ಮಂಗಳೂರು ಮೇಯರ್ ಆಗಿ ಬಿಜೆಪಿಯ ದಿವಾಕರ ಪಾಂಡೇಶ್ವರ್ ಆಯ್ಕೆ
Team Udayavani, Feb 28, 2020, 12:22 PM IST
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಇಂದು ನಡೆದಿದ್ದು, ನಿರೀಕ್ಷೆಯಂತೆ ನೂತನ ಮೇಯರ್ ಆಗಿ ಬಿಜೆಪಿಯ ದಿವಾಕರ್ ಪಾಂಡೇಶ್ವರ ಆಯ್ಕೆಯಾದರು.
ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಪಾಂಡೇಶ್ವರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನಿಂದ ಕೇಶವ್ ಅವರು ಸ್ಪರ್ಧೆ ಮಾಡಿದ್ದರು.
ಕೈ ಎತ್ತುವ ಮೂಲಕ ಮತ ಚಲಾವಣೆಗೆ ಅವಕಾಶ ನೀಡಲಾಯಿತು. ಈ ಪ್ರಕ್ರಿಯೆಯಲ್ಲಿ ಬಿಜೆಪಿಯ ದಿವಾಕರ ಪಾಂಡೇಶ್ವರ ಪರ 46 ಮತಗಳು ಚಲಾವಣೆಯಾದವು. ಕಾಂಗ್ರೆಸ್ ನ ಕೇಶವ ಪರ 15 ಮತಗಳು ಚಲಾವಣೆಯಾದವು. ಈ ಮೂಲಕ ದಿವಾಕರ ಪಾಂಡೇಶ್ವರ ಮಂಗಳೂರು ಮೇಯರ್ ಆಗಿ ಆಯ್ಕೆಯಾದರು.
ಉಪ ಮೇಯರ್ ಚುನಾವಣೆ
ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಝೀನತ್ ಸಂಶುದ್ದೀನ್ ಹಾಗೂ ಬಿಜೆಪಿಯಿಂದ ಜಾನಕಿ ಯಾನೆ ವೇದಾವತಿ ಸ್ಪರ್ಧಿಸಿದ್ದರು. ಝೀನತ್ ಪರವಾಗಿ 17 (ಎಸ್ ಡಿಪಿಐ ಎರಡು ಮತ ಸೇರಿ) ಮತಗಳು ಹಾಗೂ ಜಾನಕಿ ಯಾನೆ ವೇದಾವತಿ ಪರವಾಗಿ 46 ಮತಗಳು ಚಲಾವಣೆಯಾದವು.
ನೂತನ ಉಪ ಮೇಯರ್ ಆಗಿ ಬಿಜೆಪಿಯ ಜಾನಕಿ ಯಾನೆ ವೇದಾವತಿ ಆಯ್ಕೆಯಾದರು.
ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ, ವಿ. ಪರಿಷತ್ ಸದಸ್ಯ ಐವನ್ ಡಿಸೋಜ ಉಪಸ್ಥಿತರಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದರು. ಸಂಸದ ನಳಿನ್ ಕುಮಾರ್ ಕಟೀಲು ಗೈರುಹಾಜರಾಗಿದ್ದರು.
ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತ ವಿ. ಯಶವಂತ್, ಅಪರ ಪ್ರಾದೇಶಿಕ ಆಯುಕ್ತೆ ಕೆ.ಎಂ. ಗಾಯತ್ರಿ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದು ಚುನಾವಣೆ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.