ಕೇಂದ್ರ ಸರಕಾರದ ವಿರುದ್ಧ ಕೊಡಗು ಕಾಂಗ್ರೆಸ್‌ ಪ್ರತಿಭಟನೆ


Team Udayavani, Mar 1, 2020, 5:43 AM IST

CONGRESS-PROTEST

ಮಡಿಕೇರಿ: ಕಾಫಿ, ಭತ್ತ, ಕರಿಮೆಣಸು ಮೊದಲಾದ ಬೆಳೆಗ‌ಳನ್ನು ಬೆಳೆಯುವ ಬೆಳೆಗಾರರನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಕೇಂದ್ರ ಸರ್ಕಾರ, ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಕಿಸಾನ್‌ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಗಾಂಧಿ ಮಂಟಪದ ಬಳಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆರ್ಥಿಕ ಕ್ಷೇತ್ರದಲ್ಲಿ ವೈಫ‌ಲ್ಯವನ್ನೇ ಕಾಣುತ್ತಿರುವ ಕೇಂದ್ರ ಸರ್ಕಾರ ರೈತರು ಹಾಗೂ ಬೆಳೆಗಾರರ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಕಾಂಗ್ರೆಸ್‌ ಪದಾಧಿಕಾರಿಗಳು ಆರೋಪಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್‌ ಕುಮಾರ್‌ ಮಾತನಾಡಿದರು ಹುಲಿ, ಕಾಡಾನೆ ಸೇರಿದಂತೆ ಇತರ ವನ್ಯಜೀವಿಗಳು ಕೂಡ ನಾಡಿಗೆ ಲಗ್ಗೆಯಿಟ್ಟು ಮಾನವ ಪ್ರಾಣ ಮತ್ತು ಬೆಳೆಹಾನಿ ಮಾಡುತ್ತಿವೆ. ಕಾಡುಪ್ರಾಣಿಗಳಿಂದ ನಿರಂತರ ಅನಾಹುತುಗಳು ಸಂಭವಿಸುತ್ತಿದ್ದರೂ ಇದನ್ನು ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫ‌ಲವಾಗಿವೆ ಎಂದು ಅವರು ಆರೋಪಿಸಿದರು.

ವಿಧಾನ ಪರಿಷತ್‌ ಸಮಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಬೇಕಲ್‌ ರಮಾನಾಥ್‌, ವಿ.ಪಿ.ಸುರೇಶ್‌, ಉಪಾಧ್ಯಕ್ಷ ಎಸ್‌.ಎಂ.ಚಂಗಪ್ಪ, ವಕ್ತಾರ‌ರಾದ ಟಿ.ಈ.ಸುರೇಶ್‌, ಟಾಟುಮೊಣ್ಣಪ್ಪ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್‌, ಮಡಿಕೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಪ್ರು ರವೀಂದ್ರ, ರಾಹುಲ್‌ ಗಾಂಧಿ ಬ್ರಿಗೇಡ್‌ನ‌ ಅಧ್ಯಕ್ಷ‌ ಚುಮ್ಮಿದೇವಯ್ಯ, ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯ ಸಂಯೋಜಕ‌ ತೆನ್ನಿರಾ ಮೈನಾ, ನಗರ ಕಾಂಗ್ರೆಸ್‌ ಅಧ್ಯಕ್ಷ ಕೆ.ಯು.ಅಬ್ದುಲ್‌ ರಜಾಕ್‌, ಪ್ರಧಾನ ಕಾರ್ಯದರ್ಶಿ ಆರ್‌.ಪಿ.ಚಂದ್ರಶೇಖರ್‌, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್‌, ಕಿಸಾನ್‌ ಘಟಕದ ಸೋಮವಾರಪೇಟೆ ಬ್ಲಾಕ್‌ ಅಧ್ಯಕ್ಷ ಬಸವರಾಜ್‌, ಕುಶಾಲನಗರ ಬ್ಲಾಕ್‌ ಅಧ್ಯಕ್ಷ ಹರೀಶ್‌, ನಾಪೋಕ್ಲು ಬ್ಲಾಕ್‌ ಸಾಬು ತಿಮ್ಮಯ್ಯ, ಯುವ ಕಾಂಗ್ರೆಸ್‌ನ ದೇವ್‌ ಕುಶಾಲನಗರ, ಡಿಸಿಸಿ ಸದಸ್ಯೆ ಗೀತಾ, ನಗರ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಾಜಿ ಸದಸ್ಯ ಪ್ರಕಾಶ್‌ ಆಚಾರ್ಯ, ಪೊನ್ನಂಪೇಟೆ ಬ್ಲಾಕ್‌ ಅಧ್ಯಕ್ಷ ನವೀನ್‌, ವಿರಾಜಪೇಟೆ ಬ್ಲಾಕ್‌ ಅಧ್ಯಕ್ಷ ರಂಜಿ ಪೂಣಚ್ಚ, ಸೋಮವಾರಪೇಟೆ ಬ್ಲಾಕ್‌ ಅಧ್ಯಕ್ಷ ಬಿ.ಬಿ.ಸತೀಶ್‌, ಕುಶಾಲಗರ ಬ್ಲಾಕ್‌ ಅಧ್ಯಕ್ಷ ಬಿ.ಎಸ್‌.ಅನಂತರಾಮ, ನಾಪೋಕ್ಲು ಬ್ಲಾಕ್‌ ಅಧ್ಯಕ್ಷ ಇಸ್ಮಾಯಿಲ್‌, ಸದಸ್ಯ ಕೆ.ಎಂ.ಲೋಕೇಶ್‌ ಪ್ರಮುಖರಾದ ಧರ್ಮಜ ಉತ್ತಪ್ಪ, ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪರಿಹಾರ ಸೂಚಿಸಿಲ್ಲ
ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್‌ ಮಾತನಾಡಿ, ಕೊಡಗಿನ ರೈತರು ಹಾಗೂ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಳಜಿ ತೋರುತ್ತಿಲ್ಲ. ಪ್ರಮುಖ ವಾಣಿಜ್ಯ ಬೆಳೆಯಾದ ಕಾಫಿ ಮತ್ತು ಕರಿಮೆಣಸಿಗೆ ಸೂಕ್ತ ಬೆಲೆ ದೊರೆಯದೆ ಮತ್ತು ವನ್ಯಜೀವಿಗಳ ದಾಳಿಯಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಕಿಸಾನ್‌ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್‌ ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಬೆನ್ನೆಲುಬಾಗಿರುವ ರೈತರ ಹಿತ ಕಾಪಾಡುವಲ್ಲಿ ವಿಫ‌ಲವಾಗಿವೆ ಎಂದು ಆರೋಪಿಸಿದರು. ಕೊಡಗಿನ ಬೆಳೆಗಾರರು ಹಾಗೂ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾತ್ರ ಬೆಳೆಗಾರರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಟೀಕಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.