ಮಹದಾಯಿ ಯೋಜನೆ ಆರಂಭಕ್ಕೆ ಮನವಿ
Team Udayavani, Mar 2, 2020, 11:02 AM IST
ಹುಬ್ಬಳ್ಳಿ: ಮಲಪ್ರಭಾ, ಮಹದಾಯಿ, ಕಳಸಾ-ಬಂಡೂರಿ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರ ತಕ್ಷಣವೇ ಬಜೆಟ್ ನಲ್ಲಿ ಹಣ ಮೀಸಲಿರಿಸಿ ಕಾರ್ಯಾರಂಭ ಮಾಡಬೇಕೆಂದು ನವಲಗುಂದದ ಮಲಪ್ರಭಾ-ಮಹದಾಯಿ-ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ರೈತ ಹೋರಾಟ ಸಮಿತಿಯು ಕೃಷಿ ಸಚಿವ ಬಿ.ಸಿ. ಪಾಟೀಲ ಅವರನ್ನು ಆಗ್ರಹಿಸಿತು.
ನಗರದಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಮಿತಿ ಸದಸ್ಯರು, ಕೆರೆ ಭಾಗ್ಯ ಯೋಜನೆ ಮುಂದುವರಿಸಬೇಕು. ಅನುಗಾರರಿಗೆ ಗೌರವಧನ ನೀಡಬೇಕು. ಆರ್‌ಟಿಜಿಎಸ್ ಮಾಡಿದ ಕೂಡಲೇ ಉಪಕರಣಗಳು ರೈತರಿಗೆ ತಕ್ಷಣ ಸಿಗುವಂತಾಗಬೇಕು. ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ದುಪ್ಪಟ್ಟು ಹಣ ಬಿಡುಗಡೆಗೊಳಿಸಬೇಕು. ನವಲಗುಂದದಲ್ಲಿ ರೈತ ಸಂಪರ್ಕ ಕೇಂದ್ರ ತೆರೆಯಬೇಕು. ಖರೀದಿ ಕೇಂದ್ರದಲ್ಲಿ ಕಡ್ಲಿಯನ್ನು 20 ಕ್ವಿಂಟಲ್ ಖರೀದಿಸಬೇಕು. ಗೋವಿನಜೋಳದಬೆಂಬಲ ಬೆಲೆಗೆ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿದರು.
ಸುಭಾಸಚಂದ್ರಗೌಡ ಪಾಟೀಲ, ಮಲ್ಲೇಶ ಪತ್ತಾರ, ರಘುನಾಥ ನಡುವಿನಮನಿ, ಮಲ್ಲಪ್ಪ ಬನಗೊಣ್ಣವರ, ಸಂಗಪ್ಪ ನಿಡುವಣಿ, ಸಿದ್ದಲಿಂಗಪ್ಪ ಹಳ್ಳದ ಇದ್ದರು.
ರತ್ನಭಾರತ ರೈತ ಸಮಾಜ: ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕು. ರೈತರಿಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂ. ಬೆಳೆ ಪರಿಹಾರ ನೀಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ಮಹದಾಯಿ ಯೋಜನೆ ಕಾಮಗಾರಿಗೆ 2 ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ರಾಜ್ಯ ರತ್ನಭಾರತ ರೈತ ಸಮಾಜದ ರಾಜ್ಯ ಹಿರಿಯ ಗೌರವಾಧ್ಯಕ್ಷ ಹೇಮನಗೌಡ ಬಸನಗೌಡ್ರ, ವೀರಣ್ಣ ಮಳಗಿ, ವಿ.ಎಸ್. ಪಾಟೀಲ, ಕೆ.ಎಫ್. ಹಿರೇಮಠ, ಎಸ್.ವಿ. ಉಮರಾಣಿ ಮೊದಲಾದವರು ಸಚಿವರನ್ನು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.