ವಿಶ್ವಾದ್ಯಂತ ಕೊರೊನಾಗೆ 2,900 ಬಲಿ, 86 ಸಾವಿರ ದಾಟಿದ ಸೋಂಕಿತರ ಸಂಖ್ಯೆ
Team Udayavani, Mar 1, 2020, 7:21 PM IST
ಬೀಜಿಂಗ್/ನವದೆಹಲಿ: ಚೀನಾದಲ್ಲಿ ಆರಂಭವಾದ ಕೊರೊನಾ ಆತಂಕ ಈಗ 60ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದು, ಜಾಗತಿಕವಾಗಿ 2,900 ಮಂದಿ ಈ ವೈರಸ್‌ಗೆ ಬಲಿಯಾಗಿದ್ದಾರೆ. ಜತೆಗೆ ಸುಮಾರು 86 ಸಾವಿರ ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೊಸ ವರದಿಯಲ್ಲಿ ತಿಳಿಸಲಾಗಿದೆ. ಚೀನಾವೊಂದರಲ್ಲೇ 2,870 ಮಂದಿ ಮೃತಪಟ್ಟಿದ್ದು, ಇಲ್ಲಿ 79,824 ಸೋಂಕಿತರಿದ್ದಾರೆ.
ಪಾಕ್- ಅಫ್ಘಾನ್ ಗಡಿ ಬಂದ್:
ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೇರಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದರಂತೆ, ಅಫ್ಘಾನಿಸ್ತಾನದ ಜೊತೆ ಪಾಕ್ ಹೊಂದಿರುವ ಗಡಿಯನ್ನು ಸೋಮವಾರದಿಂದ 7 ದಿನಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ. ಕರಾಚಿ ಸೇರಿದಂತೆ ಸಿಂಧ್ ಪ್ರಾಂತ್ಯದ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.
ಇರಾನ್‌ಗೆ ಹೆಚ್ಚಿದ ಆತಂಕ:
ಇರಾನ್‌ನಲ್ಲೂ ಕೋವಿಡ್-19 ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಭಾನುವಾರ ಒಂದೇ ದಿನ 11 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ವೈರಸ್‌ಗೆ ಬಲಿಯಾದವರ ಸಂಖ್ಯೆ 54ಕ್ಕೇರಿದ್ದು, 978 ಮಂದಿಗೆ ಸೋಂಕು ತಗುಲಿದೆ. ಐರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕೊರಿಯಾದಲ್ಲಿ 376 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,526ಕ್ಕೇರಿದೆ.
ಮೊದಲ ಸಾವು:
ಜಪಾನ್‌ನ ಡೈಮಂಡ್ ಪ್ರಿನ್ಸೆಸ್ ನೌಕೆಯಿಂದ ಸ್ವದೇಶಕ್ಕೆ ಮರಳಿದ್ದ 78 ವರ್ಷದ ವ್ಯಕ್ತಿ ಸಿಡ್ನಿಯ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಕೊರೊನಾಗೆ ಮೊದಲ ಬಲಿ ಆದಂತಾಗಿದೆ. ಅಮೆರಿಕದಲ್ಲೂ ವೈರಸ್‌ಗೆ ಮೊದಲ ಸಾವು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇರಾನ್, ಇಟಲಿ ಸೇರಿ ಕೆಲವು ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿ ಅಧ್ಯಕ್ಷ ಟ್ರಂಪ್ ಆದೇಶ ಹೊರಡಿಸಿದ್ದಾರೆ.
ಕೋಳಿ ಮೇಳ!:
ಕೋಳಿಗಳಿಂದಲೂ ಕೊರೊನಾ ಹಬ್ಬುತ್ತದೆ ಎಂಬ ವದಂತಿಯನ್ನು ಸುಳ್ಳಾಗಿಸುವ ನಿಟ್ಟಿನಲ್ಲಿ ಗುರುಗ್ರಾಮದಲ್ಲಿ ಕೋಳಿಸಾಕಣೆ ಸಂಘವು “ಕೋಳಿ ಮೇಳ’ವನ್ನು ಆಯೋಜಿಸಿದೆ. ಇಲ್ಲಿ ಒಂದು ಪ್ಲೇಟ್ ಚಿಕನ್ ಖಾದ್ಯವನ್ನು ತಲಾ 30 ರೂ.ಗಳಂತೆ ಮಾರಾಟ ಮಾಡಲಾಗಿದ್ದು, ಚಿಕನ್, ಮಟನ್ ಅಥವಾ ಮೀನು ತಿನ್ನುವುದರಿಂದ ವೈರಸ್ ಹರಡುವುದಿಲ್ಲ ಎಂದು ತಿಳಿಹೇಳುವ ಕೆಲಸ ಮಾಡಲಾಗಿದೆ.
ಮಲೇಷ್ಯಾದಿಂದ ಬಂದಿದ್ದ ವ್ಯಕ್ತಿ ಕೇರಳದಲ್ಲಿ ಸಾವು
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಂಥ ಮಲೇಷ್ಯಾದಿಂದ ಇತ್ತೀಚೆಗೆ ಹುಟ್ಟೂರು ಕೇರಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಎರ್ನಾಕುಳಂ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಆದರೆ, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ, ನೆಗೆಟಿವ್ ಎಂದು ವರದಿ ಬಂದಿದೆ. ಆ ವ್ಯಕ್ತಿಯು ಉಸಿರಾಟದ ತೊಂದರೆ, ನ್ಯುಮೋನಿಯಾದಿಂದ ಬಳಲುತ್ತಿದ್ದರು. ಜತೆಗೆ ಅವರಿಗೆ ಸಕ್ಕರೆ ಕಾಯಿಲೆಯೂ ಇತ್ತು ಎಂದು ವೈದ್ಯರು ಹೇಳಿದ್ದಾರೆ.
ನಾಸಿಕ್‌ನಲ್ಲಿ ವ್ಯಕ್ತಿ ಮೇಲೆ ನಿಗಾ
ಇಟಲಿಯಿಂದ ಆಗಮಿಸಿದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತೀವ್ರ ನಿಗಾದಲ್ಲಿ ಇರಿಸಲಾಗಿದೆ. ವ್ಯಾಸಂಗಕ್ಕೆಂದು ಇಟಲಿಗೆ ಹೋಗಿದ್ದ ಈತ ಫೆ.26ರಂದು ಸ್ವದೇಶಕ್ಕೆ ಮರಳಿದ್ದ. ಆತನಿಗೆ ಕಫ, ನೆಗಡಿ ಹಾಗೂ ತೀವ್ರ ಬಳಲಿಕೆ ಕಂಡುಬಂದ ಕಾರಣ, ನಿಗಾದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.