ಗದ್ದೆಗಳಿಗೆ ಭೇಟಿ ನೀಡಿದ ಕೃಷಿ ವಿಜ್ಞಾನಿಗಳು
Team Udayavani, Feb 27, 2020, 4:20 PM IST
ಗಂಗಾವತಿ: ತಾಲೂಕಿನ ಕೆಲ ಪ್ರದೇಶಗಳಲ್ಲಿ ಬೇಗನೆ ತೆನೆ ಬಿಚ್ಚಿದ ಭತ್ತದ ಗದ್ದೆಗಳಿಗೆ ಕೃಷಿ ವಿಜ್ಞಾನಿಗಳು ಮತ್ತು ಕೃಷಿ ತಾಂತ್ರಿಕ ಸಲಹೆಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಭಾರಿ ಬೇಸಿಗೆಯ ಭತ್ತದ ಬೆಳೆ ನಾಟಿ ಮಾಡಿದ 25 ದಿನಕ್ಕೆ ತೆನೆ ಬಿಚ್ಚುವ ಮೂಲಕ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮೂಡಿದೆ. ಬೇಸಿಗೆಯಲ್ಲಿ ನೀರಿನ ತೊಂದರೆ ಇತರೆ ಕಾರಣಕ್ಕೆ ರೈತರು 90-120 ದಿನಗಳಲ್ಲಿ ಕಟಾವಿಗೆ ಬರುವ ಭತ್ತ ನಾಟಿ ಮಾಡುತ್ತಾರೆ. ಪ್ರತಿ ವರ್ಷ ಬೇಸಿಗೆ ಭತ್ತದ ಬೆಳೆ ಹೆಚ್ಚು ಖರ್ಚಿಲ್ಲದೇ ರೈತರ ಕೈ ಸೇರುತ್ತಿತ್ತು. ಈ ಭಾರಿಹವಾಮಾನ ವೈಫರಿತ್ಯದಿಂದ ತೆನೆ ಬೇಗನೆ ಬಿಚ್ಚಿದೆ.
ಭತ್ತ ಬೆಳವಣಿಗೆ ಇಲ್ಲದ ಕಾರಣ ಅಧಿಕ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಹಾಕಿ ರೈತರು ಹಣ ಖರ್ಚು ಮಾಡಿಕೊಂಡಿದ್ದರೂ ಭತ್ತ ಬೆಳವಣಿಗೆ ಕಂಡಿಲ್ಲ. ಇದರಿಂದ ಸಂಕಷ್ಟಕ್ಕೊಳಗಾದ ರೈತರು ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಸಂಶೋಧನಾ ಕೇಂದ್ರದ ಕೃಷಿ ತಜ್ಞರು ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ತಜ್ಞ ವಿಜ್ಞಾನಿಗಳು ರೈತರ ಗದ್ದೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ರಾಯಚೂರು ಕೃಷಿ ವಿವಿಯ ವಿಜ್ಞಾನಿಗಳಾದ ಡಾ| ಬಿ.ಆರ್.ಪಾಟೀಲ್, ಡಾ|ಶಾಂತಪ್ಪ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ| ಮಸ್ತಾನರೆಡ್ಡಿ, ಡಾ|ಮಹಾಂತ ಶಿವಯೋಗಿ, ಡಾ| ಸುಜಯ್ ಹುರುಳಿ, ಡಾ|ರಾಧಾ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಜಂಗಮರ ಕಲ್ಗುಡಿ ಗ್ರಾಮದ ಭತ್ತದ ಗದ್ದೆಗೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.