ಮಾಸಿಕ ಪಾಸ್ ವಿತರಣೆ ತಾತ್ಕಾಲಿಕ ಸ್ಥಗಿತ
Team Udayavani, Mar 2, 2020, 1:20 PM IST
ಗದಗ: ರಾಜ್ಯ ಸರಕಾರ ಸಾರಿಗೆ ಸಂಸ್ಥೆ ಪ್ರಯಾಣ ಹೆಚ್ಚಿಸಿದ್ದರಿಂದ ಮಾಸಿಕ ಪಾಸ್ ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಪಾಸ್ ವಿತರಣೆ ಸ್ಥಗಿತಗೊಂಡಿದ್ದು, ತಿಂಗಳ ಆರಂಭದಲ್ಲಿ ಮಾಸಿಕ ಪಾಸ್ ಸಿಗದೇ ಸಾವಿರಾರು ಜನರ ಜನರು ಪರದಾಡುವಂತಾಗಿದೆ.
ಇತ್ತೀಚೆಗೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ವ್ಯಾಪ್ತಿಯ ಎಲ್ಲ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಕರ್ನಾಟ ರಾಜ್ಯ ಸಾರಿಗೆ ಸಂಸ್ಥೆ, ಬೃಹತ್ ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ಬಸ್ ಪ್ರಯಾಣ ದರವನ್ನು ಹೆಚ್ಚಿಸಿದೆ. ಅದರಂತೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯೂ ಪ್ರಯಾಣ ದರವನ್ನು ಹೆಚ್ಚಿಸುವುದರೊಂದಿಗೆ ಇದೀಗ ಮಾಸಿಕ ಪಾಸ್ ದರವನ್ನೂ ಪರಿಷ್ಕರಣೆಗೆ ಮುಂದಾಗಿದೆ. ಪರಿಣಾಮ ಕಳೆದ ಶುಕ್ರವಾರದಿಂದ ಗದಗ ಜಿಲ್ಲೆಯಲ್ಲಿ ಹೊಸ ಪಾಸ್ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಈಗಾಗಲೇ ಮುದ್ರಿತ ಪಾಸ್‌ಗಳನ್ನು ಕೇಂದ್ರ ಕಚೇರಿಗೆ ಮರಳಿಸಲಾಗಿದೆ. ಅವುಗಳ ಮೇಲೆ ಪರಿಷ್ಕೃತ ದರದ ಮೊಹರು ಹಾಕಿ, ಪೂರೈಕೆಯಾದ ಬಳಿಕ ಪ್ರಯಾಣಿಕರಿಗೆ ವಿತರಿಸಲಾಗುತ್ತದೆ. ಹೀಗಾಗಿ ಪಾಸ್ ಕೇಳುವವರಿಗೆ ಇನ್ನೂ 2- 3 ದಿನಗಳ ನಂತರ ಬರುವಂತೆ ಸೂಚಿಸಲಾಗುತ್ತಿದೆ ಎಂದು ಸಂಸ್ಥೆಯ ಹೆಸರು ಹೇಳಲಿಚ್ಛಿಸದ ಸಿಬ್ಬಂದಿ ಮಾಹಿತಿ ನೀಡಿದರು.
ಪಾಸ್‌ಗಾಗಿ ಪ್ರಯಾಣಿರ ಪರದಾಟ: ಜಿಲ್ಲೆಯ ವಿವಿಧೆಡೆಯಿಂದ ಗದಗ, ಮುಂಡರಗಿ, ನರಗುಂದ, ರೋಣ ಹಾಗೂ ಶಿರಹಟ್ಟಿ, ಲಕ್ಷ್ಮೇಶ್ವರ, ಗಜೇಂದ್ರಗಡ ಸೇರಿದಂತೆ ಹುಬ್ಬಳ್ಳಿ, ಕೊಪ್ಪಳ, ಬಾಗಲಕೋಟೆ ಹಾಗೂ ಹಾವೇರಿ ಜಿಲ್ಲೆಗಳಿಗೆ ಪ್ರತಿ ಸಾವಿರಾರು ಜನರು ಪ್ರತಿ ನಿತ್ಯ ಪ್ರಯಾಣಿಸುತ್ತಾರೆ. ಈ ಪೈಕಿ ಶಿಕ್ಷಕರು, ಬ್ಯಾಂಕ್ ಉದ್ಯೋಗಿಗಳೇ ಹೆಚ್ಚು. ಇನ್ನುಳಿದಂತೆ ವಿವಿಧ ಇಲಾಖೆಗಳ ನೌಕರರು, ಕಾರ್ಮಿಕರು, ವ್ಯಾಪಾರಸ್ಥರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಮಾಸಿಕ ಪಾಸ್ ಪಡೆದು ಪ್ರಯಾಣಿಸುತ್ತಾರೆ.
ಜಿಲ್ಲೆಯಲ್ಲಿ ಏಳು ತಾಲೂಕು ಸೇರಿದಂತೆ ಒಟ್ಟು 12 ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿ ಹಾಗೂ ಮಾಸಿಕ ಪಾಸ್ ವಿತರಿಸಲಾಗುತ್ತದೆ. ಆ ಪೈಕಿ ಗದಗ, ಮುಂಡರಗಿ, ಶಿರಹಟ್ಟಿ ಹಾಗೂ ರೋಣ ತಾಲೂಕಿನಲ್ಲಿ ಮಾಸಿಕ ಪಾಸ್ ದಾರರ ಸಂಖ್ಯೆ ಹೆಚ್ಚಿದ್ದು, ಪ್ರತಿ ನಿತ್ಯ ಆಯಾ ಬಸ್ ನಿಲ್ದಾಣಗಳಲ್ಲಿ ಪ್ರತೀ ತಿಂಗಳು 1 ರಿಂದ 10ನೇ ತಾರೀಖೀನವರೆಗೆ 70 ರಿಂದ 100, 25 ರಿಂದ 30ನೇ ತಾರೀಖೀನವರೆಗೆ ಸರಾಸರಿ 50 ರಿಂದ 60 ಪಾಸ್‌ಗಳು ವಿತರಣೆಯಾಗುತ್ತವೆ.
ಇನ್ನುಳಿದ ದಿನಗಳಲ್ಲಿ ಸರಾಸರಿ 50 ಪಾಸ್ ವಿತರಣೆಯಾಗುತ್ತವೆ. ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಮಧ್ಯಾಹ್ನದ ಬಳಿಕ ಪಾಸ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಅಲ್ಲಿವರೆಗೆ 33 ಪಾಸ್‌ಗಳ ವಿತರಣೆಯಾಗಿದ್ದು, 40 ಸಾವಿರ ರೂ. ಸಂಗ್ರಹಗೊಂಡಿತ್ತು ಎಂಬುದು ಮಾಸಿಕ ಪಾಸ್‌ಗೆ ಇರುವ ಬೇಡಿಕೆಯನ್ನು ಎತ್ತಿ ತೋರಿಸುತ್ತದೆ. ಆದರೆ, ತಿಂಗಳ ಆರಂಭದಲ್ಲೇ ತಿಂಗಳ ಪಾಸ್ ಪಡೆಯುವುದರಿಂದ ಶೇ.30ರಷ್ಟು ಹಣ ಉಳಿತಾಯವಾಗುತ್ತದೆ. ಆದರೆ, ಇದೀಗ ಪಾಸ್ ವಿತರಣೆ ಸ್ಥಗಿತಗೊಂಡಿದ್ದರಿಂದ ಸಾವಿರಾರು ಜನರು ಪ್ರತಿನಿತ್ಯ ಟಿಕೆಟ್ ಪಡೆದು ಪ್ರಯಾಣಿಸುವಂತಾಗಿದ್ದು, ಜೇಬಿಗೆ ಕತ್ತರಿ ಬೀಳುತ್ತಿದೆ ಎಂಬುದು ಪ್ರಯಾಣಿಕರ ದೂರು.
ಸಾರಿಗೆ ಬಸ್ ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಮಾಸಿಕ ಪಾಸ್ ದರವನ್ನು ಮಾರ್ಗವಾರು ಪರಿಷ್ಕರಿಸಲಾಗಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಹೊಸ ಪಾಸ್ ವಿತರಿಸುತ್ತಿಲ್ಲ. ಪರಿಷ್ಕೃತ ದರ ನಮೋದಿಸಿರುವ ಪಾಸ್‌ಗಳು ಸೋಮವಾರ ಜಿಲ್ಲೆಗೆ ಆಗಮಿಸಲಿದ್ದು, ತ್ವರಿತಗತಿಯಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. – ಎಫ್.ಸಿ. ಹಿರೇಮಠ, ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ವಾ.ಕ.ರ.ಸಾ.ಸಂಸ್ಥೆ
-ವೀರೇಂದ್ರ ನಾಗಲದಿನ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.