ತೈಲ ವರ್ತಕರ ಸಮಸ್ಯೆ ಪರಿಹಾರಕ್ಕೆ ಕೈಜೋಡಿಸುವೆ: ಹೆಗ್ಡೆ

ಉಡುಪಿಯಲ್ಲಿ ತೈಲ ಸಮಾಗಮ -2020 ಸಮಾರೋಪ

Team Udayavani, Mar 2, 2020, 5:25 AM IST

Petroleum

ಉಡುಪಿ: ಪೆಟ್ರೋಲಿಯಂ ವರ್ತಕರಿಗೆಇರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಮೊರೆ ಹೋಗಬೇಕಾಗಿದೆ. ಈ ನೆಲೆಯಲ್ಲಿ ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳವು ರಾಜ್ಯದ ಎಲ್ಲ ಸಂಸದರಿಗೆ ಸಮಸ್ಯೆ,ತೊಡಕುಗಳನ್ನು ವಿವರಿಸಿ ಅವರು ಒಕ್ಕೊರಲಿನಿಂದ ಸಮಸ್ಯೆಯನ್ನು ಲೋಕಸಭೆಯಲ್ಲಿ ಎತ್ತಿ ಹಿಡಿದು ಚರ್ಚಿಸಿದಾಗ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆದುದರಿಂದ ಸಂಘಟನೆಯು ಸಂಸದರನ್ನು ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸಬೇಕೆಂದು ಕೇಳಿಕೊಳ್ಳಬೇಕಾಗಿದೆ. ತೈಲ ವರ್ತಕರ ಸಮಸ್ಯೆಗಳಿಗೆ ಪರಿಹಾರವನ್ನು ಕೇಳಲು ಸಂಘಟನೆಯೊಂದಿಗೆ ನಾನು ಕೈಜೋಡಿಸುತ್ತೇನೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್‌ ಹೆಗ್ಡೆ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳ ಆಶ್ರಯದಲ್ಲಿ ದ.ಕ., ಉಡುಪಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘ ಮಂಗಳೂರು ಸಹಭಾಗಿತ್ವದಲ್ಲಿ ಉಡುಪಿ ಹೊಟೇಲ್‌ ಲಿಗಾಡೊದಲ್ಲಿ ರವಿವಾರ ನಡೆದ ತೈಲ ಸಮಾಗಮ-2020 ಸಮಾರೋಪ ಸಮಾರಂಭದಲ್ಲಿ ನೂತನ ವೆಬ್‌ಸೈಟ್‌ ಅನ್ನು ಅವರು ಅನಾವರಣಗೊಳಿಸಿ ಮಾತನಾಡಿದರು.

ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಇದುವರೆಗೆ ಉಡುಪಿಯಲ್ಲಿ ನಡೆದ ಯಾವುದೇ ಸಮಾವೇಶದಲ್ಲಿ ಉದ್ಘೋಷಗೊಂಡ ವಿಚಾರಧಾರೆಯು ಬಹುತೇಕ ಈಡೇರಿದ ಇತಿಹಾಸವಿದೆ. ತೈಲ ವರ್ತಕರ ಸಮಸ್ಯೆಗೂ ಸೂಕ್ತ ಪರಿಹಾರ ಖಂಡಿತವಾಗಿ ದೊರಕಲಿದೆ ಎನ್ನುವ ವಿಶ್ವಾಸವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ ಮಾತನಾಡಿ, ರಾಜ್ಯದ ಎಲ್ಲ ಪೆಟ್ರೋಲಿಯಂ ವರ್ತಕ
ಬಂಧುಗಳನ್ನು ಒಂದೆಡೆ ಸೇರಿಸಿ ಉದ್ಯಮಕ್ಕೆ ಸಂಬಂಧಪಟ್ಟ ವಿಚಾರಗಳ ವಿನಿಮಯ, ಪರಸ್ಪರ ಪರಿಚಯ ಮತ್ತು ಸಂಘದ ಬಲವರ್ಧನೆಗಾಗಿ ತೈಲ ಸಮಾಗಮ -2020 ವನ್ನು ಆಯೋಜಿಸಲಾಗಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಆನಂದ್‌ ಕಾರ್ನಾಡ್‌, ಉಪಾಧ್ಯಕ್ಷರಾದ ರಾಜದೀಪ್‌ ಕೌಜಲಗಿ, ಕೆ.ವಿ. ಶೆಣೈ, ಅನೀಸ್‌ ಸನವುಲ್ಲಾ, ಮುಖ್ಯ ಸಂಯೋಜಕ ಸತೀಶ್‌ ಎನ್‌. ಕಾಮತ್‌, ಖಜಾಂಚಿ ವಿಶ್ವನಾಥ ಪಾಟೀಲ್‌, ದ.ಕ., ಉಡುಪಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘದ ಕಾರ್ಯದರ್ಶಿ ರಾಜೇಂದ್ರ ಕಟ್ಟೆ, ಉಪಾಧ್ಯಕ್ಷರಾದ ಆನಂದ ಎಂ., ಪ್ರಸಾದ್‌ ಹತ್ವಾರ್‌, ಮುರಳೀಧರ ಪ್ರಭು ಮತ್ತು ಉಭಯ ಸಂಘಟನೆಗಳ ಸರ್ವ ಸದಸ್ಯರು ಉಪಸ್ಥಿತರಿದ್ದರು.

ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳದ ಉಪಾಧ್ಯಕ್ಷ, ಸಮ್ಮೇಳನ ಸಮಿತಿ ಅಧ್ಯಕ್ಷ ಎಚ್‌.ಆರ್‌. ತಿವಾರಿ ಸ್ವಾಗತಿಸಿದರು. ದೈ.ಶಿ.ಶಿಕ್ಷಕ ಸತೀಶ್ಚಂದ್ರ
ಶೆಟ್ಟಿ ನಿರೂಪಿಸಿದರು. ಪೆಟ್ರೋಲಿಯಂ ವರ್ತಕರ ಸಂಘದ ಅಧ್ಯಕ್ಷ ವಾಮನ್‌ ಪೈ ವಂದಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.