ಸಲಹಾ ಕೇಂದ್ರಗಳಲ್ಲಿ ಎಲ್ಲರಿಗೂ ಉಚಿತ ಕಾನೂನು ನೆರವು
Team Udayavani, Mar 2, 2020, 4:18 PM IST
ಕುಷ್ಟಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ತಾಲೂಕು ಕಾನೂನು ಸಲಹಾ ಕೇಂದ್ರವನ್ನು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧಿಧೀಶರಾದ ಬಿ.ಎಸ್. ಹೊನ್ನುಸ್ವಾಮಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದನ್ವಯ ಕಾನೂನು ಸಲಹಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರಿಗೆ ನೇರವಾಗಿ ಕೋರ್ಟ್‌ಗೆ ಆಗಮಿಸುವುದಕ್ಕೆ ಭಯ ಇರುತ್ತದೆ. ಕಾನೂನು ಸಲಹೆ ಪಡೆಯಲಿಚ್ಛಿಸುವವರಿಗೆ ಅರ್ಜಿ ಅಗತ್ಯವಿಲ್ಲ. ನೇರವಾಗಿ ಕಾನೂನು ಸಲಹಾ ಕೇಂದ್ರಗಳನ್ನು ಸಂಪರ್ಕಿಸಬೇಕು. ಹೀಗಾಗಿ ಈ ಸಲಹಾ ಕೇಂದ್ರಗಳಲ್ಲಿ ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದಾಗಿದೆ.
ಅಪಘಾತದ ಪ್ರಕರಣಗಳಲ್ಲೂ ಪರಿಹಾರದ ವಿಚಾರವಾಗಿ ನೆರವು ಪಡೆಬಹುದಾಗಿದೆ. ಆರೋಪಿಗಳಿಗೆ ಕಾನೂನು ಅರಿವು ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಕಾನೂನು ಸಲಹಾ ಕೇಂದ್ರ ಅಂತಹವರಿಗೆ ಅರಿವು, ನೆರವು ನೀಡಲಿದೆ. ಆರೋಪಿಗಳಿಗೆ ಕಾನೂನು ನೆರವು ಪಡೆಯಲಿಚ್ಛಿಸುವವರಿಗೆ ಸೂಕ್ತ ಸಲಹೆ ನೀಡಲಿದೆ. ಈ ಸಲಹೆ ಕೇಂದ್ರಕ್ಕೆ ನ್ಯಾಯವಾದಿಯೊಬ್ಬರನ್ನು ನೇಮಿಸಲಿದೆ. ನಮ್ಮ ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಕೌಟುಂಬಿಕ ದೌರ್ಜನ್ಯ ನಡೆಯದಂತೆ ತಡೆಯುವುದು ಬಹು ಮುಖ್ಯವಾಗಿದೆ. ಇತ್ತೀಚಿನ ದಿನಮಾನದಲ್ಲಿ ಕುಟುಂಬದ ಸದಸ್ಯರ ನಡುವೆ ಪ್ರೀತಿ, ವಿಶ್ವಾಸ ಹೊಂದಾಣಿಕೆ ಮನೋಭಾವ ಕಡಿಮೆಯಾಗುತ್ತಿದೆ. ಜನರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಕಾನೂನಿನ ಅರಿವು ಮೂಡಿಸುವುದಾಗಿದೆ ಎಂದರು. ಹೆಚ್ಚುವರಿ ನ್ಯಾಯಾಧಿಧೀಶರಾದ ರಫೀಕ್ ಅಹ್ಮದ್, ಸಿಪಿಐ ಜಿ. ಚಂದ್ರಶೇಖರ, ಕೋರ್ಟ್ ಪಿಸಿ ಮಂಜುನಾಥ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.