ಚೌಡಯ್ಯ ಮೂರ್ತಿ ಅನಾವರಣಕ್ಕೆ ಅದ್ಧೂರಿ ಸಿದ್ಧತೆ

9 ಕುದುರೆಯುಳ್ಳ ರಥದಲ್ಲಿ ಡಿಸಿಎಂ ಮೆರವಣಿಗೆ | ಸೊಲ್ಲಾಪುರದ ಎರಡು ಆನೆಗಳ ಬಳಕೆ

Team Udayavani, Mar 2, 2020, 6:13 PM IST

2-March-35

ಸೇಡಂ: ಹಾಗರಗುಂಡಗಿಯಲ್ಲಿ ನಡೆಯಲಿರುವ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯನ್ನು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಉದ್ಘಾಟಿಸಿದರು.

ಸೇಡಂ: ಫರತಾಬಾದ ತಾಲೂಕಿನ ಹಾಗರಗುಂಡಗಿಯಲ್ಲಿ ಮಾ.8ರಂದು ನಡೆಯುವ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮದ ಮೆರವಣಿಗೆಯಲ್ಲಿ ಉಪ ಮುಖ್ಯಮಂತ್ರಿ ಡಾ| ಅಶ್ವತ್ಥ ನಾರಾಯಣ ಅವರನ್ನು ಒಂಭತ್ತು ಕುದುರೆಗಳುಳ್ಳ ರಥದಲ್ಲಿ ಮೆರವಣಿಗೆ ಮಾಡಲಾಗುವುದು ಎಂದು ಮಾಜಿ ಸಚಿವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ತಿಳಿಸಿದರು.

ಫರತಾಬಾದ ತಾಲೂಕಿನ ಹಾಗರಗುಂಡಗಿಯಲ್ಲಿ ಮಾ. 8ರಂದು ನಡೆಯುವ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋಲಿ ಸಮಾಜದವರು ಆಂತರಿಕ ದ್ವೇಷ ಬದಿಗೊತ್ತಿ ಒಗ್ಗಟ್ಟಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶ್ವಮಟ್ಟದಲ್ಲಿ ಸಮಾಜದ ಶಕ್ತಿ ತೋರಿಸಬೇಕು. ಹೀಗಾದಲ್ಲಿ ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಲು ಅನುಕೂಲ ಆಗುವುದಲ್ಲದೇ, ರಾಜ್ಯದಲ್ಲಿ ಹತ್ತಾರು ಶಾಸಕರು, ಒಂದಿಬ್ಬರು ಸಚಿವರು ಅಧಿಕಾರಕ್ಕೆ ಬರಬಹುದು. ಶೈಕ್ಷಣಿಕ ಮತ್ತು ಉದ್ಯೋಗಿಕ ರಂಗದಲ್ಲಿ ಮೀಸಲಾತಿ ದೊರೆಯಲಿದೆ. ಈ ಮೂಲಕ ಸಮಾಜದ ಶಕ್ತಿ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವ ಶಪಥ ಮಾಡಲಾಗಿದೆ ಎಂದು ಹೇಳಿದರು. ನಾನು ಮತ್ತು ನನ್ನ ಪತ್ನಿ ಕೊನೆ ಉಸಿರಿರುವತನಕ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವುದಕ್ಕಾಗಿಯೇ ಹೋರಾಡುತ್ತೇವೆ ಎಂದು ಪುನರುತ್ಛರಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶಿವಕುಮಾರ ನಿಡಗುಂದಾ ಮಾತನಾಡಿ, ಕಣಿವೆ ರಾಜ್ಯದಲ್ಲಿ ತಳವಾರ ಸಮುದಾಯದವರನ್ನು ಎಸ್ಟಿಗೆ ಸೇರಿಸಲಾಗಿದೆ. ಹೀಗಾಗಿ ಕೋಲಿ ಸಮಾಜ ಬಾಂಧವರು ಮತ್ತಷ್ಟು ಶಕ್ತಿ ಪ್ರದರ್ಶಿಸುವ ಅವಶ್ಯಕತೆ ಇದೆ ಎಂದರು.

ಕೋಲಿ ಸಮಾಜದ ಗೌರವಾಧ್ಯಕ್ಷ ಭೀಮರಾವ್‌ ಮುತ್ಯಾಲ, ತಾಲೂಕು ಅಧ್ಯಕ್ಷ ಶ್ರೀನಾಥ ಪಿಲ್ಲಿ, ಉದ್ಯಮಿ ಲಚ್ಚಪ್ಪ ಜಮಾದಾರ, ಮಾಜಿ ಅಧ್ಯಕ್ಷ ಭೀಮರಾವ್‌ ಅಳ್ಳೊಳ್ಳಿ, ಸೋಮಶೇಖರ ಬಿಬ್ಬಳ್ಳಿ, ಮಲ್ಲಿಕಾರ್ಜುನ ಗುಡ್ಡದ, ನಾಗಪ್ಪ ಕೊಳ್ಳಿ, ಶ್ಯಾಮಪ್ಪ ಕೋಲಿ, ವೆಂಕಟೇಶ ಬಿಲಕಲ್‌, ನಾಗೇಂದ್ರಪ್ಪ ಲಿಂಗಂಪಲ್ಲಿ, ಮಲ್ಲಿಕಾರ್ಜುನ ಮುತ್ಯಾಲ, ಹಣಮಂತಪ್ಪ, ರಾಘವೇಂದ್ರ ಮೆಕ್ಯಾನಿಕ್‌, ಮಲ್ಲಿಕಾರ್ಜುನ ಬ್ಯಾಂಡ್ಲೆ, ಪ್ರವೀಣ ಕೋಡ್ಲಾ, ಮುರುಗೇಶ ಇನ್ನಿತರರು ಇದ್ದರು.ಸಮಾಜದ ಮಾಜಿ ಕಾರ್ಯಾಧ್ಯಕ್ಷ ಶರಣಪ್ಪ ಎಳ್ಳಿ ಪ್ರಾರ್ಥಿಸಿದರು, ವೆಂಕಟೇಶ ಬಿಲಕಲ್‌ ವಂದಿಸಿದರು.

ಟಾಪ್ ನ್ಯೂಸ್

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.