ಪತ್ರಕರ್ತರ ಅಕಾಲಿಕ ನಿಧನ ; ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಬಿ.ಆರ್. ರೋಹಿತ್, ಗಜಾನನ ಹೆಗಡೆ, ರವಿರಾಜ್ ವಳಲಂಬೆ ಮತ್ತು ದಿಗಂಬರ ಗರುಡಾ ಕುಟುಂಬಗಳಿಗೆ ಧನ ಸಹಾಯ ನೀಡಲು ಆದೇಶ
Team Udayavani, Feb 29, 2020, 11:33 AM IST
ಬೆಂಗಳೂರು : ಅಕಾಲಿಕ ನಿಧನ ಹೊಂದಿದ್ದ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಪತ್ರಕರ್ತರ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿತ್ತು. ಪತ್ರಕರ್ತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರದಂದು ಈ ಪರಿಹಾರ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ನಿಧನ ಹೊಂದಿದ್ದ ಪತ್ರಕರ್ತರಾದ ಗಜಾನನ ಹೆಗಡೆ, ಬಿ ಆರ್ ರೋಹಿತ್, ರವಿರಾಜ ವಳಲಂಬೆ, ದಿಗಂಬರ ಗರುಡಾ ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ.
ಪತ್ರಕರ್ತರ ಅಕಾಲಿಕ ನಿಧನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಮುಖ್ಯಮಂತ್ರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಪತ್ರಕರ್ತರ ಈ ನಿಯೋಗದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಕೆ. ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಹೆಚ್.ಎ. ಕಿರಣ್ ಸಹಿತ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.