ಬೆಳಗಾವಿ-ಕಡಪ ವಿಮಾನ ಸೇವೆಗೆ ಚಾಲನೆ
Team Udayavani, Mar 2, 2020, 12:42 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಉಡಾನ್ ಯೋಜನೆಯಡಿ ಈಗಾಗಲೇ ವಿವಿಧ ರಾಜ್ಯಗಳಿಗೆ ಸಂಪರ್ಕ ಹೊಂದಿರುವ ಬೆಳಗಾವಿ ಈಗ ಆಂಧ್ರಪ್ರದೇಶದ ಕಡಪ ನಗರಕ್ಕೆ ವಿಮಾನ ಸೇವೆ ಹೊಂದಿದೆ. ರವಿವಾರ ನಡೆದ ಸರಳ ಸಮಾರಂಭದಲ್ಲಿ ಬೆಳಗಾವಿ-ಕಡಪ ವಿಮಾನ ಸೇವೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ನೂತನ ವಿಮಾನ ಸೇವೆಗೆ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಮುಂಬೈ, ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ನಗರಗಳಿಗೆ ವಿಮಾನ ಸೇವೆ ಹೊಂದಿರುವ ಬೆಳಗಾವಿ ಈಗ ಕಡಪವರಗೆ ತನ್ನ ಸೇವೆಯನ್ನು ವಿಸ್ತರಿಸಿಕೊಂಡಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ನಗರಗಳಿಗೆ ವಿಮಾನ ಸಂಚಾರ ಸೇವೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಿಂದ ಆರಂಭವಾಗಿರುವ ಟ್ರೂಜೆಟ್ ನೂತನ ವಿಮಾನವು ಬೆಳಿಗ್ಗೆ 9.40 ಕ್ಕೆ ಬೆಳಗಾವಿಯಿಂದ ಹೊರಡಲಿದ್ದು ಸಂಜೆ 6 ಗಂಟೆಗೆ ಬೆಳಗಾವಿಗೆ ಆಗಮಿಸಲಿದೆ. ಒಟ್ಟು 70 ಆಸನಗಳ ಸಾಮರ್ಥ್ಯದ ವಿಮಾನದಲ್ಲಿ ಮೊದಲ ದಿನ 50 ಜನ ಪ್ರಯಾಣಿಕರು ಕಡಪಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ಹೇಮಂತ, ಪಿ ಎಸ್ ದೇಸಾಯಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.