ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಧಿಕೃತ ಆಹ್ವಾನ
ಮಾ. 7-8: ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ
Team Udayavani, Mar 2, 2020, 5:47 AM IST
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಮಾ.7, 8ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 3 ಸಾವಿರ ಮಂದಿ ಪತ್ರಕರ್ತರು ಸೇರುವ ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಲಾಯಿತು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರಿಗೆ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಡಾ| ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಸಮ್ಮೇಳನದ ಆಶಯ ನುಡಿಗಳನ್ನು ತರಂಗ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಡಾ| ಸಂಧ್ಯಾ ಎಸ್. ಪೈ ಅವರು ಆಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಗಣ್ಯರು ಭಾಗಿಯಾಗಲಿದ್ದಾರೆ ಎಂದರು.
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರೇಕಳ ಹಾಜಬ್ಬಅವರಿಗೆ ಸಮ್ಮಾನ ನಡೆಯಲಿದೆ. ಜತೆಗೆ ಪತ್ರಿಕೋದ್ಯಮಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕರಾವಳಿಯ ಹಿರಿಯ ಪತ್ರಕರ್ತರನ್ನು ಸಮ್ಮಾನಿಸಲಾಗುವುದು ಎಂದರು.
ಮಾ. 8ರಂದು ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂಗಳಾದ ಗೋವಿಂದ ಕಾರಜೋಳ, ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಗಣ್ಯರು ಭಾಗಿಯಾಗಲಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಆನಂದ ಶೆಟ್ಟಿ, ಭಾಸ್ಕರ ರೈ ಕಟ್ಟ, ಜಗನ್ನಾಥ ಶೆಟ್ಟಿ ಬಾಳ, ಹಾಸನ ಪತ್ರಕರ್ತರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರವಿ ನಾಕಲ್ಗೊàಡು, ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ, ತಾ| ಪತ್ರಕರ್ತರ ಸಂಘದಿಂದ ಕಾರ್ಯದರ್ಶಿ ಮನೋಹರ ಬಳಂಜ, ಶ್ರೀನಿವಾಸ ತಂತ್ರಿ, ಆರ್.ಎನ್.ಪೂವಣಿ, ಧನಕೀರ್ತಿ ಆರಿಗ ಉಪಸ್ಥಿತರಿದ್ದರು.
ಡಿ. ಹರ್ಷೆàಂದ್ರ ಕುಮಾರ್ ಅವರಿಗೆ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನೂ ಭೇಟಿ ಮಾಡಿ ಆಮಂತ್ರಿಸಲಾಯಿತು.
ಸಮ್ಮಾನ-ಪುರಸ್ಕಾರ
ವಿದ್ಯುನ್ಮಾನ ಮಾಧ್ಯಮ, ಆಕಾಶವಾಣಿ, ಮುದ್ರಣ ಮಾಧ್ಯಮ ಮತ್ತು ಸಮೂಹ ಮಾಧ್ಯಮಗಳಲ್ಲಿ ವೃತ್ತಿನಿರತರಾದ ಅನೇಕ ಮಹನೀಯರಿಗೆ ಸಮ್ಮಾನ -ಪುರಸ್ಕಾರ ನಡೆಯಲಿದೆ. ವಾರ್ಷಿಕ ಪ್ರಶಸ್ತಿಗಳ ವಿತರಣೆ ಕೂಡ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.