ಕುಶಲಕರ್ಮಿಗಳಿಂದ ದೇಶದ ಅಭಿವೃದ್ಧಿ ಸಾಧ್ಯ: ಡಾ| ಅಶ್ವತ್ಥ


Team Udayavani, Feb 27, 2020, 5:15 PM IST

27-Feburary-23

ರಾಯಚೂರು: ಭಾರತದ ಅಭಿವೃದ್ಧಿ ಕುಶಲಕರ್ಮಿಗಳ ಮೇಲೆ ನಿಂತಿದೆ. ಕೌಶಲ್ಯಾಭಿವೃದ್ಧಿಗೆ ಬೇಕಾದ ಅಗತ್ಯ ನೆರವು ನೀಡಲು ಸದಾ ಸಿದ್ಧ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ| ಅಶ್ವತ್ಥ ನಾರಾಯಣ ಸಿ.ಎನ್‌. ಹೇಳಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡ ತರಬೇತಿದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ತರಬೇತಿದಾರರು ಕೌಶಲ್ಯ ಹೆಚ್ಚಿಸಿಕೊಳ್ಳಬೇಕು. ಕೌಶಲ್ಯತೆಗೆ ಜಪಾನ್‌ ಮತ್ತು ಜರ್ಮನಿ ದೇಶಗಳ ಅನುಕರಣೆ ಮಾಡಿದಲ್ಲಿ ಭಾರತವು ಮುಂಚೂಣಿ ರಾಷ್ಟ್ರವಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರಾದ ಕೆ.ಪಿ.ಮೋಹನರಾಜ್‌ ಮಾತನಾಡಿ, 1958ರಲ್ಲಿ ಪ್ರಾರಂಭವಾದ ರಾಯಚೂರು ಸಂಸ್ಥೆಯನ್ನು ಉನ್ನತೀಕರಣಗೊಳಿಸುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಕೆ.ಜಿ.ಟಿ.ಟಿ.ಐ. ತರಬೇತಿ ಕೇಂದ್ರ ಪ್ರಾರಂಭಿಸಲು ಸಚಿವರೊಂದಿಗೆ ಚರ್ಚಿಸಲಾಗುವುದು ಹಾಗೂ ಐಟಿಐ. ಮುಗಿದ ತರಬೇತಿದಾರರಿಗೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಶಿಶಿಕ್ಷು ತರಬೇತಿಗೆ ಅವಕಾಶ ಕಲ್ಪಿಸಲಾಗುವುದು. ಐಟಿಐ ಪಠ್ಯಕ್ರಮವನ್ನು ಕನ್ನಡಕ್ಕೆ ಭಾಷಾಂತರಿಸಲು ಕ್ರಮ ಕೈಗೊಳ್ಳಲು ಸಮಿತಿಯೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ವಿಧಾನ ಪರಿಷತ್‌ ಮಾಜಿ ಸದಸ್ಯ ಶಶಿಲ್‌ ಜಿ. ನಮೋಶಿ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಅಪರ ನಿರ್ದೇಶಕ ಪಿ.ಕೆ. ನಾಗರಾಜ, ಕಲಬುರಗಿ ವಿಭಾಗೀಯ ಕಚೇರಿ ಜಂಟಿ ನಿರ್ದೇಶಕ ರವೀಂದ್ರನಾಥ ಎಸ್‌. ಬಾಳಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ರಾಜೇಶ ಬಿ. ಬಾವಗಿ, ದೇವದುರ್ಗ ಸಂಸ್ಥೆ ಪ್ರಾಚಾರ್ಯರಾದ ಭೀಮಣ್ಣ, ಲಿಂಗಸುಗೂರು ಸಂಸ್ಥೆ ಪ್ರಾಚಾರ್ಯ ಅಬ್ದುಲ್‌ ಖಾದರ, ರಮೇಶ ಭದ್ರಗೊಂಡ, ನಲ್ಮ್ ವ್ಯವಸ್ಥಾಪಕ ರಸೂಲ್‌ ಹಾಗೂ ಸಂಸ್ಥೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.