ಚಿಂತಕರ ಬದಲಿಗೆ ಹಂತಕರ ಪಡೆ ಸೃಷ್ಟಿಸುತ್ತಿರುವ ಬಿಜೆಪಿ: ಡಾ.ಸಿದ್ದಣ್ಣಗೌಡ ಪಾಟೀಲ ಆರೋಪ
Team Udayavani, Mar 2, 2020, 5:00 PM IST
ಕಲಬುರಗಿ: ನಮ್ಮ ನಾಡಿಗೆ ಬೇಕಾಗಿರುವುದು ಚಿಂತಕರ ಪಡೆ. ಆದರೆ ಮೂಲ ಸಮಸ್ಯೆಗಳನ್ನು ಮರೆಮಾಚಲು ಬಿಜೆಪಿ ಹಂತಕರ ಪಡೆಯನ್ನು ಸೃಷ್ಟಿಸುತ್ತಿದೆ ಎಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಡಾ.ಸಿದ್ದಣ್ಣಗೌಡ ಪಾಟೀಲ ದೂರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಅನಂತಕುಮಾರ ಹೆಗಡೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅಂತಹವರನ್ನು ಮುಂದೆ ಬಿಟ್ಟು, ಅಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿಸಲಾಗುತ್ತಿದೆ. ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಈಶ್ವರಪ್ಪನಂತಹ ಹಿರಿಯ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಟ್ಲರ್ ಮಾದರಿಯ ಪ್ರಚಾರ ತಂತ್ರ ಎಂದು ಟೀಕಿಸಿದರು.
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧದ ಯತ್ನಾಳ್ ಹೇಳಿಕೆಗಳು ಸಹ ಉದ್ದೇಶ ಪೂರ್ವಕವಾಗಿ ಕೂಡಿವೆ. ಗೋಲಿ ಮಾರೋ ಹೇಳಿಕೆ ಸಹ ಬಿಜೆಪಿಯಿಂದಲೇ ಬಂದಂತದ್ದು. ಪ್ರಧಾನಿ ಮೋದಿ, ಬಿಜೆಪಿ ಪಕ್ಷವನ್ನು ಪ್ರಶ್ನೆ ಮಾಡಬಾರದು ಮನೋಭಾವ ಬಿತ್ತಲಾಗುತ್ತದೆ. ಪ್ರಶ್ನೆ ಮಾಡಿದರೆ ದೇಶದ್ರೋಹಿ ಎಂದು ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಪಾಕಿಸ್ತಾನದ ಭಜನಾ ಮಂಡಳಿಯಾಗಿದೆ. ದೇಶದ ಆರ್ಥಿಕತೆ ಕುಸಿತ, ರೈತರ ಸಮಸ್ಯೆ ಹಾಗೂ ಬ್ಯಾಂಕ್ ಗಳ ದಿವಾಳಿತನಂತಹ ವಾಸ್ತವ ಅಂಶಗಳನ್ನು ಮರೆಮಾಚಲು ನಿರ್ಧಿಷ್ಟ ಜನಾಂಗವನ್ನು ಎತ್ತಿಕಟ್ಟುವ ವ್ಯವಸ್ಥಿತವಾದ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.