ಅದ್ಧೂರಿ ಸಿದ್ದಲಿಂಗೇಶ್ವರ ಮಹಾರಥೋತ್ಸವ

Team Udayavani, Mar 2, 2020, 3:00 AM IST

-adduri-sidda

ಕುಣಿಗಲ್‌: ತಾಲೂಕಿನ ತಪೋಕ್ಷೇತ್ರ ಕಗ್ಗೆರೆ ತೋಂಟದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ ಭಾನುವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಧ್ಯಾಹ್ನ 12.30 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡುವ ಮುನ್ನ ನಡೆದ ನಂದಿಧ್ವಜ ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಪಾಲ್ಗೊಂಡರು. ಅಂತಿಮವಾಗಿ ಶಾಸಕ ಡಾ.ರಂಗನಾಥ್‌ 1.11 ಲಕ್ಷ ರೂ.ಗೆ ಪ್ರಥಮ ಪೂಜೆ ಪಡೆದುಕೊಂಡರು. ನಂತರ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.

ಸ್ವಾಮೀಜಿ ಚಾಲನೆ: ಎಡೆಯೂರು ಬಾಳೆಹೊನ್ನೂರು ಶಾಖಾ ಮಠಾಧ್ಯಕ್ಷ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಹಾಗೂ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ದೇವಿ ಕ್ಷೇತ್ರದ ಬಾಲ ಮಂಜುನಾಥ್‌ ಸ್ವಾಮೀಜಿ ರಥದ ಗಾಳಿಗೆ ತೆಂಗಿನ ಕಾಯಿ ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಾಜ್ಯದ ಹಲವೆಡೆಯಿಂದ ಆಗಮಿಸಿದ್ದ ಭಕ್ತರು ಸುಡುವ ಬಿಸಿಲು ಲೆಕ್ಕಿಸದೆ ರಥಕ್ಕೆ ಹೂವು, ದವನ ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣ ಹಾಗೂ ದೇವಸ್ಥಾನ ಒಳಾಂಗಣ ಹೂವುಗಳಿಂದ ಅಲಂಕಾರ ಮಾಡಿದ್ದು, ಭಕ್ತರ ಗಮನ ಸೆಳೆಯಿತು.

ಗರ್ಭಗುಡಿಯಲ್ಲಿ ಸಿದ್ದಲಿಂಗೇಶ್ವರ ಸ್ವಾಮಿಯನ್ನು ವಿವಿಧ ನಮೂನೆಯ ಹಣ್ಣುಗಳಿಂದ ಮಾಡಿದ್ದ ಅಲಂಕಾರ ಭಕ್ತರ ಮನಸೋರೆಗೊಂಡಿತು. ಸಂಪ್ರದಾಯದಂತೆ ಸ್ಥಳೀಯ ಸೇರಿದಂತೆ ತಾಲ್ಲಕಿನ ನಾನಾ ಕಡೆಯಿಂದ ರಾತ್ರಿಯೇ ಅಗಮಿಸಿದ್ದ ಭಕ್ತರು ಅರಂಟಿಕೆ ಸಿದ್ಧಪಡಿಸಿ ರಥೋತ್ಸವ ನಂತರ ಎಲ್ಲ ಭಕ್ತರಿಗೆ ಪ್ರಸಾದ ಬಡಿಸಿದರು. ಇನ್ನೂ ಕೆಲವರು ಬಿಸಿಲಿನ ದಾಹ ತೀರಿಸಲು ನೀರು ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡಿದರು.

ಈ ಬಾರಿ ದೇವಾಲಯದ ಆಡಳಿತ ಮಂಡಳಿ ಭಕ್ತರಿಗೆ ಕುಡಿಯುವ ನೀರು, ಸ್ವತ್ಛತೆ ಹಾಗೂ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆಗೊಳಿಸಿ ರಥೋತ್ಸವ ಯಶಸ್ವಿಯಾಗಿ ನೆರವೇರಿಸಿದರು. ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಆಡಳಿತ ಮಂಡಳೀ ಕ್ರಮಕೈಗೊಂಡಿತ್ತು.

ಕುಣಿಗಲ್‌ ಹಿರೇಮಠ ಶಿವಕುಮಾರ ಸ್ವಾಮೀಜಿ, ಕಗ್ಗೆರೆ ಸಿದ್ದಲಿಂಗ ಸ್ವಾಮೀಜಿ, ಹುಲಿಯೂರುದುರ್ಗ ಸಿದ್ದಲಿಂಗ ಸ್ವಾಮೀಜಿ, ಎಡೆಯೂರು ದೇವಸ್ಥಾನದ ಕಾರ್ಯನಿವರ್ಹಣಾಧಿಕಾರಿ ಲಕ್ಷಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಸ್‌.ಆರ್‌.ಚಿಕ್ಕಣ್ಣ, ಪಂಡಿತ್‌, ವೈ.ವಿ.ಗೋವಿಂದರಾಜು, ದಾಸೋಹ ಸಮಿತಿ ನಿಟ್ಟೂರು ಬೆಲ್ಲದ ಪ್ರಕಾಶ್‌, ಕಗ್ಗೆರೆ ದೇವಸ್ಥಾನದ ವ್ಯವಸ್ಥಾಪಕ ಹನುಮಂತಯ್ಯ ಹಾಜರಿದ್ದರು.

ವಿಶೇಷ ಭೋಜನ: ಕುಣಿಗಲ್‌ ತಾಲೂಕಿನ ಕೊತ್ತಗೆರೆ ಗ್ರಾಮದ ಭಕ್ತರ ಆಯೋಜಿಸಿದ್ದ ಅರವಟಿಂಕೆಯಲ್ಲಿ ಕೊತ್ತಲಸಿನ ಸಾರು, ಮುದ್ದೆ, ಪಾಯಸ, ಅನ್ನ ಮಜ್ಜಿಗೆ ವಿಶೇಷ ಭೋಜನಕ್ಕೆ ಭಕ್ತರು ಮುಗಿಬಿದ್ದು, ಸರತಿ ಸಾಲಿನಲ್ಲಿ ನಿಂತು ಕೊತ್ತಲಸಿನ ಸಾರು ಸವಿದರು. ಪ್ರತಿವರ್ಷ ಕೊತ್ತಗೆರೆ ಗ್ರಾಮದ ಭಕ್ತರು ಈ ವಿಶೇಷ ಕೊತ್ತಲಸಿನ ಸಾರಿನ ಖ್ಯಾದ್ಯ ತಯಾರಿಸಿ ಭಕ್ತರಿಗೆ ಬಡಿಸುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.