ಕೊರೊನಾ ವೈರಸ್; ಯೂರೋಪ್ ಬಾಕ್ಸಿಂಗ್ ಕೂಟ ರದ್ದು
Team Udayavani, Feb 28, 2020, 2:00 PM IST
ನವದೆಹಲಿ: ಇಟಲಿಯಲ್ಲಿ ನಡೆಯಬೇಕಾಗಿರುವ ಯೂರೋಪ್ ವಲಯ ಬಾಕ್ಸಿಂಗ್ ಕೂಟವನ್ನು ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ)
ರದ್ದುಪಡಿಸಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೇಳಾಪಟ್ಟಿ ಪ್ರಕಾರ ಅಸ್ಸಿಸಿನಲ್ಲಿ ಬಾಕ್ಸಿಂಗ್ ಕೂಟ ನಡೆಯಬೇಕಿತ್ತು. ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಒಂದೊಂದೇ ರಾಷ್ಟ್ರಗಳಿಗೆ ನಿಧಾನವಾಗಿ ಹಬ್ಬುತ್ತಿದೆ.
ಈ ಬಗ್ಗೆ ಮಾತನಾಡಿದ ಎಐಬಿಎ ಹಂಗಾಮಿ ಅಧ್ಯಕ್ಷ ಡಾ ಮೊಹಮ್ಮೆದ್ ಮೌಸ್ಟಸನೆ “ಕೊರೊನಾ ವೈರಸ್ ಮಾರಕವಾಗಿ ಹಬ್ಬುತ್ತಿದೆ. ಇದೆಲ್ಲ ಕಾರಣಗಳಿಂದ ಕೂಟವನ್ನು ಮುಂದೂಡಲು ನಿರ್ಧರಿಸಿದ್ದೇವೆ. ಈ ವರ್ಷದ ಕೊನೆಯಲ್ಲಿ ಕೂಟವನ್ನು ಆಯೋಜಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ತನಕ ಕೂಟ ನಡೆಸಲು ಸಾಧ್ಯವಾಗುವುದಿಲ್ಲ. ಕೂಟಕ್ಕೆ ಬರುವ ಸ್ಪರ್ಧಿಗಳ, ಸಿಬ್ಬಂದಿಗಳ ಆರೋಗ್ಯ ಮೊದಲು’ ಎಂದು ತಿಳಿಸಿದ್ದಾರೆ.
ಕೊರೊನಾ ವೈರಸ್ ಇಟಲಿಯ ಸುತ್ತಲೂ ವ್ಯಾಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಇಟಲಿಯಲ್ಲಿರುವ ಭಾರತ ಬಾಕ್ಸಿಂಗ್ ತಂಡ ಶುಕ್ರವಾರ ಅಲ್ಲಿಂದ ತೆರಳಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.