ಯತ್ನಾಳ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Mar 1, 2020, 3:05 AM IST
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ಅವಹೇಳಕನಾಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್. ಮನೋಹರ್, ಶಾಸಕ ಯತ್ನಾಳ್ ನಾಲಿಗೆ ಹಿಡಿತವಿಲ್ಲದೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಹಿರಿಯರನ್ನು ಗೌರವಿಸುವ ಬದಲಿಗೆ, ಪಾಕಿಸ್ತಾನದ ಏಜೆಂಟ್ ಎಂದು ಕರೆದಿರುವುದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯರನ್ನು ಟೀಕಿಸಿ ಪ್ರಚಾರ ಬಯಸುವ ಬಿಜೆಪಿ ಶಾಸಕ ಯತ್ನಾಳ್‌ರಿಂದ ಬಿಜೆಪಿಗೆ ಅವಮಾನವೇ ಹೊರತು, ಇತರರಿಗೆ ಅಲ್ಲ ಎಂದು ಬಿಜೆಪಿ ನಾಯಕರುಗಳು ಅರ್ಥ ಮಾಡಿಕೊಳ್ಳಬೇಕೆಂದರು. ದೊರೆಸ್ವಾಮಿ ಅವರು ಪಕ್ಷಾತೀತ ವ್ಯಕ್ತಿ. ಅವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ ಎನ್ನುವುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಯತ್ನಾಳ್ ಅವರನ್ನು ವಿಧಾನಸಭಾ ಅಧಿವೇಶನಕ್ಕೆ ಪ್ರವೇಶಿಸದಂತೆ ತಡೆಯಬೇಕು. ವಿಧಾನಸಭೆಯಿಂದ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಜಿ.ಜನಾರ್ಧನ್, ಎ.ಆನಂದ್, ಯುವ ಕಾಂಗ್ರೆಸ್ ಮುಖಂಡರಾದ ಇ.ಶೇಖರ್, ಶ್ರೀಧರ್, ಉಮೇಶ್, ಪುಟ್ಟರಾಜು, ದೀಪಕ್, ಆಶಾ ರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.