ಜನಪ್ರತಿನಿಧಿ ಅಧಿಕಾರದ ಹಿಂದೆ ಓಡದೇ ಜನರ ಸಮಸ್ಯೆ ಆಲಿಸಬೇಕು
Team Udayavani, Mar 3, 2020, 3:00 AM IST
ಚನ್ನರಾಯಪಟ್ಟಣ/ಹಿರೀಸಾವೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿ ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡುವುದನ್ನು ಬಿಟ್ಟು ಜನಸಾಮಾನ್ಯರನ್ನು ಭೇಟಿ ಮಾಡಿ ಅವರ ಕಷ್ಟ-ಸುಖದಲ್ಲಿ ಭಾಗಿಯಾಗುವುದನ್ನು ರೂಢಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಹಿರೀಸಾವೆ ಹೋಬಳಿ ಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಲವು ಶಾಸಕರಿಗೆ ಪಕ್ಷ ನಿಷ್ಠೆ ಕಡಿಮೆಯಾಗುತ್ತಿದೆ. ಅಧಿಕಾರದ ಹಿಂದೆ ಓಡುವುದನ್ನು ರೂಢಿಸಿಕೊಂಡಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿ ಅವರ ಅಭಿವೃದ್ಧಿ ಮಾತ್ರ ಆಗುತ್ತಿದೆ ಇಂತಹವರಿಗೆ ಜನರು ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.
ಜನರ ಸಂಕಷ್ಟಗಳಿಗೆ ಸ್ಪಂದಿಸುವೆ: ನಾನು ಇಲ್ಲಿ ಯಾವುದೇ ರಾಜಕೀಯ ವಿಚಾರ ಮಾತನಾಡುವುದಿಲ್ಲ. ನಮ್ಮದೇನಿದ್ದರೂ ಚುನಾವಣೆಯ ವೇಳೆಯಲ್ಲಿ ಮಾತ್ರ ರಾಜಕೀಯ. ಉಳಿದಂತೆ ಜನರ ನಡುವೆ ಇದ್ದು ಅವರ ಸಂಕಷ್ಟಗಳಿಗೆ ಸ್ವಂದಿಸುವುದನ್ನು ನಮ್ಮ ತಂದೆಯವರು ಕಲಿಸಿದ್ದಾರೆ. ಅದರಂತೆ ಜನರ ಬಳಿ ಇರತೇ¤ನೆ. ನನ್ನನ್ನು ಅರಸಿ ಬಂದವರನ್ನು ಗಮನಿಸದೇ ಮುಂದೆ ಹೋಗುವ ಅಭ್ಯಾಸ ನನಗಿಲ್ಲ. ಆದರೆ ನನ್ನೊಂದಿಗೆ ಇದ್ದವರು ನನಗೆ ತೊಂದರೆ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ತಂದೆಯವರು ನಡೆದು ಬಂದಿರುವ ಹಾದಿಯಲ್ಲಿ ಹೆಜ್ಜೆ ಇಡುತ್ತ ಜನಸೇವೆ ಮಾಡುವುದೊಂದೆ ನನ್ನ ಕೆಲಸ. ನಮ್ಮ ಸರ್ಕಾರ ಇರಲಿ ಇಲ್ಲದಿರಲಿ ಜನರಿಗೆ ನೆರವಾಗುವ ಕಾಯಕ ನಿಲ್ಲುವುದಿಲ್ಲ. ಜನತೆಯ ನಡುವೆ ಸಾಮಾನ್ಯನಂತೆ ನಿಂತು ರಾಜ್ಯದ ಹಿತಕ್ಕಾಗಿ ದುಡಿಯುವುದನ್ನು ಹೊರತುಪಡಿಸಿ ನನಗೆ ಬೇರೆ ಏನೂ ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಮೈತ್ರಿ ಸರ್ಕಾರದ ವೇಳೆ ತಾಲೂಕಿನ ತೋಟಿಕೆರೆ, ಆಲಗೊಂಡನಹಳ್ಳಿ, ಕಾಚೇನಹಳ್ಳಿ ಸೇರಿದಂತೆ ಬಹುತೇಕ ಏತನೀರಾವರಿ ಯೋಜನೆಗಳಿಗೆ ಹಣ ಮಂಜೂರು ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ನಮ್ಮ ಸರ್ಕಾರದ್ದ ವೇಳೆ ತಿಂಗಳಿಗೆ 15 ಬಾರಿ ನನ್ನ ಬಳಿ ಬಂದು ತಾಲೂಕಿನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಕೆಲಸ ಪಡೆದು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಜಿ.ರಾಮಕೃಷ್ಣ, ತುಮಕೂರು ಜಿಲ್ಲಾ ವೀಕ್ಷಕ ಎಚ್.ಎನ್.ಲೋಕೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ದೇವರಾಜೇಗೌಡ, ದಿಡಗ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಕುಮಾರ್, ಪ್ರಮುಖರಾದ ಯೋಗೇಶ್ ಹಾಗೂ ಇತರರು ಹಾಜರಿದ್ದರು.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕೇವಲ ಕೋಲಾಹಲವನ್ನು ಸೃಷ್ಟಿಸುವ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಪಾದಿಸಿದರು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಒಂದು ಪಕ್ಷ ಅಧಿಕಾರಲ್ಲಿ ಇದ್ದರೆ ಶರವೇಗದಲ್ಲಿ ರಾಜ್ಯ ಅಭಿವೃದ್ಧಿ ಹೊಂದುತ್ತದೆ ಎಂದು ರಾಜ್ಯದ ಜನರಿಗೆ ಭರವಸೆ ನೀಡಿದಲ್ಲದೇ ಹಲವು ಶಾಸಕರನ್ನು ತಮ್ಮೆಡೆಗೆ ಸೆಳೆಸು ಅಧಿಕಾರದ ಗದ್ದುಗೆ ಏರಿದರು. ಆದರೆ ಇಂದು ರಾಜ್ಯದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ: ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಸತತ 15 ವರ್ಷಗಳಿಂದ ಬರದ ಬೇಗೆ ಎದುರಿಸುತ್ತಿದ್ದ ಚನ್ನರಾಯಪಟ್ಟಣ ತಾಲೂಕನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರ ಸ್ವಾಮಿ ಅವರು ಏತನೀರಾವರಿ ಯೋಜನೆಯಡಿ ತಾಲೂಕಿನ 80 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿದ್ದಾರೆ. ಇದರಿಂದ ವ್ಯಾಪ್ತಿಯ ಅಂತರ್ಜಲ ಹೆಚ್ಚುವುದರ ಜತೆಗೆ ಸುಮಾರು 120 ಗ್ರಾಮಗಳಿಗೆ ಅನುಕೂಲವಾಗಿದೆ. ಸದ್ಯ ದಿಡಗ-ಕಬ್ಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಂಡಿದ್ದು ವಿಸ್ತೃತ ಯೋಜನಾ ವರದಿ (ಡಿಪಿಆರ್) ಮುಗಿದು ಪ್ರಸ್ತಾವನೆಯ ಹಂತದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.