ಪರೀಕ್ಷಾ ಮಾಹಿತಿ ಆನ್ಲೈನ್ನಲ್ಲೇ ಅಪ್ಲೋಡ್
Team Udayavani, Mar 1, 2020, 3:05 AM IST
ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮಾಹಿತಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸು ವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಪಿಯು ಇಲಾಖೆ ವೆಬ್ಸೈಟ್ನಲ್ಲಿ ಈಗಾಗಲೇ ಲಿಂಕ್ ಬಿಡಲಾಗಿದೆ.
ಯೂಸರ್ ಐಡಿ ಮತ್ತು ಪಾಸ್ವರ್ಡ್ಗಳನ್ನು ಕೇಂದ್ರದ ಪ್ರಾಂಶುಪಾಲರು ಅಥವಾ ಮುಖ್ಯ ಅಧೀಕ್ಷಕರಿಗೆ ಇಲಾಖೆಯಿಂದ ಕಳುಹಿಸಲಾಗು ತ್ತದೆ. ಲಾಗಿನ್ ಆದ ನಂತರ ಮೊಬೈಲ್ ಸಂಖ್ಯೆ ಪರಿಶೀಲಿಸಿ, ಹೊಸ ಪಾಸ್ವರ್ಡ್ ಮಾಡಿಕೊಳ್ಳ ಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕಾ ಪಾಲಕರು, ಪರೀಕ್ಷಾ ಕಚೇರಿ ಅಧೀಕ್ಷಕರು, ಬ್ಲಾಕ್ ಅಧೀಕ್ಷಕರು ಮತ್ತು ವಿಶೇಷ ಜಾಗೃತ ದಳದ ಅಧೀಕ್ಷಕರ ವಿವರನ್ನು ಚೀಫ್ ಮಾಸ್ಟರ್ ಆಯ್ಕೆ ಮೂಲಕ ನಮೂದಿಸಿ ಸಲ್ಲಿಸಬೇಕು.
ಪರೀಕ್ಷೆ ದಿನ ಹಂಚಿಕೆ ಮಾಡಿರುವ ಉತ್ತರ ಪತ್ರಿಕೆಗಳ ಸಂಖ್ಯೆ, ಗೈರಾದ ವಿದ್ಯಾರ್ಥಿಗಳು ಮತ್ತು ವಾಪಸ್ ಪಡೆದ ಉತ್ತರ ಪತ್ರಿಕೆ, ಹೆಚ್ಚುವರಿ ಬಳಸಿದ ಉತ್ತರ ಪತ್ರಿಕೆ ಸಂಖ್ಯೆ ಮತ್ತು ಪರೀಕ್ಷೆ ಇತರೆ ವಿವರವನ್ನು ಕಡ್ಡಾಯವಾಗಿ ಆಯಾ ದಿನದಂದೇ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಕು.
ಪ್ರತಿ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಜರಾತಿ, ಗೈರು, ಪರೀಕ್ಷಾ ಅಕ್ರಮ ಮಾಹಿತಿಯನ್ನು ಅದೇ ದಿನ ಅಪ್ಲೋಡ್ ಮಾಡಬೇಕು. ಎಲ್ಲ ಮಾಹಿತಿಯನ್ನು ಅದೇ ದಿನ ಆನ್ಲೈನ್ನಲ್ಲಿ ಅಪ್ಲೋಡ್ ಮಾಡ ಬೇಕು. ಇಲ್ಲದಿದ್ದರೆ ಕೇಂದ್ರದ ಮುಖ್ಯ ಅಧೀಕ್ಷಕರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.