ದುಶ್ಚಟ ಬಿಟ್ಟು ದೇಶದ ಪ್ರಗತಿಗೆ ಕೈಜೋಡಿಸಿ
ವ್ಯಸನದ ವಿರುದ್ಧ ಸಮರ ಸಾರಿದ ಬಸವಾದಿ ಶರಣರು ಶರೀರ-ಹೃದಯ ದೇವರ ಅರಮನೆಯಿದ್ದಂತೆ
Team Udayavani, Mar 1, 2020, 4:19 PM IST
ಭಾಲ್ಕಿ: ದೇಶದ ಭವಿಷ್ಯವಾಗಿರುವ ಯುವಶಕ್ತಿ ದುಶ್ಚಟ, ದುರ್ಗುಣಗಳಿಗೆ ಬಲಿಯಾಗದೇ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಜಿಲ್ಲಾಡಳಿತ ಬೀದರ ಮತ್ತು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಸಹಯೋಗದಲ್ಲಿ ಮದ್ಯಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಮೆರಿಕಾ, ಫ್ರಾನ್ಸ್ ಸೇರಿದಂತೆ ಮುಂತಾದ ರಾಷ್ಟ್ರಗಳಲ್ಲಿ ನಮ್ಮ ದೇಶದ ಯುವಕರು ವೈದ್ಯ, ವಿಜ್ಞಾನಿಗಳಾಗಿ ಸೇವೆ ಸಲ್ಲಿಸುತ್ತ ಅದ್ಭುತ ಕೊಡುಗೆ ನೀಡುತ್ತಿದ್ದಾರೆ. ಹಾಗಾಗಿ ಜಗತ್ತು ಭಾರತದ ಕಡೆ ನೋಡುತ್ತಿದೆ ಎಂದರು.
ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೋಹಿಣಿ.ಕೆ ಮಾತನಾಡಿ, 12ನೇ ಶತಮಾನದಲ್ಲಿ ಬಸವಾದಿ ಶರಣರು ವ್ಯಸನದ ವಿರುದ್ಧ ಸಮರ ಸಾರಿದ್ದಾರೆ. ಮದ್ಯ ಸೇರಿದಂತೆ ಇತರೆ ವ್ಯಸನದ ವಸ್ತು ನಿಷೇಧಿಸಲು ಆಗುವುದಿಲ್ಲ. ಬದಲಾಗಿ ಯುವಶಕ್ತಿ ದುಶ್ಚಟಗಳಿಂದ ದೂರ ಉಳಿದು ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಮಾತನಾಡಿ, ಹುಟ್ಟು-ಸಾವು ನಮ್ಮ ಕೈಯಲ್ಲಿಲ್ಲ ಆದರೆ, ಬದುಕುವ ರೀತಿ ನಮ್ಮ ಕೈಯಲ್ಲಿದೆ. ಹಾಗಾಗಿ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಬಾರದು ಎಂದರು. ಡಾ| ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿ, ಒಂದು ಬಾರಿ ವ್ಯಸನದ ದಾಸರಾದರೆ ಅದರಿಂದ ಹೊರಬರುವುದು ಕಷ್ಟದ ಕೆಲಸ. ಶರೀರ, ಹೃದಯ ದೇವರ ಅರಮನೆಯಿದ್ದಂತೆ. ಅದನ್ನು ಯಾವಾಗಲು ಪರಿಶುದ್ಧವಾಗಿ ಇಟ್ಟುಕೊಳ್ಳಬೇಕು. ಯುವಶಕ್ತಿಯಲ್ಲಿ ನೈತಿಕತೆ, ಧರ್ಮ, ಆಧ್ಯಾತ್ಮಿಕತೆ ಮಹತ್ವ ಸಾರಬೇಕಾಗಿದೆ ಎಂದು ಹೇಳಿದರು.
ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿ ಮಾತನಾಡಿ, ವ್ಯಕ್ತಿಯ ಜೀವ ಹಾಗೂ ಜೀವನ ಅತ್ಯಂತ ಅಮೂಲ್ಯವಾಗಿದೆ. ಹಾಗಾಗಿ ದೇಶದ ಭವಿಷ್ಯವಾಗಿರುವ ಯುವಶಕ್ತಿ ಉತ್ಸಾಹ, ಜೀವನ ಹಾಳಾಗಬಾರದೆನ್ನುವ ಉದ್ದೇಶದೊಂದಿಗೆ ಜನಜಾಗೃತಿ ಕಾರ್ಯಕ್ರಮ ಆಯೋಜಿಸಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ನಿಮಾನ್ಸ್ ಮನೋರೋಗ ತಜ್ಞ ಡಾ| ಸಿ.ಆರ್.ಚಂದ್ರಶೇಖರ, ಪೊಲೀಸ್ ಇಲಾಖೆ ಎಸಿಪಿ ನಾರಾಯಣಸ್ವಾಮಿ.ಕೆ.ಎನ್ ವಿಶೇಷ ಉಪನ್ಯಾಸ ನೀಡಿದರು. ಮಹಾಲಿಂಗ ಸ್ವಾಮೀಜಿ, ಜಯದೇವ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಹೀರಾಚಂದ, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾ ಧಿಕಾರಿ ಮಹಾಂತೇಶ.ಎಸ್, ಸೋಮನಾಥಪ್ಪ ಅಷ್ಟೂರೆ, ಶಿವಾನಂದ ಗುಂದಗೆ, ಸಿಕ್ರೇಶ್ವರ ಶೆಟಕಾರ್, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾ ಧಿಕಾರಿ ಮೋಹನ ರೆಡ್ಡಿ ಉಪಸ್ಥಿತರಿದ್ದರು. ವೀರಣ್ಣ ಕುಂಬಾರ ನಿರೂಪಿಸಿದರು. ಕಲಾವಿದ ನವಲಿಂಗ ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.