ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲಾಭಿವೃದ್ಧಿ
Team Udayavani, Feb 29, 2020, 3:03 AM IST
ಸಾಗರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲೇ ರಾಜ್ಯದ ಸರ್ಕಾರಿ ಶಾಲೆಗಳ ಉನ್ನತೀಕರಣಗೊಳಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದರು.
ತಾಲೂಕಿನ ಕೆಳದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕೆಲವು ಶಿಕ್ಷಣ ತಜ್ಞರು ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆಯನ್ನು ಸಜ್ಜುಗೊಳಿಸ ಬೇಕೆಂಬ ಅಭಿಪ್ರಾಯ ನೀಡಿದ್ದಾರೆ. ನಾನು ಕೇಳಿ ತಿಳಿದುಕೊಂಡ ಪ್ರಕಾರ ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅತ್ಯಂತ ಉತ್ಕೃಷ್ಟವಾಗಿ ಅಭಿವೃದ್ಧಿಪಡಿಸಲಾಗಿದೆ.
ಅಲ್ಲಿನ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅಲ್ಲಿನ ಸರ್ಕಾರಿ ಶಾಲೆಗಳ ಕುರಿತು ಶಿಕ್ಷಾ ಎಂಬ ಪುಸ್ತಕ ಬರೆದಿದ್ದಾರೆ. ಈ ಪುಸ್ತಕಗಳಲ್ಲಿರುವ ಕೆಲವು ಅಂಶಗಳನ್ನು ಶಿಕ್ಷಣ ನೀತಿಯಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ದೆಹಲಿಯಲ್ಲಿ ಕೇವಲ 473 ಸರ್ಕಾರಿ ಶಾಲೆಗಳಿದ್ದರೆ ಕರ್ನಾಟಕದಲ್ಲಿ 53 ಸಾವಿರ ಸರ್ಕಾರಿ ಶಾಲೆಗಳಿವೆ. ಏಕಕಾಲದಲ್ಲಿ ಎಲ್ಲವನ್ನೂ ಬದಲಾಯಿಸಲು ಸಾಧ್ಯವಿಲ್ಲ. ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಾಶಸ್ತ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಹಂತಹಂತವಾಗಿ ರಾಜ್ಯದಲ್ಲಿ ಶೈಕ್ಷಣಿಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.