭ್ಯ ಕಲ್ಪಿಸಲಾಗಿದೆ. ಕಾಮಗಾರಿ ಹೊಣೆಯನ್ನು ಪಿಡಬ್ಲೂಡಿ ಇಲಾಖೆಗೆ ವಹಿಸಲಾಗಿತ್ತು. ಆದರೆ ಕೈದಿಗಳ ಸಂಖ್ಯೆ ಕೊರತೆ ಮತ್ತು ಇತರೆ ನೆಪವೊಡ್ಡಿ ಕಾರಾಗೃಹ ಆರಂಭಕ್ಕೆ ಹಿಂದೇಟು ಹಾಕಲಾಗುತ್ತಿದೆ. ಅಲ್ಲದೇ ಇಲ್ಲಿನ ಕಾರಾಗೃಹ ಸಿಬ್ಬಂದಿ, ಅಧಿಕಾರಿಗಳನ್ನು ಬೇರೆಡೆ ನಿಯೋಜನೆ ಮಾಡಲಾಗಿದೆ. ಜಿಲ್ಲಾ ಕಾರಾಗೃಹ ಅಧಿಕಾರಿಗಳು ಇಲ್ಲಿನ ಕಾರಾಗೃಹ ಆರಂಭಕ್ಕೆ ಮುಂದಾಗುತ್ತಿಲ್ಲ ಎನ್ನಲಾಗಿದೆ.

ಪೊಲೀಸರ ಅಲೆದಾಟ: ದೇವದುರ್ಗ ಕಾರಾಗೃಹ ಆರಂಭಿಸಲು ಹಿಂದೇಟು ಹಾಕುತ್ತಿರುವುದರಿಂದ ಕಳ್ಳತನ ಸಣ್ಣಪುಟ್ಟ ಅಪರಾಧ, ಕೊಲೆ ಮುಂತಾದ ಪ್ರಕರಣಗಳಲ್ಲಿ ಬಂಧಿಯಾಗುವ ಆರೋಪಿಗಳನ್ನು ಲಿಂಗಸುಗೂರು ಇಲ್ಲವೇ ರಾಯಚೂರು ಕಾರಾಗೃಹಕ್ಕೆ ಕಳಿಸಲಾಗುತ್ತಿದೆ. ಕೋರ್ಟ್‌ನಲ್ಲಿ ಪ್ರಕರಣ ನಡೆಯುವಾಗ ಕೈದಿಗಳನ್ನು ಪಟ್ಟಣಕ್ಕೆ ಕರೆತರಲು ಮತ್ತೇ ಆಯಾ ಜೈಲಿಗೆ ಬಿಟ್ಟು ಬರಲು ಪೊಲೀಸರು ಅಲೆದಾಡಬೇಕಿದೆ. ಅಲ್ಲದೇ ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರೂ ಅಲೆದಾಡಬೇಕಿದೆ. ಇನ್ನು ಜೈಲಿನಲ್ಲಿ ಬಂಧಿಯಾಗುವ ಕೈದಿಗಳ ಸಂಬಂಧಿಕರು ಮಾತನಾಡಿಸಿಕೊಂಡು ಬರಲು ಲಿಂಗಸುಗೂರು, ರಾಯಚೂರಿಗೆ ಅಲೆದಾಡುವಂತಾಗಿದೆ. ಇದರಿಂದ ಸಮಯ, ಹಣ ವ್ಯರ್ಥವಾಗುತ್ತಿದೆ.

ವಸತಿಗೃಹಗಳು ಖಾಲಿ: ಕಾರಾಗೃಹದಿಂದ ಸುಮಾರು ಅರ್ಧ ಕಿ.ಮೀ. ಅಂತರದಲ್ಲಿ ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಸತಿಗೃಹಗಳಿವೆ. ಇವುಗಳನ್ನು 9 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಲಾಗಿದೆ. ಆರೇಳು ವಸತಿಗೃಹಗಳು ಇದ್ದರೂ ಒಬ್ಬರೇ ಅಧಿಕಾರಿ ವಾಸವಿದ್ದಾರೆ. ವಸತಿಗೃಹಗಳ ಸುತ್ತ ಜಾಲಿಗಿಡಗಳು ಬೆಳೆದಿವೆ. ಹಾವು, ಚೇಳು, ಇತರೆ ವಿಷಜಂತುಗಳ ವಾಸಸ್ಥಾನವಾಗಿದೆ. ಇನ್ನು ವಸತಿಗೃಹಕ್ಕೆ ಕುಡಿಯುವ ನೀರಿನ ಸೌಲಭ್ಯ, ಬೀದಿ ದೀಪಗಳ ಸೌಲಭ್ಯ ಇಲ್ಲದ್ದರಿಂದ ಈ ಪ್ರದೇಶ ಬಿಕೋ ಎನ್ನುತ್ತಿದೆ.

ಕೈದಿಗಳ ಸಂಖ್ಯೆ ಇಳಿಮುಖ: ಕೈದಿಗಳ ಸಂಖ್ಯೆ ಇಳಿಮುಖವಾಗಿದ್ದರಿಂದ ಇಲ್ಲಿನ ಕಾರಾಗೃಹವನ್ನು ಮೇಲಾಧಿಕಾರಿಗಳು ತಾತ್ಕಾಲಿಕವಾಗಿ ಬಂದ್‌ ಮಾಡಿದ್ದಾರೆ ಎನ್ನಲಾಗಿದೆ. ಅಧಿಕಾರಿ ಸೇರಿ ಒಟ್ಟು 8 ಜನ ಸಿಬ್ಬಂದಿ ಇದ್ದರು. ಒಬ್ಬ ಸಿಬ್ಬಂದಿಗೆ 5ರಿಂದ 6 ಜನ ಕೈದಿಗಳು ಇರಬೇಕು. 8 ಜನ ಸಿಬ್ಬಂದಿಗೆ ತಕ್ಕಂತೆ ಇಲ್ಲಿ 40 ಜನ ಕೈದಿಗಳು ಇರಬೇಕೆಂಬ ನಿಯಮವಿದೆ. ಆದರೆ ಕೈದಿಗಳ ಸಂಖ್ಯೆ ಇಳಿಮುಖವಾಗಿದ್ದರಿಂದ ಜೈಲು ಆರಂಭಕ್ಕೆ ಮೇಲಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಇಲ್ಲಿರುವ ಸಿಬ್ಬಂದಿಯನ್ನು ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬೇರೆ ಜಿಲ್ಲೆಗಳಿಗೆ ತಾತ್ಕಾಲಿಕವಾಗಿ ನಿಯೋಜನೆ ಮಾಡಲಾಗಿದೆ. ಆದರೆ ಜೈಲಿನಲ್ಲಿ ಕೈದಿಗಳಿರದಿದ್ದರೂ, ವಸತಿಗೃಹಗಳಲ್ಲಿ ಸಿಬ್ಬಂದಿ ಇರದಿದ್ದರೂ ಇವುಗಳ ದುರಸ್ತಿಗೆ 40 ಲಕ್ಷ ರೂ. ವ್ಯಯಿಸಿದ್ದು ವ್ಯರ್ಥವಾಗಿದೆ.

ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಕಾರಾಗೃಹ ಆರಂಭಕ್ಕೆ ಮುಂದಾಗಬೇಕೆಂದು ದಲಿತ ಮುಖಂಡ ಆಂಜನೇಯ ಆಗ್ರಹಿಸಿದ್ದಾರೆ.

ಕೈದಿಗಳ ಸಂಖ್ಯೆ ಇಳಿಮುಖವಾದ್ದರಿಂದ ಕಾರಾಗೃಹ ಆರಂಭಿಸಿಲ್ಲ. ಇಲ್ಲಿನ ಸಿಬ್ಬಂದಿಗಳನ್ನು ಬೇರೆ ಜಿಲ್ಲೆಗೆ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವೆ.
ಡಿ.ಆರ್‌. ಅಂದಾನಿ,
ಅಧೀಕ್ಷಕರು, ಜಿಲ್ಲಾ ಕಾರಾಗೃಹ

ಪಿಡಬ್ಲ್ಯೂಡಿ ಇಲಾಖೆಯಿಂದ 40 ಲಕ್ಷ ರೂ. ವೆಚ್ಚದಲ್ಲಿ ಕಾರಾಗೃಹ, 9 ಲಕ್ಷ ರೂ. ವೆಚ್ಚದಲ್ಲಿ ಸಿಬ್ಬಂದಿ ವಸತಿ ಗೃಹಗಳನ್ನು ದುರಸ್ತಿ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದೆ.
ಬಿ.ಬಿ. ಪಾಟೀಲ
ಪಿಡಬ್ಲೂಡಿ ಎಇಇ

„ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.