ವಿಜಿಲ್‌ಗೆ ಅಪ್‌ಡೇಟ್ ಸಮಸ್ಯೆ
ವಿಳಂಬಕ್ಕೆ ತನಿಖೆ ನೆಪ ಫಲಾನುಭವಿಗಳಿಗೆ ಸಂಕಷ್ಟ
Team Udayavani, Feb 29, 2020, 6:15 AM IST
ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್ ಮೊಬೈಲ್ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್ ವರ್ಷನ್‌ಗಳು ಬದಲಾಗುತ್ತಲೇ ಇರುವುದರಿಂದ ತನಿಖೆ ಪೂರ್ಣಗೊಳ್ಳದೆ ಫಲಾನುಭವಿಗಳು ಸಂಕಷ್ಟ ಎದುರಿಸುವಂತಾಗಿದೆ.
ಹಿಂದಿನ ಸರಕಾರದ ಅವಧಿಯಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಲ್ಲಿ ವಸತಿ ಸಚಿವ ವಿ. ಸೋಮಣ್ಣ ತನಿಖೆಗೆ ಆದೇಶಿಸಿದ್ದರು. ಮೊದಲ ಹಂತದಲ್ಲಿ 53,435 ಮನೆಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು. ಅಕ್ರಮ ಪತ್ತೆಗಾಗಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದಲೇ ವಿಜಿಲ್ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಎಲ್ಲ ಜಿಲ್ಲಾಧಿ ಕಾರಿಗಳಿಗೆ ಸರಕಾರ ಸೂಚನೆ ನೀಡಿತ್ತು.
ಬದಲಾಗುತ್ತಿರುವ ವರ್ಷನ್
ಆರಂಭದಲ್ಲಿ ವಿಜಿಲ್ ಮೊಬೈಲ್ ಆ್ಯಪ್-1.0 ಅಭಿವೃದ್ಧಿ ಪಡಿಸಲಾಗಿತ್ತು. ಲೋಪಗಳಿದ್ದ ಕಾರಣ ಅದನ್ನು ಬದಲಾಯಿಸಿ ಆ್ಯಪ್ 1.1 ಎಂದು ಅಪ್‌ಡೇಟ್ ಮಾಡಲಾಯಿತು. ಈ ವರ್ಷನ್‌ನಲ್ಲಿಯೂ ಅಕ್ರಮ ಮನೆಗಳ ಸಂಪೂರ್ಣ ಮಾಹಿತಿ ದೊರೆಯುತ್ತಿಲ್ಲ ಎಂದು 1.3 ವರ್ಷನ್ ಬಿಡುಗಡೆ ಮಾಡಲಾಯಿತು. ಅದರಲ್ಲಿಯೂ ಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗದೆ 1.5 ವರ್ಷನ್‌ಗೆ ಅಪ್‌ಡೇಟ್ ಮಾಡಿ ತನಿಖೆ ನಡೆಸಲು ಇಲಾಖೆ ನಿರ್ಧರಿಸಿದೆ.
ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ಎಲ್ಲ ಜಿಲ್ಲೆಗಳ ವಸತಿ ಇಲಾಖೆಯ ಮುಖಸ್ಥರಿಗೆ ಪತ್ರ ಬರೆದಿದ್ದು, ಆದಷ್ಟು ಬೇಗ ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಫಲಾನುಭವಿಗಳ ಮಾಹಿತಿಯನ್ನು ನಿಗಮಕ್ಕೆ ಅಪ್‌ಲೋಡ್ ಮಾಡುವಂತೆ ಮತ್ತು ಎರಡನೇ ಹಂತದಲ್ಲಿ ಇನ್ನೂ 1.71 ಲಕ್ಷ ಮನೆಗಳನ್ನೂ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಅನುದಾನ ಬಿಡುಗಡೆಗೆ ವಿಳಂಬ
ಅಕ್ರಮ ಪತ್ತೆಹಚ್ಚಲು ಇಲಾಖೆ ಸರಳ ಮಾರ್ಗ ಅನುಸರಿಸುವುದರ ಬದಲು ಆ್ಯಪ್ ಅಪ್‌ಡೇಟ್ ನಲ್ಲಿಯೇ ಸಮಯ ವ್ಯಯಿಸುತ್ತಿರುವುದರಿಂದ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಅನುದಾನ ಬಿಡುಗಡೆಯಾಗದೆ ಸಂಕಷ್ಟದಲ್ಲಿ ಸಿಲುಕುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.