ಕೊರೊನಾ ಎಫೆಕ್ಟ್: ಯೂರೋಪ್ ಬಾಕ್ಸಿಂಗ್ ರದ್ದು
Team Udayavani, Feb 28, 2020, 6:00 AM IST
ಹೊಸದಿಲ್ಲಿ: ಇಟಲಿಯ ಅಸ್ಸಿಸಿಯಲ್ಲಿ ಶನಿವಾರದಿಂದ ಆರಂಭವಾಗಬೇಕಿದ್ದ ಯೂರೋಪ್ ವಲಯ ಬಾಕ್ಸಿಂಗ್ ಕೂಟವನ್ನು ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ ರದ್ದುಪಡಿಸಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಚೀನದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಒಂದೊಂದೇ ರಾಷ್ಟ್ರಗಳಿಗೆ ನಿಧಾನವಾಗಿ ಹಬ್ಬುತ್ತಿದೆ. ಈ ಬಗ್ಗೆ ಮಾತನಾಡಿದ ಎಐಬಿಎ ಹಂಗಾಮಿ ಅಧ್ಯಕ್ಷ ಡಾ| ಮೊಹಮ್ಮದ್, “ಕೊರೊನಾ ವೈರಸ್ ಮಾರಕವಾಗಿ ಹಬ್ಬುತ್ತಿದೆ. ಈ ಕಾರಣಗಳಿಂದ ಇಟಲಿ ಆವೃತ್ತಿಯ ಬಾಕ್ಸಿಂಗ್ ಕೂಟವನ್ನು ರದ್ದುಪಡಿಸಲಾಗುತ್ತಿದೆ. ಈ ವರ್ಷದ ಕೊನೆಯಲ್ಲಿ ಕೂಟವನ್ನು ಬೇರೆಡೆ ಆಯೋಜಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ತನಕ ಕೂಟ ನಡೆಸಲು ಸಾಧ್ಯವಾಗುವುದಿಲ್ಲ. ಕೂಟಕ್ಕೆ ಬರುವ ಸ್ಪರ್ಧಿಗಳ, ಸಿಬಂದಿಯ ಆರೋಗ್ಯ ಮೊದಲು’ ಎಂದು ತಿಳಿಸಿದ್ದಾರೆ.
ಕೊರೊನಾ ವೈರಸ್ ಇಟಲಿಯ ಸುತ್ತಲೂ ವ್ಯಾಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಟಲಿಯಲ್ಲಿರುವ ಭಾರತದ ಬಾಕ್ಸಿಂಗ್ ತಂಡ ಶುಕ್ರವಾರ ಅಲ್ಲಿಂದ ವಾಪಸಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.